ಪೂಂಛ್‌ ಭಯೋತ್ಪಾದಕ ದಾಳಿ; ಸ್ಥಳೀಯ ನಿವಾಸಿಗಳನ್ನು ಬಂಧಿಸಿದ ಸೇನೆ

Date:

  • ಪೂಂಛ್ ಭಯೋತ್ಪಾದಕ ದಾಳಿಯಲ್ಲಿ ಐವರು ಯೋಧರು ಹುತಾತ್ಮ
  • ಭಯೋತ್ಪಾದಕರಿಗೆ ನೆರವು ಆರೋಪದಲ್ಲಿ ಸ್ಥಳೀಯರ ಬಂಧನ

ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಭಯೋತ್ಪಾದಕ ದಾಳಿ ಬಗ್ಗೆ ಸೇನೆ ತನಿಖೆ ನಡೆಸಿದ್ದು, ದಾಳಿಯಲ್ಲಿ ಕೆಲವು ಸಮುದಾಯದ ವ್ಯಕ್ತಿಗಳ ಹೆಸರು ಪತ್ತೆಯಾಗಿದೆ ಎಂದು ಆರೋಪಿಸಿ ಸ್ಥಳೀಯ ನಿವಾಸಿಗಳನ್ನು ಬಂಧಿಸಿದೆ.

ಇದು ಆಘಾತಕಾರಿ ಮಾಹಿತಿ ಎಂದು ಸೇನೆ ಹೇಳಿದೆ. ಈ ಬಗ್ಗೆ ಸೇನೆ ಜನರಿಗಾಗಿ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದೆ. “ಭವಿಷ್ಯದಲ್ಲಿ ಭಯೋತ್ಪಾದಕತೆಗೆ ಸಂಬಂಧಿಸಿದ ಶಂಕಿತ ಘಟನೆಗಳು ಮತ್ತು ಚಟುವಟಿಕೆಗಳು ಕಂಡು ಬಂದರೆ ಸೇನೆಯ ಗಮನಕ್ಕೆ ತರಬೇಕು” ಎಂದು ಹೇಳಿಕೆಯಲ್ಲಿ ಸೇನೆ ತಿಳಿಸಿದೆ.

“ಪೂಂಛ್‌ ಜಿಲ್ಲೆಯಲ್ಲಿ ಇತ್ತೀಚೆಗೆ ಸೇನಾ ವಾಹನದ ಮೇಲೆ ಭಯೋತ್ಪಾದಕ ದಾಳಿ ನಡೆದಿದ್ದು, ಸ್ಥಳೀಯ ಸಮುದಾಯದ ಕೆಲವರು ಒಳಗೊಂಡಿರುವ ಆಘಾತಕಾರಿ ಸಂಗತಿ ತಿಳಿದುಬಂದಿದೆ” ಎಂದು ಸೇನೆ ಶನಿವಾರ (ಏಪ್ರಿಲ್‌ 29) ಬಿಡುಗಡೆಗೊಳಿಸಿದ ಹೇಳಿಕೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೂಂಛ್‌ ದಾಳಿ ನಡೆಸಲು ಸಂಚು ರೂಪಿಸಿದ ಭಯೋತ್ಪಾದಕರಿಗೆ ಊಟ, ವಸತಿ ಮತ್ತು ಸಾರಿಗೆ ವ್ಯವಸ್ಥೆ ಕಲ್ಪಿಸಿದ ಆರು ಸ್ಥಳೀಯ ನಿವಾಸಿಗಳನ್ನು ಬಂಧಿಸಲಾಗಿದೆ. ಸ್ಥಳೀಯರ ಸಹಕಾರವಿಲ್ಲದೆ ಭಯೋತ್ಪಾದಕರು ಇಂತಹ ಕೃತ್ಯ ಎಸಗಲು ಸಾಧ್ಯವಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸ್‌ ಮಹಾ ನಿರ್ದೇಶಕ ದಿಲ್‌ಬಾಗ್‌ ಸಿಂಗ್‌ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“370ನೇ ವಿಧಿ ರದ್ಧತಿಯ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆ ಮತ್ತು ಸರ್ಕಾರ ರಚನೆಗೆ ಪಾಕಿಸ್ತಾನ ಅವಕಾಶ ನೀಡುತ್ತಿಲ್ಲ” ಎಂದು ಸೇನಾ ಪ್ರಕಟಣೆ ಹೇಳಿದೆ.

ಈ ಸುದ್ದಿ ಓದಿದ್ದೀರಾ? ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಕೆಜಿಗೆ ₹171.50 ಕಡಿತ

“ಪೂಂಛ್‌ ಭಯೋತ್ಪಾದಕ ದಾಳಿ ರೀತಿಯೇ ಭಯೋತ್ಪಾದಕ ಶಿಬಿರಗಳಲ್ಲಿ ಸ್ಥಳೀಯ ಪ್ರದೇಶದ ಯುವಕರಿಗೆ ತರಬೇತಿ ನೀಡಿ ಅವರನ್ನು ಪ್ರಚಾರಾಭಿಯಾನ ನಡೆಸಲು ಬಳಸಿಕೊಳ್ಳಲಾಗುತ್ತಿದೆ. ತರಬೇತಿಯ ಮೂಲಕ ಅವರನ್ನು ದಾರಿ ತಪ್ಪಿಸಲಾಗುತ್ತಿದೆ” ಎಂದು ಸೇನೆ ಹೇಳಿದೆ.

ಏಪ್ರಿಲ್ 20ರಂದು ಪೂಂಛ್‌ನ ತೋಟ ಗಲಿಯಲ್ಲಿ ಸೇನಾ ವಾಹನದ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಗೆ ಐವರು ಯೋಧರು ಹುತಾತ್ಮರಾಗಿ, ಒಬ್ಬರು ಗಾಯಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...