ಹೈಕೋರ್ಟ್‌ನಲ್ಲಿ ಹಿನ್ನಡೆ: ಬಂಧನದ ವಿರುದ್ಧ ಸುಪ್ರೀಂ ಕೋರ್ಟ್‌ ಕದ ತಟ್ಟಿದ ಕೇಜ್ರಿವಾಲ್

Date:

ಅಬಕಾರಿ ನೀತಿ ಪ್ರಕರಣದಲ್ಲಿ ತನ್ನ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ಒಂದು ದಿನದ ಬಳಿಕ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಲಿದ್ದಾರೆ.

ಎಎಪಿ ನಾಯಕರ ವಕೀಲರು ಬೆಳಿಗ್ಗೆ 10.30 ರ ಸುಮಾರಿಗೆ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಿ ತುರ್ತು ವಿಚಾರಣೆಯನ್ನು ಕೋರಲಿದ್ದಾರೆ.

ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯ (ಇಡಿ) ಕೇಜ್ರಿವಾಲ್ ಅವನ್ನು ಬಂಧಿಸಿದ್ದು ಈ ಬಂಧನವನ್ನು ಪ್ರಶ್ನಿಸಿ ದೆಹಲಿ ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ನಿನ್ನೆ ವಜಾಗೊಳಿಸಿದೆ. ಸಾಮಾನ್ಯ ವ್ಯಕ್ತಿ ಮತ್ತು ಮುಖ್ಯಮಂತ್ರಿಯನ್ನು ಪ್ರಶ್ನಿಸಲು ತನಿಖಾ ಸಂಸ್ಥೆಗೆ ಪ್ರತ್ಯೇಕ ಮಾರ್ಗಸೂಚಿ ಇಲ್ಲ ಎಂದು ನ್ಯಾಯಾಲಯ ಒತ್ತಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಬಂಧನ ಅಕ್ರಮವಲ್ಲ; ಇಡಿ ವಿರುದ್ಧದ ಕೇಜ್ರಿವಾಲ್ ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್

ಇನ್ನು ದೆಹಲಿ ಹೈಕೋರ್ಟ್, “ಅಬಕಾರಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಬಂಧನ ಮಾನ್ಯವಾಗಿದೆ. ಅಕ್ರಮವಲ್ಲ” ಎಂದು ಹೇಳಿದೆ. “ಬಂಧನವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದ್ದು 2002ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್ 19ರ ಉಲ್ಲಂಘನೆಯಾಗಿದೆ ಎಂದು ಆರೋಪಿಸಲಾಗಿದೆ. ಅರ್ಜಿಯು ಜಾಮೀನಿಗಾಗಿ ಸಲ್ಲಿಸಿರುವುದಲ್ಲ. ಬಂಧನವನ್ನು ಕಾನೂನುಬಾಹಿರ ಎಂದು ಘೋಷಿಸಲು ಈ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ನ್ಯಾಯಾಲಯವು ಸ್ಪಷ್ಟಪಡಿಸುತ್ತದೆ” ಎಂದಿದೆ.

2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಂಧನ ಮಾಡಿರುವುದನ್ನು ಕೇಜ್ರಿವಾಲ್ ಈ ಹಿಂದೆ ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, “ಅರ್ಜಿದಾರರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಲಾಗಿದೆ ಮತ್ತು ನ್ಯಾಯಾಲಯವು ಕಾನೂನಿನ ಪ್ರಕಾರ ಅವರ ಚುನಾವಣೆಯ ಸಮಯವನ್ನು ಲೆಕ್ಕಿಸದೆ ನ್ಯಾಯಾಂಗ ಬಂಧನ ವಿಧಿಸಿದೆ” ಎಂದು ಹೇಳಿದೆ.

ಇದನ್ನು ಓದಿದ್ದೀರಾ?   ಅಬಕಾರಿ ನೀತಿ ಹಗರಣ| ಕವಿತಾ ನ್ಯಾಯಾಂಗ ಬಂಧನ ಎಪ್ರಿಲ್ 23ರವರೆಗೆ ವಿಸ್ತರಣೆ

ಹೈಕೋರ್ಟ್ ತೀರ್ಪಿಗೆ ಪ್ರತಿಕ್ರಿಯಿಸಿದ ಎಎಪಿ ನಾಯಕ ಮತ್ತು ದೆಹಲಿ ಸಚಿವ ಸೌರಭ್ ಭಾರದ್ವಾಜ್, “ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಮತ್ತು ಸಿಬಿಐ ತಮ್ಮ ಶೋಧದ ಸಮಯದಲ್ಲಿ ಒಂದು ರೂಪಾಯಿ ಕೂಡ ಸಿಕ್ಕಿಲ್ಲ. ಆದರೆ ಅವರು ಕೋಟಿಗಟ್ಟಲೆ ಹಣದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಇಡಿ ಮತ್ತು ಸಿಬಿಐಗೆ ಒಂದು ರೂಪಾಯಿ ಅಕ್ರಮ ಹಣವೂ ಸಿಕ್ಕಿಲ್ಲ” ಎಂದು ಹೇಳಿದರು.

ಇನ್ನು “ಸಾಕ್ಷಿಗಳ ಹೇಳಿಕೆಗಳನ್ನು ಬದಲಿಸಿ ಇಡಿಗೆ ಏನು ಬೇಕೋ ಅದನ್ನು ಹೇಳುವಂತೆ ಒತ್ತಡ ಹೇರಲಾಗಿದೆ. ಈ ವಿಷಯವು ಮನಿ ಲಾಂಡರಿಂಗ್ ಬಗ್ಗೆ ಅಲ್ಲ. ಇದು ಭಾರತದ ಇತಿಹಾಸದಲ್ಲಿ ಅತಿದೊಡ್ಡ ರಾಜಕೀಯ ಪಿತೂರಿಯಾಗಿದೆ” ಎಂದು ಆರೋಪಿಸಿದರು.

ಈ ಹಿಂದೆ ಕೇಜ್ರಿವಾಲ್ ಅವರು ಬಂಧನಕ್ಕೊಳಗಾದ ಒಂದು ದಿನದ ನಂತರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಆದರೆ ನಂತರ ಅರ್ಜಿ ಹಿಂಪಡೆದು ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದರು. ಇನ್ನು ಇದೇ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನ ಎಪ್ರಿಲ್ 23ರವರೆಗೆ ವಿಸ್ತರಣೆ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...