ಹಿಮಾಚಲ ಪ್ರದೇಶ | ಭಾರಿ ಮಳೆಗೆ ಮೃತರ ಸಂಖ್ಯೆ 60ಕ್ಕೆ ಏರಿಕೆ; ಶಾಲಾ, ಕಾಲೇಜುಗಳಿಗೆ ರಜೆ

Date:

ಕಳೆದ ಒಂದು ವಾರದಿಂದ ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದ ಉಂಟಾದ ಭೂಕುಸಿತಗಳು ಮತ್ತು ಪ್ರವಾಹದಿಂದಾಗಿ ಕನಿಷ್ಠ 60 ಜನರು ಸಾವನ್ನಪ್ಪಿದ್ದಾರೆ.

ರಾಜಧಾನಿ ಶಿಮ್ಲಾದ ಸಮ್ಮರ್ ಹಿಲ್, ಕೃಷ್ಣ ನಗರ ಮತ್ತು ಫಾಗ್ಲಿಯಲ್ಲಿ ಭಾನುವಾರದಿಂದ 12ಕ್ಕೂ ಹೆಚ್ಚು ಭೂಕುಸಿತಗಳು ಸಂಭವಿಸಿದ್ದು, ಸಮ್ಮರ್ ಹಿಲ್‌ನಲ್ಲಿ ಇಂದು ಬೆಳಿಗ್ಗೆ ಒಬ್ಬರು ಸಾವನ್ನಪ್ಪಿದ್ದಾರೆ.

ಸಮ್ಮರ್ ಹಿಲ್‌ನಲ್ಲಿನ ಅವಶೇಷಗಳಿಂದ 13, ಫಾಗ್ಲಿಯಿಂದ ಐದು ಮತ್ತು ಕೃಷ್ಣನಗರದಲ್ಲಿ ಎರಡು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸೋಮವಾರ ಕುಸಿದ ದೇವಾಲಯದ ಅವಶೇಷಗಳಲ್ಲಿ ಇನ್ನೂ ಹಲವರು ಸಮಾಧಿಯಾಗಿರುವ ಶಂಕೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ನೆಹರು ವಸ್ತು ಸಂಗ್ರಹಾಲಯ ಹೆಸರು ಬದಲಾವಣೆ: ಪ್ರಧಾನಿಯ ಸೇಡಿನ ರಾಜಕಾರಣ ಎಂದ ಕಾಂಗ್ರೆಸ್

ನಿನ್ನೆ ಸಂಜೆ ಶಿಮ್ಲಾದ ಹೃದಯ ಭಾಗದಲ್ಲಿರುವ ಕೃಷ್ಣ ನಗರದಲ್ಲಿ ಎಂಟು ಮನೆಗಳ ಸುತ್ತ ಭೂಕುಸಿತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಸೋಲನ್ ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದ ಮೇಘಸ್ಫೋಟ ಘಟನೆಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ.

ತಗ್ಗು ಪ್ರದೇಶಗಳಿಂದ 800ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಮತ್ತು ಸ್ಥಳಾಂತರಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಅವರು ಇಂದು (ಆಗಸ್ಟ್ 16) ಹೆಲಿಕಾಪ್ಟರ್‌ನಿಂದ ರಕ್ಷಿಸಲ್ಪಟ್ಟ ನಾಗರಿಕರ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

“ಕಳೆದ ಮೂರು ದಿನಗಳಲ್ಲಿ ಸಾವಿನ ಸಂಖ್ಯೆ 60ಕ್ಕೆ ಏರಿದೆ. ರಚನಾತ್ಮಕ ಮಾನದಂಡಗಳು ಮತ್ತು ಒಳಚರಂಡಿ ಸಮಸ್ಯೆಗಳನ್ನು ಪರಿಹರಿಸುವ ಸಭೆಯನ್ನು ಕರೆಯಲಾಗಿದೆ. ಮಳೆಯಿಂದ ಸಾಕಷ್ಟು ಹಾನಿಯಾಗಿದೆ, ಮರುಸ್ಥಾಪನೆಗೆ ಸಾಕಷ್ಟು ಸಮಯ ಹಿಡಿಯುತ್ತದೆ” ಎಂದು ತಿಳಿಸಿದ್ದಾರೆ.

ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಆಗಸ್ಟ್ 19 ರವರೆಗೆ ರಾಜ್ಯದಾದ್ಯಂತ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಹಿಮಾಚಲ ಪ್ರದೇಶ ವಿಶ್ವವಿದ್ಯಾಲಯ ಕೂಡ ಅಲ್ಲಿಯವರೆಗೆ ಬೋಧನಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದೆ.

ಭೂಕುಸಿತದಿಂದಾಗಿ ರಾಜ್ಯದಲ್ಲಿ ಕನಿಷ್ಠ 800 ರಸ್ತೆಗಳು ಮುಚ್ಚಿಹೋಗಿವೆ. ಈ ಮುಂಗಾರು ಋತುವಿನಲ್ಲಿ ರಾಜ್ಯವು ಸಾವಿರಾರು ಕೋಟಿ ರೂ. ಮೌಲ್ಯದ ನಷ್ಟವನ್ನು ಅನುಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಮಾಚಲ ಪ್ರದೇಶ ಮತ್ತು ನೆರೆಯ ಉತ್ತರಾಖಂಡ ರಾಜ್ಯಗಳಲ್ಲಿ ಹೆಚ್ಚು ಮಳೆ ಬೀಳುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ನೆರವು ಕೋರಿದ್ದು, ಹಿಮಾಚಲ ಪ್ರದೇಶವನ್ನು ವಿಪತ್ತು ಪೀಡಿತ ರಾಜ್ಯ ಎಂದು ಘೋಷಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...