ಗುಜರಾತ್ | ದಲಿತ ವಿರೋಧಿ ಹೇಳಿಕೆ; ಜಿಲ್ಲಾಧಿಕಾರಿ ಅಮಾನತಿಗೆ ಜಿಗ್ನೇಶ್ ಮೇವಾನಿ ಆಗ್ರಹ

Date:

ಗುಜರಾತ್‌ನ ಮಹಿಸಾಗರ್ ಜಿಲ್ಲಾಧಿಕಾರಿ ನೇಹಾ ಕುಮಾರಿ ಅವರು ದಲಿತ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ಗುಜರಾತ್ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ, ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಆದರೆ ಜಿಲ್ಲಾಧಿಕಾರಿ ಮಾತ್ರ ದಲಿತ ವಿರೋಧಿ ಹೇಳಿಕೆ ಆರೋಪವನ್ನು ತಿರಸ್ಕರಿಸಿದ್ದಾರೆ.

ತಮ್ಮ ಮತ್ತು ತಮ್ಮ ಪಕ್ಷದ ಸಹೋದ್ಯೋಗಿಗಳೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ರಾಜ್‌ಕುಮಾರ್ ಪಾಂಡಿಯನ್ ಅವರನ್ನು ಅಮಾನತುಗೊಳಿಸಬೇಕು ಎಂದು ಜಿಗ್ನೇಶ್ ಮೇವಾನಿ ಒಂದು ವಾರದ ಹಿಂದಷ್ಟೇ ಅಗ್ರಹಿಸಿದ್ದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಅಥವಾ ದೌರ್ಜನ್ಯ ಕಾಯ್ದೆಯಡಿ ದಾಖಲಾದ ಶೇಕಡ 90ರಷ್ಟು ಪ್ರಕರಣಗಳು ಬ್ಲ್ಯಾಕ್‌ಮೇಲಿಂಗ್‌ಗೆ ಬಳಕೆಯಾಗುತ್ತಿದೆ ಎಂದು ಮಹಿಸಾಗರ್ ಜಿಲ್ಲಾಧಿಕಾರಿ ನೇಹಾ ಕುಮಾರಿ ಹೇಳಿದ್ದರು. ಈ ವಿಡಿಯೋವನ್ನು ಉಲ್ಲೇಖಿಸಿ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸಬೇಕು ಮೇವಾನಿ ಆಗ್ರಹಿಸಿದ್ದಾರೆ. ಜೊತೆಗೆ ಎಫ್‌ಐಆರ್ ದಾಖಲಿಸಬೇಕೆಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಗುಜರಾತ್ | ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ವಿಧಾನಸಭೆಯಿಂದ ಉಚ್ಚಾಟನೆ

ಇನ್ನು ಐಎಎಸ್ ಅಧಿಕಾರಿ ನೇಹಾ ಕುಮಾರಿ ಅವರು ಶಾಸಕ ಮೇವಾನಿ ಆರೋಪವು ‘ಆಧಾರರಹಿತ’ ಮತ್ತು ರಾಜಕೀಯ ಮೈಲೇಜ್ ಪಡೆಯುವ ವಿಫಲ ಪ್ರಯತ್ನ ಎಂದು ಬಣ್ಣಿಸಿದ್ದಾರೆ.

ವಿಜಯ್ ಪರ್ಮಾರ್ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಲು ಹೋದಾಗ ಜಿಲ್ಲಾಧಿಕಾರಿ ಕೆಟ್ಟದಾಗಿ ನಡೆಸಿದ್ದಾರೆ, ಅವಮಾನ ಮಾಡಿದ್ದಾರೆ. ದೌರ್ಜನ್ಯ ಕಾಯ್ದೆಯಡಿಯಲ್ಲಿನ ಶೇಕಡ 90ರಷ್ಟು ಪ್ರಕರಣಗಳನ್ನು ಬ್ಲ್ಯಾಕ್‌ಮೇಲಿಂಗ್‌ಗಾಗಿ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂಬ ಜಿಲ್ಲಾಧಿಕಾರಿಯ ಹೇಳಿಕೆಯು ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳಿಗೆ ಅವಮಾನವಾಗಿದೆ. ದೌರ್ಜನ್ಯ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಅಡಿಯಲ್ಲಿ ಅಪರಾಧವಾಗಿದೆ ಎಂದು ಮೇವಾನಿ ಹೇಳಿದ್ದಾರೆ.

“ಶಾಸಕರ ಅಮಾಯಕ ಯುವ ಸ್ನೇಹಿತ (ವಿಜಯ್ ಪರ್ಮಾರ್) ಎಂಬ ವ್ಯಕ್ತಿ ವಿರುದ್ಧ ಪೊಲೀಸ್ ಕೇಸ್ ಇದೆ. ಅವನ ಸಹೋದರನ ವಿರುದ್ಧ ಒಂದಕ್ಕಿಂತ ಹೆಚ್ಚು ಅತ್ಯಾಚಾರ, ಅಪಹರಣ ಮತ್ತು ಹಲ್ಲೆ ಪ್ರಕರಣಗಳಿವೆ. ಅವರು ಹಲವು ಕುಂದುಕೊರತೆಗಳ ವಿಚಾರ ಪ್ರಸ್ತಾಪಿಸಲು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡುತ್ತಲೇ ಇರುತ್ತಾರೆ” ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...