ಹಲವು ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ; ಕಾಮುಕನ ಬಂಧನ

Date:

ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಹಲವು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ 37 ವರ್ಷದ ಕಾಮುಕನನ್ನು ಬಂಧಿಸಿರುವುದಾಗಿ ಪೊಲೀಸರು ಗುರುವಾರ ತಿಳಿಸಿದ್ದಾರೆ. ಆದರೆ ಆರೋಪಿಯ ಹೆಸರನ್ನು ಬಹಿರಂಗಪಡಿಸಿಲ್ಲ.

ಆರೋಪಿಯು ಪಶ್ಚಿಮ ಕಮೆಂಗ್ ಜಿಲ್ಲೆಯ ದಿರಾಂಗ್‌ನ ನೂನಾ ಕ್ಯಾಂಪ್ ಗ್ರಾಮದವನಾಗಿದ್ದು, ಇಟಾನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಬಳಿಕ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರೋಹಿತ್ ರಾಜ್‌ಬೀರ್ ಸಿಂಗ್ ತಿಳಿಸಿದ್ದಾರೆ.

ಸೆಪ್ಟೆಂಬರ್ 7ರಂದು 14 ವರ್ಷದ ಬಾಲಕಿಗೆ ಆರೋಪಿ ಲೈಂಗಿಕ ಕಿರುಕುಳ ನೀಡಿದ್ದನು. ಇದಾದ ಬಳಿಕ ಆತನನ್ನು ಬಂಧಿಸಲಾಗಿದೆ. ಬಾಲಕಿಯು ಶಾಲೆಗೆ ಹೋಗುತ್ತಿದ್ದಾಗ ತನ್ನ ಸ್ಕೂಟರ್‌ನಲ್ಲಿ ಲಿಫ್ಟ್ ನೀಡಿದ್ದ ಆರೋಪಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮಗಳು ಕಾಣೆಯಾಗಿದ್ದಾಳೆಂದು ಅಪಹರಣ ದೂರು ನೀಡಿದ್ದ ತಂದೆ; ಆತನಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ

“ಆರೋಪಿಯು ಸ್ಕೂಟರ್‌ ಚಲಾಯಿಸುತ್ತಿದ್ದಾಗ ಬಾಲಕಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ. ಬಾಲಕಿ ಆತನಿಂದ ತಪ್ಪಿಸಿಕೊಳ್ಳಲು ಚಲಿಸುತ್ತಿದ್ದ ಸ್ಕೂಟರ್‌ನಿಂದ ಜಿಗಿದಿದ್ದಾಳೆ” ಎಂದು ಎಸ್‌ಪಿ ಹೇಳಿದರು.

ದೂರು ದಾಖಲಾದ ನಂತರ, ಪೊಲೀಸರು ತನಿಖೆ ನಡೆಸಿದ್ದು ಇಟಾನಗರದ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿನಿಯರನ್ನು ಈ ಆರೋಪಿ ಗುರಿಯಾಗಿಸಿಕೊಂಡಿದ್ದ ಎಂಬ ಮಾಹಿತಿ ಬಹಿರಂಗವಾಗಿದೆ. ಈಗಾಗಲೇ ಆರೋಪಿ ಹಲವು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂಬುದು ತನಿಖೆಯಿಂದ ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಶಾಲಾ ವ್ಯಾನ್ ಚಾಲಕನ ಬಂಧನ

ಸದ್ಯ ಒಟ್ಟು 7 ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ನಡೆಸಿರುವುದು ತನಿಖೆಯಿಂದ ತಿಳಿದುಬಂದಿದೆ. ಈ ಪೈಕಿ ನಾಲ್ವರು ಶಾಲಾ ವಿದ್ಯಾರ್ಥಿನಿಯರಾಗಿದ್ದು ಉಳಿದ ನಾಲ್ವರು ಕಾಲೇಜು ವಿದ್ಯಾರ್ಥಿನಿಯರಾಗಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರೋಹಿತ್ ರಾಜ್‌ಬೀರ್ ಸಿಂಗ್ ತಿಳಿಸಿದ್ದಾರೆ.

ಇನ್ನು ಆರೋಪಿಯು ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದು, ಇನ್ನೂ ಹಲವು ವಿದ್ಯಾರ್ಥಿಗಳಿಗೆ ಲೈಂಗಿಕ ದೌರ್ಜನ್ಯ ನಡೆಸಿರುವ ಶಂಕೆಯಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...