ಅರವಿಂದ್ ಕೇಜ್ರಿವಾಲ್ ಆರೋಗ್ಯವಾಗಿದ್ದಾರೆ, ಆದರೆ ದಿನಕ್ಕೆ ಎರಡು ಡೋಸ್ ಇನ್ಸುಲಿನ್ ನೀಡಲಾಗುತ್ತಿದೆ: ವೈದ್ಯರು

Date:

ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆರೋಗ್ಯವಾಗಿದ್ದಾರೆ. ಆದರೆ ದಿನಕ್ಕೆ ಎರಡು ಡೋಸ್ ಇನ್ಸುಲಿನ್ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ದೆಹಲಿ ನ್ಯಾಯಾಲಯದ ನಿರ್ದೇಶನದ ಮೇರೆಗೆ ಆರಂಭಿಸಲಾದ ಐದು ಸದಸ್ಯರ ವೈದ್ಯಕೀಯ ಮಂಡಳಿಯು ಕಡಿಮೆ ಪ್ರಮಾಣದ ಇನ್ಸುಲಿನ್ ಅನ್ನು ಕೇಜ್ರಿವಾಲ್ ಅವರಿಗೆ ಮುಂದುವರಿಸಲು ತಿಳಿಸಿದೆ. ಅಂತಃಸ್ರಾವಶಾಸ್ತ್ರಜ್ಞರು ಮತ್ತು ಮಧುಮೇಹ ತಜ್ಞರನ್ನು ಒಳಗೊಂಡಿರುವ ಮಂಡಳಿಯು ಈ ನಿರ್ಧಾರವನ್ನು ತೆಗೆದುಕೊಂಡಿದೆ.

ಈ ಬಗ್ಗೆ ವರ್ಚುವಲ್ ಕಾನ್ಫರೆನ್ಸ್ ನಡೆಸಿ ವೈದ್ಯರು ಮಾಹಿತಿ ನೀಡಿದ್ದಾರೆ. ಕೇಜ್ರಿವಾಲ್ ಅವರು ಆರೋಗ್ಯವಾಗಿದ್ದಾರೆ ಮತ್ತು ನೀಡಲಾಗುವ ಔಷಧಿಗಳ ಪ್ರಮಾಣವನ್ನು ಬದಲಾಯಿಸುವ ಅಗತ್ಯವಿಲ್ಲ ಎಂದು ಮಂಡಳಿಯು ತೀರ್ಪು ನೀಡಿತು. ಏಳು ದಿನಗಳ ನಂತರ ಮುಂದಿನ ಪರಿಶೀಲನಾ ಸಭೆ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಜೈಲಿನಲ್ಲಿ ದೆಹಲಿ ಸಿಎಂ; ಎಎಪಿ ಚುನಾವಣಾ ಪ್ರಚಾರದಲ್ಲಿ ಕೇಜ್ರಿವಾಲ್ ಪತ್ನಿಗೆ ಪ್ರಮುಖ ಪಾತ್ರ

ಇನ್ಸುಲಿನ್‌ನ ಮೊದಲ ಡೋಸ್ ಅನ್ನು ಸೋಮವಾರ ಸಂಜೆ ಕೇಜ್ರಿವಾಲ್ ಅವರಿಗೆ ನೀಡಲಾಗಿದೆ. ಕೇಜ್ರಿವಾಲ್ ಅವರ ಸಕ್ಕರೆಯ ಮಟ್ಟವು 217 ಕ್ಕೆ ಏರಿದ ಬಳಿಕ ಈ ಡೋಸ್ ಅನ್ನು ನೀಡಲಾಗಿದೆ. ಮರುದಿನ ರಚನೆಯಾದ ವೈದ್ಯಕೀಯ ಮಂಡಳಿಯು ಐದು ದಿನಗಳವರೆಗೆ ಡೋಸೇಜ್ ಅನ್ನು ಮುಂದುವರಿಸಲು ಸಲಹೆ ನೀಡಿದೆ.

ಕೇಜ್ರಿವಾಲ್ ಅವರು ಈಗ ದಿನಕ್ಕೆ ಎರಡು ಬಾರಿ ಕಡಿಮೆ ಪ್ರಮಾಣದ ಇನ್ಸುಲಿನ್ ಅನ್ನು ಪಡೆಯುತ್ತಿದ್ದಾರೆ. ಮಧ್ಯಾಹ್ನದ ಊಟ ಮತ್ತು ರಾತ್ರಿ ಊಟಕ್ಕೆ ಮೊದಲು ಇನ್ಸುಲಿನ್ ನೀಡಲಾಗುತ್ತದೆ.

ಇದನ್ನು ಓದಿದ್ದೀರಾ?  ಸುಪ್ರೀಂ ಕೋರ್ಟ್‌ನಲ್ಲಿ ಕೇಜ್ರಿವಾಲ್ ಬಂಧನ ಸಮರ್ಥಿಸಿಕೊಂಡ ಇಡಿ; ಅಫಿಡವಿಟ್ ಸಲ್ಲಿಕೆ

“ಕೇಜ್ರಿವಾಲ್ ಅವರ ಆರೋಗ್ಯವನ್ನು ತಿಹಾರ್ ವೈದ್ಯರು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು ಅವರ ವೈದ್ಯರು ಸೂಚಿಸಿದ ಮನೆಯಲ್ಲಿ ತಯಾರಿಸಿದ ಆಹಾರ ಮತ್ತು ಇತರ ಔಷಧಿಗಳನ್ನು ಅವರಿಗೆ ನೀಡಲಾಗುತ್ತಿದೆ” ಎಂದು ತಿಹಾರ್ ಜೈಲಿನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯವು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದೆ. ಅಂದಿನಿಂದ ಕೇಜ್ರಿವಾಲ್ ಅವರು ಜೈಲಿನಲ್ಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...