ಹರಿಯಾಣ ವಿಧಾನಸಭೆ ಚುನಾವಣೆ: ಬಿಜೆಪಿ ಮುನ್ನಡೆಗೆ ಆಪ್‌ ಕಾರಣವಾಯಿತೆ?

Date:

ಹರಿಯಾಣದಲ್ಲಿ ಬಿಜೆಪಿ ಮುನ್ನಡೆಗೆ ಆಪ್‌ ಕಾರಣಾವಾಯಿತೆ ಎಂಬ ಚರ್ಚೆಗಳು ಈಗ ಶುರುವಾಗಿದೆ. ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮತಗಳನ್ನು ಆಪ್‌ ಕಸಿದುಕೊಂಡ ಕಾರಣ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ ಎಂಬ ಅಭಿಪ್ರಾಯ ಎಲ್ಲಡೆ ವ್ಯಕ್ತವಾಗುತ್ತಿದೆ

ಮಧ್ಯಾಹ್ನ 12 ಗಂಟೆ ಟ್ರೆಂಡ್‌ ಪ್ರಕಾರ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಬಿಜೆಪಿ 49, ಕಾಂಗ್ರೆಸ್‌ 35 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ಬಿಜೆಪಿ ಶೇ. 39.07, ಕಾಂಗ್ರೆಸ್‌ ಶೇ. 40.26 ಮತ ಪಡೆದಿದೆ. ಐಎನ್‌ಎಲ್‌ಡಿ ಶೇ. 4.09, ಆಪ್‌ ಶೇ. 1.64, ಬಿಎಸ್‌ಪಿ ಶೇ. 1.66 ಮತ ಪಡೆದಿದೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹರಿಯಾಣದಲ್ಲಿ ಕಾಂಗ್ರೆಸ್‌ ಮತ್ತು ಆಪ್‌ ಮೈತ್ರಿ ಮಾಡಿಕೊಂಡಿದ್ದವು. ಇದರ ಪರಿಣಾಮ ಒಟ್ಟು 10 ಸ್ಥಾನಗಳ ಪೈಕಿ ಇಂಡಿಯಾ ಒಕ್ಕೂಟ 5 ಸ್ಥಾನಗಳನ್ನು ಗೆದ್ದರೆ ಬಿಜೆಪಿ 5 ಸ್ಥಾನಗಳನ್ನು ಗೆದ್ದುಕೊಂಡಿತ್ತು. 2019ರ ಚುನಾವಣೆಯಲ್ಲಿ ಬಿಜೆಪಿ  ಎಲ್ಲ 10 ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದ ಅಪೌಷ್ಟಿಕತೆಯ ಗಂಭೀರತೆ ಕೇಂದ್ರಕ್ಕೆ ಅರಿವಾಗುವುದು ಯಾವಾಗ?

ಲೋಕಸಭಾ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್‌ ಮತ್ತು ಆಪ್‌ ಮೈತ್ರಿ ಮಾತುಕತೆ ನಡೆದಿತ್ತು. ಮಾತುಕತೆಯ ವೇಳೆ ಆಪ್‌ 10 ಕ್ಷೇತ್ರಗಳನ್ನು ಕೇಳಿದ್ದರೆ ಕಾಂಗ್ರೆಸ್‌ 3 ಕ್ಷೇತ್ರಗಳನ್ನು ಮಾತ್ರ ನೀಡುವುದಾಗಿ ಹೇಳಿದ ಕಾರಣ ಮೈತ್ರಿ ಮುರಿದುಬಿದ್ದಿತ್ತು.

ಮಾತುಕತೆ ವಿಫಲವಾದ ಬೆನ್ನಲ್ಲೇ ಕಾಂಗ್ರೆಸ್‌ 89 ಕ್ಷೇತ್ರದಲ್ಲಿ ಅಭ್ಯರ್ಥಿ ಕಣಕ್ಕಿಳಿಸಿದರೆ, ಆಪ್‌ 88 ಕ್ಷೇತ್ರಗಳಲ್ಲಿ ಅಭ್ಯರ್ಥಿಯನ್ನು ನಿಲ್ಲಿಸಿತ್ತು. ಕಾಂಗ್ರೆಸ್‌, ಸಿಪಿಎಂ ಜೊತೆ ಮೈತ್ರಿ ಮಾಡಿಕೊಂಡು 1 ಕ್ಷೇತ್ರ ನೀಡಿತ್ತು. ಬಿಜೆಪಿ 89 ಕ್ಷೇತ್ರಗಳಲ್ಲಿ ಅಭ್ಯರ್ಥಿ ಕಣಕ್ಕಿಳಿಸಿತ್ತು. ದುಶ್ಯಂತ್‌ ಚೌಟಾಲ ಅವರ ಜೆಜೆಪಿ ಮತ್ತು ಚಂದ್ರಶೇಖರ ಅಜಾದ್‌ ಅವರ ಅಜಾದ್‌ ಸಮಾಜ್‌ ಪಾರ್ಟಿ ಮೈತ್ರಿ ಮಾಡಿಕೊಂಡಿದ್ದವು. ಜೆಜೆಪಿ 66, ಅಜಾಜ್‌ ಸಮಾಜ್‌ ಪಕ್ಷ 12 ಕ್ಷೇತ್ರಗಳಲ್ಲಿ ಕಣಕ್ಕೆ ಇಳಿದಿತ್ತು.

ಹರಿಯಾಣದಲ್ಲಿ ಒಟ್ಟು 90 ಕ್ಷೇತ್ರಗಳಿದ್ದು ಬಹುಮತಕ್ಕೆ 46 ಸ್ಥಾನಗಳ ಅಗತ್ಯವಿದೆ. ಬಿಜೆಪಿ 2014 ರಿಂದ ಅಧಿಕಾರದಲ್ಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...