ಅಬಕಾರಿ ಹಗರಣದಲ್ಲಿ ಹಣ ಎಲ್ಲಿಂದ ಬಂತು ಎಂಬುದನ್ನು ಕೇಜ್ರಿವಾಲ್‌ರಿಂದ ನಾಳೆ ಬಹಿರಂಗ: ಪತ್ನಿ ಸುನಿತಾ

Date:

ದೆಹಲಿ ಹೈಕೋರ್ಟ್ ಮುಂದೆ ನಾಳೆ (ಮಾ.28ರಂದು) ಅರವಿಂದ್ ಕೇಜ್ರಿವಾಲ್ ಅವರು ಹಾಜರಾಗಲಿದ್ದು, ಅಬಕಾರಿ ಹಗರಣ ಎಂದು ಕರೆಯಲಾಗುವ ಸತ್ಯದ ಬಗ್ಗೆ ಬಹಿರಂಗಪಡಿಸಲಿದ್ದಾರೆ ಎಂದು ಕೇಜ್ರಿವಾಲ್‌ ಅವರ ಪತ್ನಿ ಸುನಿತಾ ಅವರು ತಿಳಿಸಿದ್ದಾರೆ.

ಹಗರಣದ ಹಣ ಎಲ್ಲಿಂದ ಬಂತೆಂಬುದು ಹಾಗೂ ಸಾಕ್ಷ್ಯಗಳನ್ನು ಕೂಡ ಇದೇ ಸಂದರ್ಭದಲ್ಲಿ ದೆಹಲಿ ಮುಖ್ಯಮಂತ್ರಿ ಒದಗಿಸಲಿದ್ದಾರೆ ಎಂದು ಸುನಿತಾ ಅವರು ತಿಳಿಸಿದ್ದಾರೆ.

ತಮ್ಮ ಪತಿಯ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುನಿತಾ ಕೇಜ್ರಿವಾಲ್, ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿಯಲ್ಲಿ ಹಗರಣ ನಡೆದಿದೆ ಎಂದು ತನಿಖೆಯ ಸಲುವಾಗಿ ಜಾರಿ ನಿರ್ದೇಶನಾಲಯ ಮಾ.21ರಂದು ತಮ್ಮ ಕಸ್ಟಡಿಗೆ ತೆಗೆದುಕೊಂಡಿದೆ. ಇ.ಡಿ ದಾಳಿ ನಡೆಸಿದಾಗ ದೆಹಲಿ ಸಿವಿಲ್ ಲೈನ್ಸ್‌ ಪ್ರದೇಶದ ಮನೆಯಲ್ಲಿ ಜಾರಿ ನಿರ್ದೇಶನಾಲಯಕ್ಕೆ ಕೇವಲ 73 ಸಾವಿರ ರೂ. ಮಾತ್ರ ಹಣ ದೊರಕಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಭ್ರಷ್ಟರು ಬೇಕಾಗಿದ್ದಾರೆ’ ಇದು ಬಿಜೆಪಿಯ ಹೊಸ ಜಾಹೀರಾತು

ತಮ್ಮ ಪತಿ ದೇಶ ಭಕ್ತರಾಗಿದ್ದು, ಅಬಕಾರಿ ಹಗರಣ ಎಂದು ಕರೆಯಲಾಗುವ ಹಗರಣದಲ್ಲಿ ಇ.ಡಿ 250ಕ್ಕೂ ಹೆಚ್ಚು ದಾಳಿಗಳನ್ನು ನಡೆಸಿದೆ. ಹಗರಣ ಎನ್ನುತ್ತಿರುವ ಇ.ಡಿ ಹಣಕ್ಕಾಗಿ ಶೋಧ ನಡೆಸುತ್ತಿದ್ದಾರೆ. ಆದರೆ ಅವರಿಗೆ ಇನ್ನೂ ಹಣ ದೊರಕಿಲ್ಲ ಎಂದು ಸುನಿತಾ ಹೇಳಿದ್ದಾರೆ.

”ಕೇಜ್ರಿವಾಲ್ ಅವರು ಮಾ.28ರಂದು ಕೋರ್ಟ್‌ನಲ್ಲಿ ಎಲ್ಲವನ್ನು ಬಹಿರಂಗ ಪಡಿಸಲಿದ್ದಾರೆ. ಹಣ ಎಲ್ಲಿಂದ ಬಂತು ಹಾಗೂ ದಾಖಲೆಗಳನ್ನು ಕೂಡ ಅವರು ಒದಗಿಸಲಿದ್ದಾರೆ” ಎಂದು ಸುನಿತಾ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಕೇಂದ್ರ ಸರ್ಕಾರವು ಕೇಜ್ರಿವಾಲ್ ವಿರುದ್ಧ ಪ್ರಕರಣ ದಾಖಲಿಸಿದೆ. ಅವರು ದೆಹಲಿಯನ್ನು ನಾಶಪಡಿಸುವ ಬಯಕೆ ಹೊಂದಿದ್ದಾರೆಯೆ? ಅವರು ಜನರಿಗೆ ತೊಂದರೆ ನೀಡಲು ಬಯಸಿದ್ದಾರೆಯೆ? ಕೇಜ್ರಿವಾಲ್‌ ಅವರು ಇದರಿಂದ ತುಂಬ ನೊಂದಿದ್ದಾರೆ ಎಂದು ಸುನಿತಾ ಅವರು ಹೇಳಿದರು.

ಅರವಿಂದ್‌ ಕೇಜ್ರಿವಾಲ್ ಅವರನ್ನು ಇ.ಡಿ ಬಂಧಿಸಿರುವುದು ಅಕ್ರಮ ಎಂದು ಎಎಪಿ ದೆಹಲಿ ಹೈಕೋರ್ಟಿನಲ್ಲಿ ದೂರು ದಾಖಲಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರು ಮಾ.28ರವರೆಗೂ ಇ.ಡಿ ಕಸ್ಟಡಿಯಲ್ಲಿರಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...