4.5 ಕೆಜಿ ತೂಕ ಕಳೆದುಕೊಂಡ ಕೇಜ್ರಿವಾಲ್, ಜೈಲಿನಲ್ಲಿ ಅಸ್ವಸ್ಥ ಎಂದ ಎಎಪಿ

Date:

ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಸ್ವಸ್ಥರಾಗಿದ್ದಾರೆ ಎಂದು ವರದಿಯಾಗಿದೆ. ಮಾರ್ಚ್ 21 ರಂದು ಅವರನ್ನು ಬಂಧಿಸಿದಾಗಿನಿಂದ ಈವರೆಗೆ ದೆಹಲಿ ಸಿಎಂ 4.5 ಕೆಜಿ ತೂಕವನ್ನು ಕಳೆದುಕೊಂಡಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಮೂಲಕಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಆದರೆ ಈ ನಡುವೆ ತಿಹಾರ್ ಜೈಲಿನಲ್ಲಿರುವ ಅಧಿಕಾರಿಗಳು ಅರವಿಂದ್ ಕೇಜ್ರಿವಾಲ್ ಅವರು ಚೆನ್ನಾಗಿದ್ದಾರೆ ಎಂದು ಹೇಳಿದ್ದಾರೆ. ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಬಂಧನಕ್ಕೆ ಒಳಗಾಗಿರುವ ಕೇಜ್ರಿವಾಲ್ ಅವರನ್ನು ಇಲ್ಲಿನ ನ್ಯಾಯಾಲಯವು ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನ ಜೈಲು ಸಂಖ್ಯೆ 2 ರಲ್ಲಿ 14X8 ಅಡಿ ಸೆಲ್‌ನಲ್ಲಿ ಇರಿಸಲಾಗಿದೆ. ಮಧುಮೇಹ ಹೊಂದಿರುವ ಕೇಜ್ರಿವಾಲ್ ಅವರ ರಕ್ತದಲ್ಲಿನ ಸಕ್ಕರೆಯ ಮಟ್ಟವು ಕಳೆದ ಕೆಲವು ದಿನಗಳಿಂದ ಏರುಪೇರಾಗುತ್ತಿದೆ. ಒಂದು ಬಾರಿ 50 ಕ್ಕಿಂತ ಕಡಿಮೆಯಾಗಿದೆ ಎಂದು ವರದಿಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?    ಇಡಿ ಕಸ್ಟಡಿಯಲ್ಲಿ ಸಿಎಂ ಕೇಜ್ರಿವಾಲ್ ಆರೋಗ್ಯ ಹದಗೆಟ್ಟಿದೆ: ಎಎಪಿ

ಅವರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಔಷಧಿಗಳನ್ನು ನೀಡಲಾಗಿದೆ. ಇನ್ನು ಸಕ್ಕರೆ ಮಟ್ಟ ಪರಿಶೀಲನೆಗಾಗಿ ಶುಗರ್ ಸೆನ್ಸರ್ ಅನ್ನು ಕೂಡಾ ನೀಡಲಾಗಿದೆ. ಸಕ್ಕರೆ ಮಟ್ಟ ಕುಸಿಯುತ್ತಿದ್ದಂತೆ ದೇಹದಲ್ಲಿರುವ ಸಕ್ಕರೆ ಪ್ರಮಾಣ ಸಮತೋಲನ ಮಾಡಿಕೊಳ್ಳಲೆಂದು ಸಿಹಿ ತಿಂಡಿ (ಟೋಫಿ) ನೀಡಲಾಗಿದೆ.

ಮುಖ್ಯಮಂತ್ರಿಗಳಿಗೆ ಮಧ್ಯಾಹ್ನ ಮತ್ತು ರಾತ್ರಿಯ ಊಟವನ್ನು ಮನೆಯಿಂದ ಮಾಡಿ ಕಳುಹಿಸಲಾಗುತ್ತಿದ್ದು, ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ. ಯಾವುದೇ ತುರ್ತು ಪರಿಸ್ಥಿತಿಗಾಗಿ ಅವರ ಸೆಲ್ ಬಳಿ ತ್ವರಿತ ಪ್ರತಿಕ್ರಿಯೆ ತಂಡವನ್ನು ನಿಯೋಜಿಸಲಾಗಿದೆ ಎಂದು ಜೈಲಿನ ಅಧಿಕಾರಿಗಳು ಹೇಳಿದ್ದಾರೆ. ಇನ್ನು ಕೇಜ್ರಿವಾಲ್ ವಿಡಿಯೋ ಕಾನ್ಫರೆನ್ಸ್ ಮೂಲಕ ತಮ್ಮ ಪತ್ನಿ ಸುನೀತಾ ಅವರೊಂದಿಗೆ ಮಾತನಾಡಿದ್ದು ಅವರ ವಕೀಲರನ್ನು ವೈಯಕ್ತಿಕವಾಗಿ ಭೇಟಿ ಮಾಡಿದ್ದಾರೆ.

ಕೇಜ್ರಿವಾಲ್ ಬಿಡುಗಡೆಯು ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಅಡ್ಡಿಯಾಗಬಹುದು ಎಂದು ಜಾರಿ ನಿರ್ದೇಶನಾಲಯವು ಕಳವಳ ವ್ಯಕ್ತಪಡಿಸಿದ್ದು ಅದಾದ ಬಳಿಕ ದೆಹಲಿ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಕೇಜ್ರಿವಾಲ್ ಅವರು ತನಿಖೆಗೆ ಸಹಕರಿಸುತ್ತಿಲ್ಲ ಎಂದು ಕೇಂದ್ರೀಯ ಸಂಸ್ಥೆ ಹೇಳಿದೆ. ಮಧ್ಯಂತರ ಪರಿಹಾರಕ್ಕಾಗಿ ದೆಹಲಿ ಮುಖ್ಯಮಂತ್ರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...