ಖ್ಯಾತ ಪರಮಾಣು ವಿಜ್ಞಾನಿ ಡಾ ಆರ್ ಚಿದಂಬರಂ ನಿಧನ

Date:

ದೇಶದ ಖ್ಯಾತ ಪರಮಾಣು ವಿಜ್ಞಾನಿ, ಸ್ಫಟಿಕಶಾಸ್ತ್ರಜ್ಞ ಡಾ ಆರ್ ಚಿದಂಬರಂ ಅವರು ತನ್ನ 88ನೇ ವಯಸ್ಸಿನಲ್ಲಿ ಮುಂಬೈನಲ್ಲಿ ಇಂದು ಬೆಳಿಗ್ಗೆ ನಿಧನರಾದರು. ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

1974 ಮತ್ತು 1998ರಲ್ಲಿ ಪೋಖ್ರಾನ್‌–1 ಪರೀಕ್ಷೆ ಮತ್ತು ಪೋಖ್ರಾನ್‌-2 ಪರೀಕ್ಷೆಯಲ್ಲಿ ಡಾ. ಆರ್ ಚಿದಂಬರಂ ಸಂಯೋಜಕರಾಗಿದ್ದರು. ಹಾಗೆಯೇ ಪರಮಾಣು ಶಕ್ತಿ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ಭಾರತ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರೂ ಆಗಿದ್ದರು.

ಇದನ್ನು ಓದಿದ್ದೀರಾ? ಜಿ ಸಿ ಬಯ್ಯಾರೆಡ್ಡಿ ನಿಧನ | ಸಿದ್ದರಾಮಯ್ಯ, ಕುಮಾರಸ್ವಾಮಿ ಸೇರಿ ಗಣ್ಯರ ಸಂತಾಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಮಾಣು ವಿಜ್ಞಾನಿಯಾಗಿ ಅವರು ನೀಡಿದ ಕೊಡುಗೆಗೆ ಪದ್ಮವಿಭೂಷಣ ಪ್ರಶಸ್ತಿ ಲಭಿಸಿದೆ. 1974 ರಲ್ಲಿ ಸ್ಮೈಲಿಂಗ್ ಬುದ್ಧ ಮತ್ತು 1998ರಲ್ಲಿ ಆಪರೇಷನ್ ಶಕ್ತಿ ಎರಡಕ್ಕೂ ಆರ್ ಚಿದಂಬರಂ ಕೊಡುಗೆ ನೀಡಿದ್ದಾರೆ.

ಭಾಭಾ ಪರಮಾಣು ಸಂಶೋಧನಾ ಕೇಂದ್ರದ (ಬಿಎಆರ್‌ಸಿ) ನಿರ್ದೇಶಕರಾಗಿ, ಪರಮಾಣು ಶಕ್ತಿ ಆಯೋಗದ (ಎಇಸಿ) ಅಧ್ಯಕ್ಷರಾಗಿ, ಪರಮಾಣು ಶಕ್ತಿ ಇಲಾಖೆಯ (ಡಿಎಇ) ಕಾರ್ಯದರ್ಶಿಯಾಗಿ ಡಾ. ಆರ್ ಚಿದಂಬರಂ ಕಾರ್ಯ ನಿರ್ವಹಿಸಿದ್ದರು.

ಆರ್ ಚಿದಂಬರಂ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...