ಸಲಿಂಗ ಮದುವೆ ಮಾನ್ಯತೆ ಕೋರಿ ಅರ್ಜಿ; ತೀರ್ಪು ನೀಡದಂತೆ ಸುಪ್ರೀಂಗೆ ಕೇಂದ್ರದ ಮನವಿ

Date:

  • ಐವರು ನ್ಯಾಯಮೂರ್ತಿಗಳ ಪೀಠದಿಂದ ಅರ್ಜಿ ವಿಚಾರಣೆ
  • ಸಲಿಂಗ ಮದುವೆ ಮಾನ್ಯತೆ ಕೋರಿರುವ ಅರ್ಜಿ ವಿಚಾರಣೆಗೆ ಅರ್ಹವಲ್ಲ ಎಂದ ಕೇಂದ್ರ

ಸಲಿಂಗ ಮದುವೆಗೆ ಮಾನ್ಯತೆ ನೀಡಬೇಕು ಎಂದು ಕೋರಿದ್ದ ಅರ್ಜಿಗಳಿಗೆ ಸಂಬಂಧಿಸಿದಂತೆ ತೀರ್ಪು ನೀಡದೇ ಹಿಂದಕ್ಕೆ ಸರಿಯಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಮನವಿ ಮಾಡಿಕೊಂಡಿದೆ.

ಸಲಿಂಗ ಮದುವೆಗೆ ಶಾಸನ ಮಾನ್ಯತೆ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಕೆಲವರು ಅರ್ಜಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು ಈ ಅರ್ಜಿಗಳ ವಿಚಾರಣೆಯನ್ನು ಸೋಮವಾರ ಕೈಗೆತ್ತಿಕೊಂಡಿತ್ತು.

ವಿಚಾರಣೆ ವೇಳೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರ, “ಸಲಿಂಗ ಮದುವೆಯು ಇತ್ತೀಚಿನ ದಿನಗಳಲ್ಲಿ ಮಹಾ ನಗರಗಳಲ್ಲಿ ವಾಸಿಸುತ್ತಿರುವ ಕೆಲವು ವರ್ಗಗಳ ಜನರ ಮನಃಸ್ಥಿತಿಯಾಗಿದೆ. ಆದ್ದರಿಂದ ಇಂತಹ ಮದುವೆಗೆ ಮಾನ್ಯತೆ ನೀಡಬೇಕು ಎಂದು ಕೆಲವರು ಅರ್ಜಿ ಸಲ್ಲಿಸಿದ್ದಾರೆ. ಅದರಂತೆ ಮಾನ್ಯತೆ ನೀಡುವುದು ಶಾಸಕಾಂಗದ ಕೆಲಸ. ಇಂತಹ ವಿಚಾರಗಳಲ್ಲಿ ತೀರ್ಪು ನೀಡುವುದರಿಂದ ನ್ಯಾಯಾಲಯವು ಹಿಂದಕ್ಕೆ ಸರಿಯಬೇಕು” ಎಂದು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? : ಈ ದಿನ ಸಂಪಾದಕೀಯ | ಕೇಡಿನ ಕಾಲದ ದಿಟ್ಟ ದನಿಗಳು, ಈ ನ್ಯಾಯಮೂರ್ತಿಗಳು

“ಹಲವು ವ್ಯಕ್ತಿಗಳು ಸಲ್ಲಿಸಿರುವ ಅರ್ಜಿಗಳು ವಿಚಾರಣೆಗೇ ಅರ್ಹವಾಗಿಲ್ಲ. ಕೆಲವರು ಸಾಮಾಜಿಕ ಸ್ವೀಕೃತಿ ಪಡೆದುಕೊಳ್ಳುವ ಉದ್ದೇಶದಿಂದ ಈ ಅರ್ಜಿಗಳನ್ನು ಸಲ್ಲಿಸಿದ್ದಾರೆ” ಎಂದು ಕೇಂದ್ರ ಸರ್ಕಾರ ವಾದಿಸಿದೆ.

“ಒಂದು ವೇಳೆ ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡಿದರೆ, ದೇಶದಲ್ಲಿ ಇದುವರೆಗೂ ಮದುವೆ ವಿಚಾರವಾಗಿ ನಡೆದುಕೊಂಡು ಬಂದಿರುವ ಸಂಪ್ರದಾಯಗಳ ಮೇಲೆ ಪರಿಣಾಮ ಬೀರಿದಂತಾಗುತ್ತದೆ” ಎಂದು ಕೇಂದ್ರ ಸರ್ಕಾರ ಪ್ರಮಾಣಪತ್ರ ಸಲ್ಲಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...