ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದರೂ ಕೇಜ್ರಿವಾಲ್‌ಗೆ ಬಿಡುಗಡೆ ಭಾಗ್ಯವಿಲ್ಲ

Date:

ದೆಹಲಿ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

ಕೇಜ್ರಿವಾಲ್‌ ಅವರಿಗೆ 90 ದಿನದ ನಂತರ ಜಾಮೀನು ದೊರೆತಿದೆ. ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದರೂ ಕೇಜ್ರಿವಾಲ್‌ಗೆ ಬಿಡುಗಡೆ ಭಾಗ್ಯವಿಲ್ಲ. ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಸಿಬಿಐ ಬಂಧಿಸಿರುವುದರಿಂದ ಅವರು ತಿಹಾರ್‌ ಜೈಲಿನಲ್ಲಿ ಉಳಿಯಬೇಕಾಗಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು ಮೇ 17 ರಂದು ಕೇಜ್ರಿವಾಲ್ ಅವರ ಮನವಿಯ ತೀರ್ಪನ್ನು ಕಾಯ್ದಿರಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಪ್ರೀಂ ಪೀಠವು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರ ಬಂಧನ ಪ್ರಶ್ನಿಸಿ ಮಾಡಿದ ಮನವಿಯ ಬಗ್ಗೆ ಈ ವರ್ಷದ ಏಪ್ರಿಲ್‌ನಲ್ಲಿ ಜಾರಿ ನಿರ್ದೇಶನಾಲಯದಿಂದ ಪ್ರತಿಕ್ರಿಯೆ ಕೋರಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮನಗರ ಜಿಲ್ಲೆ ಹೆಸರು ಬದಲಾವಣೆ ಯಾರಿಗಾಗಿ, ಏತಕ್ಕಾಗಿ?

ಪ್ರಕರಣದಲ್ಲಿ ತನ್ನ ಬಂಧನವನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್‌ನ ಏಪ್ರಿಲ್ 9 ರ ಆದೇಶವನ್ನು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಏತನ್ಮಧ್ಯೆ, ಸೆಪ್ಟೆಂಬರ್ 9 ರಂದು ಇ.ಡಿ ತಮಗೆ ನೀಡಲಾದ ಸಮನ್ಸ್‌ಗಳನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರ ಅರ್ಜಿಯನ್ನು ವಿಚಾರಣೆಗೆ ದೆಹಲಿ ಹೈಕೋರ್ಟ್ ಗುರುವಾರ(ಜುಲೈ 11) ಪಟ್ಟಿ ಮಾಡಿದೆ. ನ್ಯಾಯಮೂರ್ತಿ ಪ್ರತಿಬಾ ಎಂ ಸಿಂಗ್ ನೇತೃತ್ವದ ಪೀಠವು ಸಲ್ಲಿಸಿದ ಉತ್ತರಕ್ಕೆ ಮರುಪರಿಶೀಲನೆ ಸಲ್ಲಿಸಲು ಎಎಪಿ ನಾಯಕರಿಗೆ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಜೂನ್ 20 ರಂದು, 1 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮೇಲೆ ಇಲ್ಲಿನ ವಿಚಾರಣಾ ನ್ಯಾಯಾಲಯವು ಅವರಿಗೆ ಜಾಮೀನು ನೀಡಿತು. ಆದಾಗ್ಯೂ, ಇ.ಡಿ ಮರುದಿನ ದೆಹಲಿ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ ನಂತರ ಜಾಮೀನು ಆದೇಶವನ್ನು ರದ್ದುಗೊಳಿಸಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...