ದಾಭೋಲ್ಕರ್, ಪನ್ಸಾರೆ, ಗೌರಿ ಮತ್ತು ಕಲ್ಬುರ್ಗಿ ಹತ್ಯೆಯಲ್ಲಿ ‘ಸಾಮ್ಯತೆ’ಗಳಿವೆಯೇ; ಸಿಬಿಐಗೆ ಸುಪ್ರೀಂ ಪ್ರಶ್ನೆ

Date:

ವಿಚಾರವಾದಿ ನರೇಂದ್ರ ದಾಭೋಲ್ಕರ್, ಸಿಪಿಐ ನಾಯಕ ಗೋವಿಂದ್ ಪನ್ಸಾರೆ, ಹೋರಾಟಗಾರ್ತಿ-ಪತ್ರಕರ್ತೆ ಗೌರಿ ಲಂಕೇಶ್ ಮತ್ತು ವಿದ್ವಾಂಸ, ವಿಚಾರವಾದಿ ಎಂ.ಎಂ ಕಲ್ಬುರ್ಗಿ ಅವರ ಹತ್ಯೆಗಳಲ್ಲಿ ಯಾವುದಾದರೂ ‘ಸಾಮ್ಯತೆ’ಗಳಿವೆಯೇ ಎಂದು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಸುಪ್ರೀಂ ಕೋರ್ಟ್ ಶುಕ್ರವಾರ ಪ್ರಶ್ನಿಸಿದೆ.

ಮೂಢನಂಬಿಕೆಯ ವಿರುದ್ಧ ಹೋರಾಟಗಾರ ನರೇಂದ್ರ ದಾಭೋಲ್ಕರ್ ಅವರು 2013ರ ಆಗಸ್ಟ್ 20ರಂದು ಪುಣೆಯಲ್ಲಿ ಬೆಳಗ್ಗಿನ ಜಾವ ವಾಕಿಂಗ್‌ ಮಾಡುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರನ್ನು ಗುಂಡಿಕ್ಕಿ ಹತ್ಯೆಗೈದಿದ್ದರು. 2015ರ ಫೆಬ್ರವರಿ 20ರಂದು ಪನ್ಸಾರೆ ಅವರನ್ನು, ಅದೇ ವರ್ಷ ಆಗಸ್ಟ್‌ 30ರಂದು ಕಲ್ಬುರ್ಗಿ ಅವರನ್ನೂ ಹಾಗೂ 2017ರ ಸೆಪ್ಟೆಂಬರ್ 5 ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

2023ರ ಏಪ್ರಿಕ್ 18ರಂದು ದಾಭೋಲ್ಕರ್ ಪ್ರಕರಣದ ತನಿಖೆಯ ಮೇಲ್ವಿಚಾರಣೆಯನ್ನು ಮುಂದುವರೆಸಲು ಬಾಂಬೆ ಹೈಕೋರ್ಟ್‌ ನಿರಾಕರಿಸಿತ್ತು. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ದಾಭೋಲ್ಕರ್ ಅವರ ಪುತ್ರಿ ಮುಕ್ತಾ ದಾಭೋಲ್ಕರ್ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ಸುಧಾಂಶು ಧುಲಿಯಾ ಅವರಿದ್ದ ದ್ವಿಸದಸ್ಯ ಪೀಠ, ‘ನಾಲ್ವರ ಹತ್ಯೆಗಳಲ್ಲಿ ಏನಾದರೂ ಸಾಮತ್ಯೆಗಳಿಗೆಯೇ’ ಎಂದು ಪ್ರಶ್ನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಕ್ತಾ ದಾಭೋಲ್ಕರ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಆನಂದ್ ಗ್ರೋವರ್, “ನಾಲ್ಕು ಹತ್ಯೆಗಳ ಹಿಂದೆ ದೊಡ್ಡ ಪಿತೂರಿ ಇದೆ. ಲಭ್ಯವಿರುವ ಪುರಾವೆಗಳು ಈ ಪ್ರಕರಣಗಳಿಗೆ ಸಂಬಂಧಿಸಿರಬಹುದು” ಎಂದು ಪೀಠಕ್ಕೆ ತಿಳಿಸಿದರು.

“ವಿಚಾರಣೆಯನ್ನು ಎದುರಿಸುತ್ತಿರುವ ಆರೋಪಿಗಳು (ದಾಭೋಲ್ಕರ್ ಪ್ರಕರಣದಲ್ಲಿ) ಆ ನಾಲ್ಕು ಕೊಲೆಗಳಲ್ಲಿ ಭಾಗಿಯಾಗಿರಬಹುದೇ? ಅಥವಾ ನಾಲ್ಕು ಹತ್ಯೆಗಳಲ್ಲಿ ಒಂದೇ ರೀತಿಯ ಅಂಶಗಳು ಕಂಡುಬಂದಿಲ್ಲವೇ” ಎಂದು ನ್ಯಾಯಮೂರ್ತಿ ಧುಲಿಯಾ ಅವರು ಸಿಬಿಐ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಐಶ್ವರ್ಯಾ ಭಾಟಿ ಅವರನ್ನು ಪ್ರಶ್ನಿಸಿದರು.

“ನಾವು ಆ ಬಗ್ಗೆ ತಿಳಿದುಕೊಳ್ಳಲು ಬಯಸುತ್ತೇವೆ. ಆ ರೀತಿಯ ಸಾಮ್ಯತೆಗಳಿವೆಯೇ ಪರಿಶೀಲಿಸಿರಿ” ಎಂದು ಸಿಬಿಐಗೆ ನ್ಯಾಯಮೂರ್ತಿ ಕಿಶನ್ ಕೌಲ್ ಸೂಚಿಸಿದರು.

“ದಾಭೋಲ್ಕರ್, ಪನ್ಸಾರೆ ಮತ್ತು ಗೌರಿ ಲಂಕೇಶ್ ಹತ್ಯೆಗಳಲ್ಲಿ ಸಾಮಾನ್ಯ ‘ಲಿಂಕ್‌’ಗಳು ಇರಬಹುದೆಂದು ಸಿಬಿಐ ಶಂಕಿಸಿದೆ” ಎಂದು ಗ್ರೋವರ್ ಮೇ 18 ರಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು.

“ದಾಭೋಲ್ಕರ್, ಪನ್ಸಾರೆ ಮತ್ತು ಗೌರಿ ಲಂಕೇಶ್ ಹತ್ಯೆಗಳಲ್ಲಿ ಬಳಸಲಾದ ಶಸ್ತ್ರಾಸ್ತ್ರಗಳು ಒಂದೇ ಎಂದು ಕಂಡುಬಂದಿದೆ. ಅಂದಮೇಲೆ, ಅಪರಾಧಗಳಲ್ಲಿ ಭಾಗಿಯಾದ ಆರೋಪಿಗಳೂ ಅವರೇ ಆಗಿದ್ದಾರೆ. ಆದ್ದರಿಂದ, ಸಿಬಿಐ ಹೆಚ್ಚಿನ ತನಿಖೆ ನಡೆಸಲು ಬಯಸಿದೆ” ಎಂದು ಅವರು ಹೇಳಿದರು.

ಒಂಬತ್ತು ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಪ್ರಕರಣದ ತನಿಖೆಯ ಮೇಲೆ ಹೆಚ್ಚಿನ ನಿಗಾ ಅಗತ್ಯವಿಲ್ಲ ಎಂದು ಹೈಕೋರ್ಟ್ ಏಪ್ರಿಲ್ 18 ರಂದು ಹೇಳಿತ್ತು. ನಿರಂತರ ಮೇಲ್ವಿಚಾರಣೆಗಾಗಿ ಮುಕ್ತಾ ದಾಭೋಲ್ಕರ್ ಸಲ್ಲಿಸಿದ ಅರ್ಜಿ ಸೇರಿದಂತೆ ಹಲವು ಅರ್ಜಿಗಳನ್ನು ಹೈಕೋರ್ಟ್‌ ವಜಾಗೊಳಿಸಿತ್ತು.

2014 ರಲ್ಲಿ, ಮುಕ್ತಾ ದಾಭೋಲ್ಕರ್ ಮತ್ತು ಇನ್ನೊಬ್ಬ ಕಾರ್ಯಕರ್ತನ ಮನವಿಯ ಮೇರೆಗೆ ಹೈಕೋರ್ಟ್ ತನಿಖೆಯನ್ನು ಪುಣೆ ಪೊಲೀಸರಿಂದ ಸಿಬಿಐಗೆ ವರ್ಗಾಯಿಸಿತ್ತು. ಪುಣೆಯ ವಿಶೇಷ ನ್ಯಾಯಾಲಯವು 2021ರಲ್ಲಿ ಅಪರಾಧದ ಮಾಸ್ಟರ್ ಮೈಂಡ್ ವೀರೇಂದ್ರ ಸಿನ್ ತಾವ್ಡೆ ವಿರುದ್ಧ ಆರೋಪಪಟ್ಟಿ ರೂಪಿಸಿತ್ತು. ಇದು ತಾವ್ಡೆ ಮತ್ತು ಇತರ ಮೂವರ ವಿರುದ್ಧ ಕೊಲೆ ಮತ್ತು ಕ್ರಿಮಿನಲ್ ಪಿತೂರಿ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇನ್ನೋರ್ವ ಆರೋಪಿ ಸಂಜೀವ್ ಪುನಾಲೇಕರ್ ವಿರುದ್ಧ ಸಾಕ್ಷ್ಯ ನಾಶದ ಆರೋಪ ಹೊರಿಸಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...