ಎರಡು ದಿನಗಳಲ್ಲಿ ರಾಜೀನಾಮೆ ನೀಡುವೆ: ಅರವಿಂದ್‌ ಕೇಜ್ರಿವಾಲ್‌ ಘೋಷಣೆ

Date:

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಎರಡು ದಿನಗಳಲ್ಲಿ ತಮ್ಮ ಸಿಎಂ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ದೆಹಲಿ ಅಬಕಾರಿ ಹಗರಣದಲ್ಲಿ ಸುಪ್ರೀಂ ಕೋರ್ಟಿನಿಂದ ಜಾಮೀನು ಪಡೆದು ತಿಹಾರಿ ಜೈಲಿನಿಂದ ಬಂದ ಒಂದು ದಿನದ ನಂತರ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ಪಕ್ಷದ ಸಭೆಯ ನಂತರ ಮಾತನಾಡಿದ ಅವರು, ಎಎಪಿ ಭವಿಷ್ಯವು ಈಗ ದೆಹಲಿ ಜನತೆ ಕೈಯಲ್ಲಿ ಎಂದು ಹೇಳಿರುವ ಕೇಜ್ರಿವಾಲ್ ಈಗಿನ ಬಿಜೆಪಿ ಸರ್ಕಾರದ ಆಡಳಿತ ಆಂಗ್ಲರ ಕಾನೂನಿಗಿಂತ ಕೆಟ್ಟದಾಗಿದೆ. ಜನರ ತೀರ್ಪು ನೀಡುವವರೆಗೂ ನಾನು ವಿರಮಿಸುವುದಿಲ್ಲ. ನಮ್ಮ ಬಂಡೆಯಂತಹ ಸಂಕಲ್ಪವನ್ನು ಕೇಂದ್ರ ಸರ್ಕಾರದ ಪಿತೂರಿಗಳಿಂದ ಮುರಿಯಲು ಸಾಧ್ಯವಿಲ್ಲ. ಎಂದು ತಿಳಿಸಿದ್ದಾರೆ.

ದೆಹಲಿಯ ಪ್ರತಿ ಮನೆ ಪ್ರತಿ ಬೀದಿಗೂ ತೆರಳುವೆ. ಜನರಿಂದ ತೀರ್ಪು ಸ್ವೀಕರಿಸುವವರೆಗೂ ನಾನು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ. ನಾನು ಜೈಲಿನಲ್ಲಿದ್ದಾಗ ಸ್ವತಂತ್ರ ದಿನಾಚರಣೆ ಸಂದರ್ಭದಲ್ಲಿ ಸಚಿವೆ ಅತಿಶಿ ಅವರಿಂದ ಧ್ವಜಾರೋಹಣ ಮಾಡಿಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್‌ ಅವರಿಗೆ ಪತ್ರ ಬರೆದಿದ್ದೆ.ಆದರೆ ಪತ್ರವು ಯಾವುದೇ ಉತ್ತರವಿಲ್ಲದೆ ವಾಪಸ್‌ ಬಂದಿತು. ಇನ್ನೊಮ್ಮೆ ಪತ್ರ ಬರೆದರೆ ನಿಮ್ಮ ಕುಟುಂಬದವರನ್ನು ಭೇಟಿ ಮಾಡಿಸಲು ಬಿಡುವುದಿಲ್ಲ ಎಂಬ ಎಚ್ಚರಿಕೆಯನ್ನು ನೀಡಲಾಗಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಆಶಯವೋ, ಅಣಕವೋ?

ದೆಹಲಿ ಅಬಕಾರಿ ಹಗರಣದಲ್ಲಿ ಸೆರೆಮನೆಯಲ್ಲಿರುವ ಸತ್ಯೇಂದ್ರ ಜೈನ್‌ ಅಮಾನುತ್ತುಲ್ಲ ಖಾನ್‌ ಅವರಿಗೂ ಧನ್ಯವಾದ ತಿಳಿಸಿದ ಕೇಜ್ರಿವಾಲ್‌ ಅವರು ಶೀಘ್ರದಲ್ಲೇ ಅವರು ಕೂಡ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎಂದು ತಿಳಿಸಿದರು.

ಪ್ರಜಾಪ್ರಭುತ್ವವನ್ನು ಉಳಿಸುವುದಕ್ಕಾಗಿ ಜೈಲಿಗೋದರೂ ರಾಜೀನಾಮೆ ನೀಡಿರಲಿಲ್ಲ.ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇರಳ ಸಿಎಂ ಪಿಣರಾಯಿ ವಿಜಯನ್‌ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧವು ಪ್ರಕರಣಗಳನ್ನು ದಾಖಲಿಸಲಾಗಿದೆ. ನಾನು ಬಿಜೆಪಿ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ನಿಮ್ಮ ಮೇಲೆ ಪ್ರಕರಣ ದಾಖಲಾದರೂ ರಾಜೀನಾಮೆ ನೀಡಬೇಡಿ. ಇದು ಬಿಜೆಪಿಯ ಹೊಸ ಆಟವಾಗಿದೆ ಎಂದು ತಿಳಿಸಿದ್ದಾರೆ

ದೆಹಲಿ ವಿಧಾನಸಭೆ ಚುನಾವಣೆ 2025ರ ಫೆಬ್ರವರಿಯಲ್ಲಿ ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...