ಪೆಗಾಸಸ್ ಮಾದರಿಯ ಸ್ಪೈವೇರ್ ದಾಳಿ ಸಾಧ್ಯತೆ: ಐಫೋನ್ ಬಳಕೆದಾರರಿಗೆ ಆ್ಯಪಲ್ ಎಚ್ಚರಿಕೆ

Date:

ಭಾರತ ಸೇರಿ 98 ದೇಶಗಳ ಐಫೋನ್ ಬಳಕೆದಾರರಿಗೆ ಪೆಗಾಸಸ್ ಮಾದರಿಯ ಸ್ಪೈವೇರ್ ದಾಳಿಯ ಎಚ್ಚರಿಕೆಯನ್ನು ಟೆಕ್ ದೈತ್ಯ ಆ್ಯಪಲ್ ಸಂಸ್ಥೆ ನೀಡಿದೆ. 2021ರಿಂದ, ಆ್ಯಪಲ್ ಈ ಅಧಿಸೂಚನೆಗಳನ್ನು 150ಕ್ಕೂ ಹೆಚ್ಚು ದೇಶಗಳ ಬಳಕೆದಾರರಿಗೆ ಕಳುಹಿಸಿದೆ.

“ನಿಮ್ಮ ಆ್ಯಪಲ್ ಐಡಿಯೊಂದಿಗೆ ಸಂಬಂಧಿಸಿರುವ ಐಫೋನ್ ಮೇಲೆ ದೂರದಿಂದಲೇ ಸ್ಪೈವೇರ್ ದಾಳಿ ಮಾಡುವ ಪ್ರಯತ್ನ ನಡೆಯಬಹುದು ಎಂಬ ಮಾಹಿತಿಯನ್ನು ನಾವು ಪತ್ತೆಹಚ್ಚಿದ್ದೇವೆ” ಎಂದು ಆ್ಯಪಲ್ ತನ್ನ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ.

“ಈ ದಾಳಿಯು ನೀವು ಯಾರು ಅಥವಾ ನೀವು ಏನು ಮಾಡುತ್ತಿದ್ದೀರಿ ಎಂಬ ಕಾರಣವನ್ನು ಮುಂದಿಟ್ಟುಕೊಂಡು ನಿರ್ದಿಷ್ಟವಾಗಿ ನಿಮ್ಮನ್ನು ಗುರಿಯಾಗಿಸಿಕೊಂಡಿರಬಹುದು” ಎಂದು ಆ್ಯಪಲ್ ಸಂಸ್ಥೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂತಹ ದಾಳಿಗಳು ಖಚಿತವಾಗಿ ನಡೆಯುತ್ತದೆ ಎಂದು ಹೇಳಲು ಸಾಧ್ಯವಿಲ್ಲವಾದರೂ, ದಾಳಿ ನಡೆಯುವ ಸಾಧ್ಯತೆ ಬಗ್ಗೆ ನಾವು ಹೆಚ್ಚಿನ ವಿಶ್ವಾಸವನ್ನು ಹೊಂದಿದ್ದೇವೆ. ದಯವಿಟ್ಟು ಅದನ್ನು ಗಂಭೀರವಾಗಿ ತೆಗೆದುಕೊಳ್ಳಿ” ಎಂದು ಕಂಪನಿಯು ಹೇಳಿದೆ.

ಇದನ್ನು ಓದಿದ್ದೀರಾ?  ಮಾರುಕಟ್ಟೆಗೆ ಲಗ್ಗೆ ಇಟ್ಟ ಐಫೋನ್ 15; ಕೊಳ್ಳಲು ಸರತಿ ಸಾಲಿನಲ್ಲಿ ನಿಂತ ಜನ

“ಈ ದಾಳಿಯು ಮಿಲಿಯನ್‌ಗಟ್ಟಲೆ ಡಾಲರ್ ಹೊರೆಯಾಗಬಹುದು. ಅತೀ ಕಡಿಮೆ ಸಂಖ್ಯೆಯ ಜನರ ವಿರುದ್ಧವಾಗಿ ಈ ದಾಳಿ ನಡೆಸುತ್ತಿರಬಹುದು. ಆದರೆ ಸ್ಪೈವೇರ್ ದಾಳಿ ನಡೆಯುತ್ತಿದೆ ಮತ್ತು ಇದು ಜಾಗತಿವಾಗಿ ನಡೆಯುತ್ತಿದೆ” ಎಂದು ಆ್ಯಪಲ್ ಸಂಸ್ಥೆ ಸ್ಪಷ್ಟಪಡಿಸಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ, ಯುಎಸ್ ಮೂಲದ ತಂತ್ರಜ್ಞಾನ ಕಂಪನಿಯು ಭಾರತದ ಬಳಕೆದಾರರಿಗೆ ಇದೇ ರೀತಿಯ ಎಚ್ಚರಿಕೆಯನ್ನು ನೀಡಿದೆ. ಇತ್ತೀಚೆಗೆ, ಭಾರತ ಸರ್ಕಾರವು ಭಾರತದಲ್ಲಿನ ಆ್ಯಪಲ್ ಬಳಕೆದಾರರಿಗೆ ಐಫೋನ್‌ನಲ್ಲಿ ಹಲವಾರು ದೋಷಗಳಿರುವ ಬಗ್ಗೆ ಎಚ್ಚರಿಸಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...