ಅಂಬೇಡ್ಕರ್‌ ಏಕ ಸಂವಿಧಾನ ಕಲ್ಪನೆಗೆ 370ನೇ ವಿಧಿ ವಿರುದ್ಧವಾಗಿತ್ತು: ಸಿಜೆಐ ಗವಾಯಿ

Date:

ಡಾ ಬಿ ಆರ್ ಅಂಬೇಡ್ಕರ್ ಅವರು ದೇಶವನ್ನು ಒಗ್ಗಟ್ಟಿನಿಂದ ಇರಿಸುವ ನಿಟ್ಟಿನಲ್ಲಿ ಏಕ ಸಂವಿಧಾನ ಕಲ್ಪನೆ ಹೊಂದಿದ್ದರು. ಒಂದು ರಾಜ್ಯಕ್ಕೆ ಪ್ರತ್ಯೇಕ ಸಂವಿಧಾನದ ಕಲ್ಪನೆಯನ್ನು ಎಂದಿಗೂ ಬೆಂಬಲಿಸಲಿಲ್ಲ. 370ನೇ ವಿಧಿಯು ಅಂಬೇಡ್ಕರ್‌ ಏಕ ಸಂವಿಧಾನ ಕಲ್ಪನೆಗೆ ವಿರುದ್ಧವಾಗಿತ್ತು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಶನಿವಾರ ಹೇಳಿದ್ದಾರೆ.

ನಾಗ್ಪುರದಲ್ಲಿ ಸಂವಿಧಾನದ ಪೀಠಿಕೆ ಉದ್ಯಾನವನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಜೆಐ, “ಸುಪ್ರೀಂ ಕೋರ್ಟ್ ಡಾ ಅಂಬೇಡ್ಕರ್ ಅವರ ಅಖಂಡ ಭಾರತದ ದೃಷ್ಟಿಕೋನದಿಂದ ಸ್ಫೂರ್ತಿ ಪಡೆದು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ 370ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಎತ್ತಿಹಿಡಿದಿದೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ದೇಶದ ಮೊದಲ ‘ಬೌದ್ಧ ಅಂಬೇಡ್ಕರ್‌ವಾದಿ ಸಿಜೆಐ; ಜಸ್ಟೀಸ್‌ ಗವಾಯಿಗೆ ರಾಜ್‌ದೀಪ್ ಸರ್ದೇಸಾಯಿ ಅಭಿನಂದನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗವಾಯಿ ಅವರು ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ 370ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಸರ್ವಾನುಮತದಿಂದ ಎತ್ತಿಹಿಡಿದ ಈ ಹಿಂದಿನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠದ ಭಾಗವಾಗಿದ್ದರು.

ಮರಾಠಿಯಲ್ಲಿ ಮಾತನಾಡಿದ ಗವಾಯಿ ಅವರು, “370ನೇ ವಿಧಿಯ ಬಗ್ಗೆ ವಿಚಾರಣೆ ನಡೆಸಿದಾಗ ‘ನಾವು ದೇಶವನ್ನು ಒಗ್ಗಟ್ಟಿನಿಂದ ಇರಿಸಲು ಬಯಸಿದರೆ, ನಮಗೆ ಒಂದೇ ಸಂವಿಧಾನ ಬೇಕು’ ಎಂಬ ಅಂಬೇಡ್ಕರ್ ಅವರ ಮಾತು ನನಗೆ ನೆನಪಿಗೆ ಬಂದಿತ್ತು” ಎಂದೂ ಹೇಳಿಕೊಂಡಿದ್ದಾರೆ.

2019ರ ಆಗಸ್ಟ್ 5ರಂದು ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ 370ನೇ ವಿಧಿಯನ್ನು ರದ್ದುಗೊಳಿಸಿತು. ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲು ನಿರ್ಧರಿಸಿತು. ಈ ನಿರ್ಧಾರ ಘೋಷಣೆ ಮಾಡಿದ ಬೆನ್ನಲ್ಲೇ ಕೇಂದ್ರವು ಜಮ್ಮು ಕಾಶ್ಮೀರದ ಹಲವು ರಾಜಕೀಯ ನಾಯಕರುಗಳನ್ನು ಬಂಧನದಲ್ಲಿರಿಸಿತ್ತು. ಜೊತೆಗೆ ಇಂಟರ್‌ನೆಟ್ ನಿಷೇಧಿಸಿತ್ತು. ಹಾಗೆಯೇ ಬಿಜೆಪಿ 370ನೇ ವಿಧಿ ರದ್ಧತಿ ದೊಡ್ಡ ಸಾಧನೆ ಎಂಬಂತೆ ಬಿಂಬಿಸಿ ಚುನಾವಣೆಯಲ್ಲಿ ಪ್ರಚಾರಕ್ಕೆ ಇಳಿಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...