ಕೊಲ್ಕತ್ತಾದಲ್ಲಿ ಮತ್ತೊಂದು ಅತ್ಯಾಚಾರ ಕೃತ್ಯ; ಕಾಲು ಹಿಡಿದು ಬೇಡಿಕೊಂಡರೂ ಬಿಡದ ಕಾಮುಕರು

Date:

ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಇತ್ತೀಚೆಗೆ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶಾದ್ಯಂತ ಆಕ್ರೋಶ ಕಾರಣವಾಗಿತ್ತು. ಆ ಘಟನೆಯ ಆತಂಕ ಮಾಸುವ ಮುನ್ನವೇ ಕೋಲ್ಕತ್ತಾದಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಕೃತ್ಯ ಬುಧವಾರ ತಡರಾತ್ರಿ ನಡೆದಿದೆ. ಕೃತ್ಯದ ಬಗ್ಗೆ ಪೊಲೀಸರ ಬಳಿ ಮೊದಲ ಬಾರಿಗೆ ಹೇಳಿಕೆ ದಾಖಲಿಸಿರುವ ಸಂತ್ರಸ್ತೆ, ‘ಕಾಲು ಹಿಡಿದು ಬೇಡಿಕೊಂಡರೂ ಕಾಮುಕರು ಬಿಡಲಿಲ್ಲ’ ಎಂದು ಹೇಳಿದ್ದಾರೆ.

ಬುಧವಾರ ತಡರಾತ್ರಿ, ಕೊಲ್ಕತ್ತಾ ಕಾನೂನು ಕಾಲೇಜಿನ ಸೆಕ್ಯುರಿಟಿ ಕೊಠಡಿಯಲ್ಲಿ ಮೂವರು ಕಾಮುಕರು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಕಾಲೇಜಿನ ಸೆಕ್ಯುರಿಟಿಗೆ ಬೆದರಿಕೆ ಹಾಕಿ, ಆತನನ್ನು ಕೊಠಡಿಯಿಂದ ಹೊರ ಕಳಿಸಿ, ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಕರಣ ಸಂಬಂಧ ಪೊಲೀಸರಿಗೆ ಹೇಳಿಕೆ ನೀಡಿರುವ ಸಂತ್ರಸ್ತೆ, “ಬುಧವಾರ ಸಂಜೆ ಟಿಎಂಸಿ ವಿದ್ಯಾರ್ಥಿ ವಿಭಾಗದ ಸಭೆ ಇತ್ತು. ಸಭೆಯ ಬಳಿಕ ಹಾಸ್ಟೆಲ್‌ಗೆ ತೆರಳುವಾಗ ‘ಜೆ, ಎಂ ಮತ್ತು ಪಿ’ ಎಂಬ ಅಕ್ಷರಗಳಿಂದ ಗುರುತಿಲಾದ ಮೂವರು ನನ್ನನ್ನು ಎಳೆದೊಯ್ದರು. ‘ಜೆ’ ಎಂಬಾತ ನನ್ನ ಮೇಲೆ ಅತ್ಯಾಚಾರ ಎಸಗಿದ್ದು, ‘ಎಂ ಮತ್ತು ಪಿ’ ಎಂಬವರು ಕೃತ್ಯವನ್ನು ನೋಡುತ್ತ ನಿಂತಿದ್ದರು” ಎಂದು ವಿವರಿಸಿದ್ದಾರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಮುಕರ ದಾಳಿಯನ್ನು ನಾನು ವಿರೋಧಿಸಿದೆ. ಅವರ ಕಾಲು ಹಿಡಿದು ಬೇಡಿಕೊಂಡೆ. ಆದರೆ, ಅವರು ನನ್ನನ್ನು ಬಿಡಲಿಲ್ಲ” ಎಂದು ಹೇಳಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೂವರು ಆರೋಪಿಗಳನ್ನೂ ಬಂಧಿಸಿದ್ದಾರೆ.

ಬಂಧಿತರನ್ನು ಮನೋಜಿತ್ ಮಿಶ್ರಾ (ಮಾಜಿ ವಿದ್ಯಾರ್ಥಿ ಮತ್ತು ತಾತ್ಕಾಲಿಕ ಸಿಬ್ಬಂದಿ), ಝೈಬ್ ಅಹ್ಮದ್ (ಪ್ರಥಮ ವರ್ಷದ ಕಾನೂನು ವಿದ್ಯಾರ್ಥಿ), ಹಾಗೂ ಪ್ರಮಿತ್ ಮುಖರ್ಜಿ (ಇನ್ನೊಬ್ಬ ವಿದ್ಯಾರ್ಥಿ) ಎಂದು ಗುರುತಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...