ವೇದಿಕೆಯಲ್ಲಿ ಕೋಳಿ ಕೊಂದು ರಕ್ತ ಕುಡಿದ ಆರೋಪ; ಕಲಾವಿದನ ವಿರುದ್ಧ ಪ್ರಕರಣ ದಾಖಲು

Date:

ವೇದಿಕೆಯಲ್ಲಿ ಪ್ರದರ್ಶನದ ಸಂದರ್ಭದಲ್ಲಿ ಕೋಳಿ ಕೊಂದು ರಕ್ತ ಕುಡಿದ ಆರೋಪದ ಮೇಲೆ ಅರುಣಾಚಲ ಪ್ರದೇಶದ ಕಲಾವಿದನ ಮೇಲೆ ಪ್ರಕರಣ ದಾಖಲಾಗಿದೆ. ವೇದಿಕೆಯ ಪ್ರದರ್ಶನದ ವೇಳೆ ಕಲಾವಿದ ಕೋನ್ ವಾಯ್ ಸನ್ ಕೋಳಿಯ ಕತ್ತು ಸೀಳಿ ರಕ್ತವನ್ನು ಕುಡಿದ ಕಾರಣ ಸನ್ ವಿರುದ್ಧ ಅರುಣಾಚಲ ಪ್ರದೇಶ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (ಪಿಇಟಿಎ) ಅಕ್ಟೋಬರ್ 27ರಂದು ನಡೆದ ಈ ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಇಟಾನಗರ ಪೊಲೀಸರಿಗೆ ದೂರು ನೀಡಿದೆ.

ಇದನ್ನು ಓದಿದ್ದೀರಾ? ಚಿಕ್ಕನಾಯಕನಹಳ್ಳಿ | ವಿಚಿತ್ರ ಘಟನೆ: ದೇವಸ್ಥಾನಕ್ಕೆ ತೆರಳಿ ಕೋಳಿ ಮೊಟ್ಟೆ ಹೊಡೆಯುತ್ತಿದ್ದ ಆರೋಪಿಯ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫೇಸ್‌ಬುಕ್‌ನಲ್ಲಿ ರೆಗ್ಗೀ/ಫೋಕ್ ಫ್ಯೂಷನ್ ಕಲಾವಿದ, ಗೀತರಚನೆಕಾರ, ಸಂಯೋಜಕ ಮತ್ತು ಸಂಗೀತಗಾರ ಎಂದು ಗುರುತಿಸಿಕೊಂಡ ಕೋನ್ ವಾಯ್ ಸನ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 325 (ಯಾವುದೇ ಪ್ರಾಣಿಯನ್ನು ಕೊಲ್ಲುವುದು, ವಿಷಪೂರಿತಗೊಳಿಸುವುದು, ಯಾವುದೇ ಪ್ರಾಣಿಯನ್ನು ಊನಗೊಳಿಸುವುದು) ಮತ್ತು ಪ್ರಾಣಿಗಳ ವಿರುದ್ಧ ಕ್ರೌರ್ಯ ತಡೆಗಟ್ಟುವಿಕೆ ಕಾಯಿದೆ, 1960 ಸೆಕ್ಷನ್ 11ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಘಟನೆಯು ಪ್ರೇಕ್ಷಕರು ಮತ್ತು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಈ ಕಾರ್ಯಕ್ರಮ ಆಯೋಜಿಸಿದವರು ಈ ಕೃತ್ಯದ ಬಗ್ಗೆ ತಮಗೆ ಮೊದಲೇ ಮಾಹಿತಿ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಇನ್ನು ಕಲಾವಿದ ಕೋನ್ ವಾಯ್ ಸನ್ ಕ್ಷಮೆಯಾಚಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...