ಬಿಹಾರ | ವಿವಾಹ ಸಮಾರಂಭದಲ್ಲಿ ಪಾರ್ಕಿಂಗ್ ವಿಷಯಕ್ಕೆ ವಾಗ್ವಾದ; ಇಬ್ಬರು ಸಾವು, ಐವರಿಗೆ ಗಾಯ

Date:

ವಿವಾಹ ಸಮಾರಂಭದಲ್ಲಿ ಪಾರ್ಕಿಂಗ್ ವಿಷಯವಾಗಿ ನಡೆದ ವಾಗ್ವಾದ ಹಿಂಸಾಚಾರಕ್ಕೆ ತಿರುಗಿ ಇಬ್ಬರು ಗುಂಡೇಟಿಗೆ ಬಲಿಯಾಗಿ, ಐವರು ಗಾಯಗೊಂಡಿರುವ ಘಟನೆ ಬಿಹಾರದ ಭೋಜ್‌ಪುರ ಜಿಲ್ಲೆಯಲ್ಲಿ ನಡೆದಿದೆ.

ಭಾನುವಾರ ರಾತ್ರಿ 9.30ರ ಸುಮಾರಿಗೆ ಗರ್ಹಾನಿ ಪೊಲೀಸ್ ಠಾಣಾ ವ್ಯಾಪ್ತಿಯ ಲಹರ್ಪಾ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಲುವ್‌ಕುಶ್ ಮತ್ತು ರಾಹುಲ್ ಎಂದು ಗುರುತಿಸಲಾಗಿದೆ.

ಇದನ್ನು ಓದಿದ್ದೀರಾ? ದಲಿತ ವರನ ವಿವಾಹ ಮೆರವಣಿಗೆಗೆ ವಿರೋಧ; ಸವರ್ಣೀಯರಿಂದ ಹಲವರ ಮೇಲೆ ಹಲ್ಲೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿವಾಹ ಸಮಾರಂಭದಲ್ಲಿ ವಾಹನಗಳನ್ನು ನಿಲ್ಲಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ತೀವ್ರ ವಾಗ್ವಾದ ನಡೆದಿದೆ. ಈ ಪೈಕಿ ಒಂದು ಗುಂಪು ಇನ್ನೊಂದು ಗುಂಪಿನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಒಬ್ಬ ವ್ಯಕ್ತಿ ಗುಂಡೇಟಿನಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನೋರ್ವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಸಾವನ್ನಪ್ಪಿರುವುದಾಗಿ ಘೋಷಿಸಿದ್ದಾರೆ” ಎಂದು ಹೇಳಿದ್ದಾರೆ.

ಇತರ ಐವರಿಗೆ ಗುಂಡೇಟಿನಿಂದ ಗಾಯಗಳಾಗಿದ್ದು, ಭೋಜ್‌ಪುರದ ಜಿಲ್ಲಾ ಕೇಂದ್ರವಾದ ಅರಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಹಾಗೆಯೇ ಗುಂಡಿನ ದಾಳಿಯಲ್ಲಿ ಭಾಗಿಯಾಗಿರುವ ಆರೋಪಿಗಳ ಗುರುತುಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...