ಒಡಿಶಾ | ಸೇನಾಧಿಕಾರಿ ಭಾವಿ ಪತ್ನಿಗೆ ಲೈಂಗಿಕ ದೌರ್ಜನ್ಯ ಆರೋಪ; ಐವರು ಪೊಲೀಸರು ಅಮಾನತು

Date:

ಒಡಿಶಾದ ಭುವನೇಶ್ವರದಲ್ಲಿರುವ ಭರತ್‌ಪುರ ಪೊಲೀಸ್ ಠಾಣೆಯಲ್ಲಿ ಸೇನಾಧಿಕಾರಿ ಭಾವಿ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ ಆರೋಪದಲ್ಲಿ ಐವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಸೆಪ್ಟೆಂಬರ್ 14ರಂದು ಭುವನೇಶ್ವರದಲ್ಲಿ ಮನೆಗೆ ಮರಳುತ್ತಿದ್ದಾಗ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು ಅದರ ವಿರುದ್ಧವಾಗಿ ದೂರು ನೀಡಲು ಹೋದಾಗ ಪೊಲೀಸರು ಸೇನಾಧಿಕಾರಿ ಭಾವಿ ಪತ್ನಿ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಭುವನೇಶ್ವರದಲ್ಲಿ ಪೊಲೀಸರ ಮೇಲೆ ಹಲ್ಲೆ ಮತ್ತು ಪೊಲೀಸ್ ಠಾಣೆಯ ಪೀಠೋಪಕರಣಗಳನ್ನು ಧ್ವಂಸ ಮಾಡಿದ ಆರೋಪದಲ್ಲಿ ಬಂಧನಗೊಂಡಿದ್ದ ಸೇನಾಧಿಕಾರಿ ಭಾವಿ ಪತ್ನಿ ಕಳೆದ ವಾರ ಬಿಡುಗಡೆಯಾಗಿದ್ದರು. ಅದಾದ ಬಳಿಕ ಪೊಲೀಸರ ವಿರುದ್ಧವೇ ಹಲ್ಲೆ, ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.

ಮಾಧ್ಯಮಗಳಿಗೆ ತನಗೆ ಆದ ದೌರ್ಜನ್ಯದ ಬಗ್ಗೆ ವಿವರಿಸಿದ ಮಹಿಳೆ, ಪೊಲೀಸ್ ಇನ್ಸ್‌ಪೆಕ್ಟರ್ ಹಲ್ಲೆ ಮಾಡುವ ಮೊದಲು ತನ್ನ ಎದೆಯ ಮೇಲೆ ಪದೇ ಪದೇ ಒದ್ದಿರುವುದಾಗಿ ಆರೋಪಿಸಿದ್ದಾರೆ. ಸದ್ಯ ಈ ಘಟನೆಯು ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಒಡಿಶಾ ಪೊಲೀಸರು ಭರತ್‌ಪುರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸೇರಿದಂತೆ ಐವರು ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೆಪ್ಟೆಂಬರ್ 14ರಂದು ಮಧ್ಯರಾತ್ರಿ ಭುವನೇಶ್ವರದಲ್ಲಿ ಮನೆಗೆ ಹಿಂದಿರುಗುತ್ತಿದ್ದ ಸೇನಾ ಅಧಿಕಾರಿ ಮತ್ತು ಅವರ ಭಾವಿ ಪತ್ನಿಗೆ ಅಪರಿಚಿತ ಗೂಂಡಾಗಳ ಹಲ್ಲೆ ಮಾಡಿದ್ದಾರೆ. ಆದ್ದರಿಂದ ಇಬ್ಬರೂ ಪೊಲೀಸ್ ಠಾಣೆಯತ್ತ ಧಾವಿಸಿದ್ದರು. ಈ ವೇಳೆ ಪೊಲೀಸರೇ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಈ ಜೋಡಿ ಆರೋಪಿಸಿದೆ.

ಇದನ್ನು ಓದಿದ್ದೀರಾ? ಒಡಿಶಾ: ಕ್ಷಿಪಣಿ ಉಡಾವಣೆ ಪರೀಕ್ಷೆಗಾಗಿ 10 ಸಾವಿರ ಜನರ ಸ್ಥಳಾಂತರ

ನನ್ನ ಬಟ್ಟೆ ಬಿಚ್ಚಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಮತ್ತು ದೈಹಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ವೇಳೆ ತನ್ನನ್ನು ರಕ್ಷಿಸಿಕೊಳ್ಳಲು ಮಹಿಳೆ ಅಧಿಕಾರಿಯೊಬ್ಬರಿಗೆ ಕಚ್ಚಿದ್ದಾರೆ ಎಂದು ಹೇಳಲಾಗಿದೆ. ಅದಾದ ಬಳಿಕ ಮಹಿಳೆಯನ್ನು ಬಂಧಿಸಲಾಗಿದೆ.

ಸೆಪ್ಟೆಂಬರ್ 16ರಂದು ಘಟನೆಯ ಬಗ್ಗೆ ಸೇನೆಗೆ ತಿಳಿದ ನಂತರ ಒಡಿಶಾ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್ 17ರಂದು ಒತ್ತಡ ಹೆಚ್ಚಾದ ಕಾರಣ ಸರ್ಕಾರವು ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿದೆ. ಸೆಪ್ಟೆಂಬರ್ 18ರಂದು ಐವರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬಳಿಕ ಅಮಾನತುಗೊಳಿಸಲಾಗಿದೆ. ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಮಹಿಳೆಗೆ ಒಡಿಶಾ ಹೈಕೋರ್ಟ್ ಜಾಮೀನು ನೀಡಿದೆ.

ಸೆಪ್ಟೆಂಬರ್ 19ರಂದು ಮಹಿಳೆಯು ಬಿಡುಗಡೆಯಾಗಿ ಮಾಧ್ಯಮಕ್ಕೆ ತನ್ನ ಮೇಲಾದ ದೌರ್ಜನ್ಯದ ವಿವರಿಸಿದ್ದಾರೆ. ಸೆಪ್ಟೆಂಬರ್ 20ರಂದು ಸೇನಾಧಿಕಾರಿ ಔಪಚಾರಿಕ ದೂರನ್ನು ದಾಖಲಿಸಿದ ನಂತರ ಐವರು ಪೊಲೀಸ್ ಅಧಿಕಾರಿಗಳ ವಿರುದ್ಧ ಅಧಿಕೃತವಾಗಿ ಎಫ್‌ಐಆರ್ ದಾಖಲಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...