ಅರುಣಾಚಲ ಪ್ರದೇಶದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಪೆಮಾ ಖಂಡು ಇಂದು ಸತತ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಪಕ್ಷದ ಹಿರಿಯ ನಾಯಕ ಚೌನಾ ಮೇನ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲರಾದ ಕೆ ಟಿ ಪರ್ನಾಯಕ್ ಪ್ರಮಾಣವಚನ ಬೋಧಿಸಿದರು. ಖಂಡು ಅವರ ಜೊತೆ 11 ಇತರ ಶಾಸಕರು ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ಬಿಗಿಮುಷ್ಟಿಯಲ್ಲಿ ಬಲಿಷ್ಠ ಖಾತೆಗಳು; ತೆಪ್ಪಗಿರುವವೇ ಮಿತ್ರಪಕ್ಷಗಳು?
ಸಮಾರಂಭದಲ್ಲಿ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವರಾದ ಜಿ ಪಿ ನಡ್ಡಾ, ಕಿರಣ್ ರಿಜಿಜು ಹಾಗೂ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಉಪಸ್ಥಿತರಿದ್ದರು.
ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದೆ.60 ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ 46 ಕ್ಷೇತ್ರಗಳಲ್ಲಿ ವಿಜಯಸಾಧಿಸಿದೆ. ಇವರಲ್ಲಿ ಮುಖ್ಯಮಂತ್ರಿಯಾಗಿರುವ ಪಿಮಾ ಖಂಡು ಸೇರಿದಂತೆ 10 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಇನ್ನುಳಿದಂತೆ ಎನ್‌ಪಿಪಿ 5, ಎನ್‌ಸಿಪಿ 3, ಪಿಪಿಎ 2 ಹಾಗೂ ಕಾಂಗ್ರೆಸ್ 1 ಕ್ಷೇತ್ರಗಳಲ್ಲಿ ಜಯಗಳಿಸಿದ್ದವು.





