ಗುಜರಾತ್‌ ಪೊಲೀಸರನ್ನು ನನ್ನ ಭದ್ರತೆಗೆ ಏಕೆ ನಿಯೋಜಿಸಿದ್ದಾರೆ: ಕೇಜ್ರಿವಾಲ್ ಪ್ರಶ್ನೆ

Date:

ತನ್ನ ಭದ್ರತೆಗೆ ನಿಯೋಜಿಸಲಾಗಿದ್ದ ಪಂಜಾಬ್ ಪೊಲೀಸ್ ಸಿಬ್ಬಂದಿಯನ್ನು ಹಿಂದಕ್ಕೆ ಕರೆಸಿಕೊಂಡು ಗುಜರಾತ್ ಪೊಲೀಸರನ್ನು ಯಾಕೆ ನಿಯೋಜಿಸಲಾಗಿದೆ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

ಪಂಜಾಬ್ ಪೊಲೀಸರಿಗೆ ಚುನಾವಣಾ ಆಯೋಗ ಮತ್ತು ದೆಹಲಿ ಪೊಲೀಸರು ಗುರುವಾರ ಕೇಜ್ರಿವಾಲ್ ಭದ್ರತೆಗಾಗಿ ನಿಯೋಜಿಸಲಾಗಿದ್ದ ಸಿಬ್ಬಂದಿಯನ್ನು ಹಿಂದಕ್ಕೆ ಕರೆಸಿಕೊಳ್ಳುವಂತೆ ಸೂಚಿಸಿದ್ದಾರೆ. ಎರಡು ವಿಭಿನ್ನ ರಾಜ್ಯಗಳ ಪೊಲೀಸ್ ಸಿಬ್ಬಂದಿಯನ್ನು ಒಳಗೊಂಡ ಭದ್ರತಾ ವ್ಯವಸ್ಥೆಯು ಕಾನೂನಿಗೆ ವಿರುದ್ಧವಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಗುಜರಾತ್ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಿದ ಆದೇಶದ ಸ್ಕ್ರೀನ್ ಶಾಟ್‌ಗಳನ್ನು ಹಂಚಿಕೊಂಡು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚುನಾವಣಾ ಆಯೋಗವು ಪಂಜಾಬ್ ಪೊಲೀಸರನ್ನು ಹಿಂದಕ್ಕೆ ಕರೆಸಿಕೊಂಡು ಗುಜರಾತ್ ಪೊಲೀಸರನ್ನು ನಿಯೋಜಿಸಿದೆ. ದೆಹಲಿಯಲ್ಲಿ ಏನು ನಡೆಯುತ್ತಿದೆ? ಇದರ ಹಿಂದಿನ ಉದ್ದೇಶವೇನು? ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಚೋದನಕಾರಿ ಭಾಷಣ – ಆಯುಧ ಹಂಚಿಕೆ ಕಾನೂನು ಉಲ್ಲಂಘನೆಯಲ್ಲವೇ?

ಕೇಜ್ರಿವಾಲ್ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗುಜರಾತ್ ಗೃಹ ಸಚಿವ ಹರ್ಷ ಸಾಂಘ್ವಿ, ವಿವಿಧ ರಾಜ್ಯಗಳಿಗೆ ಚುನಾವಣಾ ಆಯೋಗದ ಆದೇಶದಂತೆ ಸಿಬ್ಬಂದಿಯನ್ನು ಒದಗಿಸಲಾಗಿದೆ. ನಿಮಗೆ ಚುನಾವಣಾ ಆಯೋಗದ ನಿಯಮಗಳ ಬಗ್ಗೆ ತಿಳಿದಿಲ್ಲ ಎಂದು ನನಗೆ ಆಶ್ಚರ್ಯವಾಗಿದೆ. ಅವರು ಗುಜರಾತ್ ಮಾತ್ರವಲ್ಲದೆ ವಿವಿಧ ರಾಜ್ಯಗಳಿಂದ ಪಡೆಗಳನ್ನು ಕೋರಿದ್ದಾರೆ. ಅವರ ಕೋರಿಕೆಯಂತೆ, ಚುನಾವಣೆಗಾಗಿ ಗುಜರಾತ್‌ನಿಂದ 8 ಎಸ್‌ಆರ್‌ಪಿ ತುಕಡಿಗಳನ್ನು ದೆಹಲಿಗೆ ಕಳುಹಿಸಲಾಗಿದೆ. ಗುಜರಾತ್‌ಅನ್ನು ಏಕೆ ಪ್ರತ್ಯೇಕವಾಗಿ ಉಲ್ಲೇಖಿಸಿದ್ದೀರಿ ಎಂದು ಕೇಜ್ರಿವಾಲ್‌ಗೆ ಪ್ರಶ್ನಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...