ನೀತಿ ಸಂಹಿತೆ ಉಲ್ಲಂಘನೆ ದೂರು: ಮೋದಿ, ರಾಹುಲ್ ವಿರುದ್ಧ ಸೂಕ್ತ ಕ್ರಮ ಎಂದ ಆಯೋಗ

Date:

ಪ್ರಧಾನಿ ನರೇಂದ್ರ ಮೋದಿ ಹಾಗೂ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆಯಡಿ ದೂರು ದಾಖಲಾದ ಮೂರು ವಾರದ ನಂತರ ಚುನಾವಣಾ ಆಯೋಗ ಪ್ರತಿಕ್ರಿಯೆ ನೀಡಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಂದ ಚುನಾವಣಾ ಆಯೋಗ ಪ್ರತಿಕ್ರಿಯೆಗಳನ್ನು ಸ್ವೀಕರಿಸಿದ್ದು, ದೂರುಗಳು ಹಾಗೂ ಪ್ರತಿ ದೂರುಗಳು ಪರಿಶೀಲನೆ ಹಾಗೂ ಪರಿಗಣೆಯಲ್ಲಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.

ದ್ವೇಷಪೂರಿತ ಭಾಷಣಕ್ಕಾಗಿ ಸ್ವೀಕರಿಸಿದ ದೂರಿನಡಿ ನಡ್ಡಾ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಏ.25ರಂದು ನೋಟಿಸ್‌ ನೀಡಲಾಗಿತ್ತು. ಎರಡೂ ಪಕ್ಷದ ನಾಯಕರಿಗೆ ಏ.29ರೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇಶ ತನ್ನ ಹಳೆಯ ಲಯಕ್ಕೆ, ಪ್ರಜಾಪ್ರಭುತ್ವಕ್ಕೆ ಹಿಂದಿರುಗುತ್ತಿದೆಯೇ?

ದ್ವೇಷಪೂರಿತ ಭಾಷಣ ಮಾಡಿದ್ದಕ್ಕಾಗಿ ಕಾಂಗ್ರೆಸ್‌ನಿಂದ 170, ಬಿಜೆಪಿಯಿಂದ 95 ಹಾಗೂ ಇತರ ಪಕ್ಷ ಹಾಗೂ ವೈಯುಕ್ತಿಕವಾಗಿ 160 ದೂರುಗಳನ್ನು ಸ್ವೀಕರಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

“ದೇಶದ ಸಾಮಾಜಿಕ ಚೌಕಟ್ಟನ್ನು ಸೂಕ್ಷ್ಮವಾಗಿ ಸಮತೋಲಿತಗೊಳಿಸುವ ಕಾರಣದಿಂದ ಉಳಿದಿರುವ ಹಂತಗಳಲ್ಲಿ ದ್ವೇಷಪೂರಿತ ಹೇಳಿಕೆಗಳು/ಉಚ್ಚಾರಣೆಗಳನ್ನು ಶಾಶ್ವತವಾಗಿ ಕಡಿಮೆಗೊಳಿಸುವುದು ನಾಯಕರ ಪ್ರಾಥಮಿಕ ಜವಾಬ್ದಾರಿಯಾಗಿದೆ” ಎಂದು ಚುನಾವಣಾ ಆಯೋಗ ತಿಳಿಸಿದೆ.

ಲೋಕಸಭಾ ಚುನಾವಣೆಯ ಕ್ಷೇತ್ರಗಳ ಮಟ್ಟದಲ್ಲಿ ಹಲವು ಪಕ್ಷಗಳು ಹಾಗೂ ಅಭ್ಯರ್ಥಿಗಳು ಗಲಭೆ ಮುಕ್ತ, ದ್ವೇಷ ಭಾಷಣ ಮುಕ್ತ, ಪ್ರಚೋದನೆ ಮತ್ತು ಆಡಂಬರ ಮುಕ್ತವಾಗಿ ಕಾಪಾಡಿಕೊಳ್ಳಬೇಕಾಗಿದೆ ಎಂದು ಆಯೋಗ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...