ನದೀಂ ಖಾನ್‌ಗೆ ದೆಹಲಿ ಪೊಲೀಸ್ ಕಿರುಕುಳ: ಭಾರತ್ ಜೋಡೋ ಅಭಿಯಾನದ ಖಂಡನೆ

Date:

ದೇಶದ ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ ಮತ್ತು ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್‌ (ಎಪಿಸಿಆರ್) ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿ ನದೀಂ ಖಾನ್‌ ಅವರ ವಿರುದ್ಧ ದೆಹಲಿ ಪೊಲಿಸರು ಅಕ್ರಮವಾಗಿ ಕ್ರಮ ಕೈಗೊಂಡಿರುವುದನ್ನು ಭಾರತ್‌ ಜೋಡೋ ಅಭಿಯಾನ(ಬಿಜೆಎ) ಖಂಡಿಸಿದೆ.

ನದೀಂ ಖಾನ್‌ ಅವರು ಮುಖ್ಯವಾಗಿ ಅಲ್ಪಸಂಖ್ಯಾತರನ್ನು ಒಳಗೊಂಡ ನಮ್ಮ ನಾಗರಿಕರ ಕಾನೂನು ಹಾಗೂ ಸಾಂವಿಧಾನಿಕ ಹಕ್ಕುಗಳನ್ನು ಎತ್ತಿಹಿಡಿಯಲು ಹೋರಾಟ ನಡೆಸುತ್ತಿದ್ದಾರೆ. ದೆಹಲಿ ಪೊಲೀಸರು ಯಾವುದೇ ಬಂಧನ ವಾರಂಟ್‌ ಇಲ್ಲದೆ ನವೆಂಬರ್‌ 30 ರಂದು ಬೆಂಗಳೂರಿನ ಖಾಸಗಿ ನಿವಾಸದಲ್ಲಿ ಅಕ್ರಮವಾಗಿ ಬಂಧಿಸಲು ಯತ್ನಿಸಿದ್ದಾರೆ. ಇದಲ್ಲದೆ ದೆಹಲಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ 196, 353(2) ಹಾಗೂ 61ರ ಅಡಿ ಎಫ್‌ಐಆರ್‌ ಕೂಡ ದಾಖಲಿಸಿದ್ದಾರೆ.

ನದೀಂ ಖಾನ್‌ ಅವರು ಕೋಮು ಪ್ರಚೋದನೆ ಕೆರಳಿಸಲು ಟ್ವೀಟ್‌ ಮಾಡಿದ್ದಾರೆ ಎಂದು ಹಿಂದೂ ಸಂಘಟನೆಗಳ ಆರೋಪವನ್ನು ಉಲ್ಲೇಖಿಸಿರುವುದು ಹಾಸ್ಯಾಸ್ಪದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಫ್‌ಐಅರ್‌ನಲ್ಲಿ ಉಲ್ಲೇಖಿಸಿದಂತೆ ಖಾನ್‌ ಹಾಗೂ ಅವರ ಎಸಿಪಿಆರ್‌ ಸಂಸ್ಥೆ ವಿರುದ್ಧ ಮಾಡಲಾದ ಆರೋಪದಲ್ಲಿ ಯಾವುದೇ ಸತ್ಯವಿಲ್ಲ. ಭಾರತ್‌ ಜೋಡೋ ಸಂಸ್ಥೆಯು ಈ ಅಮಾನುಷ ಕೃತ್ಯವು ವಾಕ್‌ಸ್ವಾತಂತ್ರವನ್ನು ನಿಯಂತ್ರಿಸುತ್ತಿರುವುದು ದುರುದ್ದೇಶ ಹಾಗೂ ಉದ್ದೇಶಪೂರ್ವಕವಾದುದು ಎಂದು ಖಂಡಿಸುತ್ತೇವೆ. ನದೀಮ್‌ ಖಾನ್‌ ಹಾಗೂ ಅವರ ಎಸಿಪಿಆರ್‌ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ಅನ್ನು ತಕ್ಷಣ ರದ್ದುಗೊಳಿಸಬೇಕೆಂದು ನಾವು ಆಗ್ರಹಿಸುತ್ತೇವೆ.

ಖಾನ್‌ ಹಾಗೂ ಅವರ ಸಿಬ್ಬಂದಿಯ ವಿರುದ್ಧ ಯಾವುದೇ ವಾರಂಟ್‌ ಇಲ್ಲದೆ ದೆಹಲಿ ಪೊಲೀಸರು ದಾಳಿ ನಡೆಸಿರುವುದು ಅಕ್ಷಮ್ಯವಾಗಿದೆ. ನಾವು ನಮ್ಮ ಸಾಂವಿಧಾನಿಕ ಮೌಲ್ಯಗಳ ರಕ್ಷಣೆಗಾಗಿ ಅವರ ಹಾಗೂ ಅವರ ಹೋರಾಟದ ಪರವಾಗಿ ಸದಾ ನಿಲ್ಲುತ್ತೇವೆ ಎಂದು ಭಾರತ್‌ ಜೋಡೋ ಅಭಿಯಾನದ ವಕ್ತಾರರಾದ ವಿಜಯ್‌ ಮಹಾಜನ್‌ ಹಾಗೂ ಯೋಗೇಂದ್ರ ಯಾದವ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೆಹಲಿಯ ಶಾಹೀನ್ ಬಾಗ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ಸೇರಿದಂತೆ ನಾಲ್ವರು ಅಧಿಕಾರಿಗಳು ವಾರಂಟ್ ಅಥವಾ ಪೂರ್ವ ಸೂಚನೆಯಿಲ್ಲದೆ ಶನಿವಾರ ಸಂಜೆ 5ರ ಸುಮಾರಿಗೆ ನದೀಂ ಖಾನ್‌ ಅವರ ಬೆಂಗಳೂರಿನ ನಿವಾಸಕ್ಕೆ ಬಂದಿದ್ದರು. ಆ ಬಳಿಕ ರಾತ್ರಿ 10.45 ಕ್ಕೆ ಅಧಿಕಾರಿಗಳು ಬಿಎನ್ಎಸ್ಎಸ್‌ ಸೆಕ್ಷನ್ 35 (3) ರ ಅಡಿಯಲ್ಲಿ ನೋಟಿಸ್ ಅಂಟಿಸಿ, ಶಾಹೀನ್ ಬಾಗ್ ಪೊಲೀಸ್ ಠಾಣೆಗೆ ಹಾಜರಾಗುವಂತೆ ತಿಳಿಸಿದ್ದರು.

ಈ ಸುದ್ದಿ ಓದಿದ್ದೀರಾ? ದೆಹಲಿ ಪೊಲೀಸರಿಂದ ಬೆಂಗಳೂರಿನಲ್ಲಿ ಅಕ್ರಮ ಚಟುವಟಿಕೆ : ದೂರು ದಾಖಲು

ಕೋಮುಗಳ ನಡುವೆ ದ್ವೇಷ ಹರಡುತ್ತಿರುವ ಸುಳ್ಳು ಆರೋಪ ಹೊರಿಸಿ ದೆಹಲಿಯ ಶಾಹೀನ್ ಬಾಗ್ ಪೊಲೀಸ್ ಠಾಣೆಯ ಪೊಲೀಸರು ಶನಿವಾರ ಮಧ್ಯಾಹ್ನ 12:48 ಕ್ಕೆ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಎಫ್‌ಐಆರ್‌ ದಾಖಲಾದ ಕೆಲವೇ ಗಂಟೆಗಳಲ್ಲಿ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದ ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ಸೇರಿದಂತೆ ನಾಲ್ವರು ಅಧಿಕಾರಿಗಳು, ನದೀಮ್ ಖಾನ್ ಅವರನ್ನು ಬಂಧಿಸಲು ಯತ್ನಿಸಿದ್ದರು.

ಪೊಲೀಸರು, ರಾತ್ರಿ 10.30ರ ಸುಮಾರಿಗೆ ಮನೆಗೆ ನೋಟಿಸ್ ಅಂಟಿಸಿ ತೆರಳಿದ್ದಾರೆ. ನದೀಂ ಖಾನ್‌ ಅವರ ಮನೆಗೆ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿದೆ. ಆದರೂ ಕೂಡ ದೆಹಲಿಯಿಂದ ಬಂದಿದ್ದ ಪೊಲೀಸರು ಸ್ಥಳೀಯ ಪೊಲೀಸರಿಗೆ ಯಾವುದೇ ಮಾಹಿತಿ ಕೂಡ ನೀಡಿರಲಿಲ್ಲ.

ಈ ನಡುವೆ ದೆಹಲಿ ಪೊಲೀಸರ ವಿರುದ್ಧ ನದೀಂ ಖಾನ್‌ ಕುಟುಂಬಸ್ಥರು ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದು, ದೂರು ದಾಖಲಿಸಿಕೊಂಡಿರುವ ಸಂಪಿಗೆಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಬೆಳವಣಿಗೆಯ ಬಗ್ಗೆ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸರಿಗೆ ದೂರು ನೀಡಿರುವ ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಸಹೋದರ, “ಶನಿವಾರ ಸಂಜೆ 5ರ ಸುಮಾರಿಗೆ ದೆಹಲಿಯ ಶಾಹೀನ್ ಬಾಗ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ಎಂದು ಹೇಳಿಕೊಂಡು ಬಂದ ನಾಲ್ವರು ಅಧಿಕಾರಿಗಳು ಅಕ್ರಮವಾಗಿ ಪ್ರವೇಶಿಸಿದ್ದಾರೆ. ವಾರಂಟ್ ಅಥವಾ ಪೂರ್ವ ಸೂಚನೆಯಿಲ್ಲದೆ ಬಂದಿದ್ದಲ್ಲದೇ, ನಮ್ಮನ್ನು ಬೆದರಿಸಿದ್ದಾರೆ. ಯಾಕೆ ಬಂದಿದ್ದೀರಿ ಎಂದು ಪ್ರಶ್ನಿಸಿದ್ದಕ್ಕೆ ನದೀಂ ಖಾನ್‌ ಅವರ ವಿರುದ್ಧ ನಮ್ಮ ಠಾಣೆಯಲ್ಲಿ ಶನಿವಾರ ಮಧ್ಯಾಹ್ನ 12:48 ಕ್ಕೆ ಎಫ್‌ಐಆರ್ ದಾಖಲಿಸಿಕೊಂಡಿದ್ದೇವೆ. ಅವರನ್ನು ಹುಡುಕಿಕೊಂಡು ಬಂದಿದ್ದೇವೆ ಎಂದು ತಿಳಿಸಿದ್ದರು. ದಾಖಲೆ ಕೇಳಿದಾಗ ಆನ್‌ಲೈನ್ ಪ್ರತಿಯನ್ನು ತೋರಿಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಮನೆಗೆ ನುಗ್ಗಿದ ವೇಳೆ ಯಾವುದೇ ಸಮವಸ್ತ್ರದಲ್ಲಿ ಇರಲಿಲ್ಲ. 8 ಗಂಟೆ ಸುಮಾರಿಗೆ, ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆಯ 3 ಪೊಲೀಸ್ ಅಧಿಕಾರಿಗಳು ಕೂಡ ನನ್ನ ನಿವಾಸಕ್ಕೆ ಬಂದರು. ದೆಹಲಿ ಪೊಲೀಸರು ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿಲ್ಲ ಎಂಬುದು ನಂತರ ಸ್ಪಷ್ಟವಾಯಿತು. ರಾತ್ರಿ 9 ಗಂಟೆಯವರೆಗೆ ಮನೆಯ ಮೊದಲ ಮಹಡಿಯ ಹಾಲ್‌ನಲ್ಲಿ ಕುಳಿತು ತನಿಖೆಗೆ ನದೀಂ ಖಾನ್‌ ಅವರನ್ನು ತಮ್ಮೊಂದಿಗೆ ದೆಹಲಿಗೆ ಬರುವಂತೆ ಒತ್ತಾಯಿಸಿದ್ದರು. ಯಾವುದೇ ಸಮನ್ಸ್, ನೋಟಿಸ್, ವಾರಂಟ್ ಇಲ್ಲದಿದ್ದರೂ, ಎಸ್‌ಎಚ್‌ಒ ಮತ್ತು ಇತರ ಪೊಲೀಸ್ ಅಧಿಕಾರಿಗಳು ಮನೆಯಲ್ಲೇ ಐದು ಗಂಟೆಗಳ ಕಾಲ ನಮ್ಮನ್ನು ಬೆದರಿಸಿದ್ದಾರೆ” ಎಂದು ತಿಳಿಸಿದ್ದಾರೆ.

 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...