ಅರವಿಂದ್ ಕೇಜ್ರಿವಾಲ್ ಆಪ್ತ ಸಹಾಯಕನನ್ನು ವಜಾಗೊಳಿಸಿದ ಕೇಂದ್ರ ವಿಚಕ್ಷಣ ದಳ

Date:

ಅಬಕಾರಿ ಹಗರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಎಂಬುವವರನ್ನು ವಿಚಕ್ಷಣ ಇಲಾಖಾ ನಿರ್ದೇಶನಾಲಯವು ತಮ್ಮ ಸೇವೆಯಿಂದ ವಜಾಗೊಳಿಸಿದೆ. ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೇವೆಯಿಂದ ವಿಮುಕ್ತಿಗಿಳಿಸಲಾಗಿದೆ.

ಬಿಭವ್‌ ಕುಮಾರ್ ಅವರನ್ನು ಸಂಪೂರ್ಣವಾಗಿ ವಿಚಾರಣೆಗೊಳಪಡಿಸಿದ ನಂತರ ಕಾನೂನು ಅಡಚಣೆ ಹಾಗೂ ಅವರ ನೇಮಕಾತಿಗಾಗಿ ಅನುಸರಿಸಿರುವ ವಿಧಾನ ಉಲ್ಲಂಘನೆಯಾಗಿರುವುದು ತಿಳಿದುಬಂದಿದ್ದು, ಈ ಹಿನ್ನೆಲೆಯಲ್ಲಿ ಇವರನ್ನು ತಮ್ಮ ಸೇವೆಗಳಿಂದ ವಜಾಗೊಳಿಸಲಾಗಿದೆ. ಆದೇಶವು ತಕ್ಷಣ ಜಾರಿಗೆ ಬರಲಿದೆ ಎಂದು ವಿಚಕ್ಷಣ ಇಲಾಖೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ ಪ್ರಣಾಳಿಕೆ- ಸುಳ್ಳು ಸುಳ್ಳೇ ಮುಸ್ಲಿಮ್ ಲೀಗ್ ಮೊಹರು ಹಾಕಿದ ಮೋದಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2007ರಲ್ಲಿ ಮಹೇಶ್ ಪಾಲ್ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಬಿಭವ್‌ ಕುಮಾರ್ ವಿರುದ್ಧ ಎಫ್‌ಐಆರ್‌ ದಾಖಲಾಗಿರುವುದನ್ನು ವಿಚಕ್ಷಣ ಇಲಾಖೆ ವಜಾಗೊಳಿಸುವ ಆದೇಶದಲ್ಲಿ ಉಲ್ಲೇಖಿಸಿದೆ. ನೋಯ್ಡಾದ ಅಭಿವೃದ್ಧಿ ಪ್ರಾಧಿಕಾರದಲ್ಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ತಮ್ಮ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸುವುದಲ್ಲದೆ ಬೆದರಿಕೆ ಹಾಕಿದ ಕಾರಣಕ್ಕೆ ಬಿಭವ್ ಕುಮಾರ್ ಹಾಗೂ ಇತರ ಮೂವರ ವಿರುದ್ಧ ಮಹೇಶ್ ಪಾಲ್ ದೂರು ದಾಖಲಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಾಗಿದ್ದು, ಸ್ಥಳೀಯ ನ್ಯಾಯಾಲಯದ ಮ್ಯಾಜಿಸ್ಟ್ರೇಟ್‌ ಅವರಿಗೆ ಆರೋಪಪಟ್ಟಿ ಸಲ್ಲಿಸಲಾಗಿತ್ತು. ಪ್ರಕರಣವು ಇನ್ನೂ ವಿಚಾರಣೆ ಹಂತದಲ್ಲಿದೆ.

ಬಿಭವ್‌ ಕುಮಾರ್‌ ಅವರನ್ನು ನೇಮಕಾತಿ ಮಾಡಿಕೊಳ್ಳುವ ಸಂದರ್ಭದಲ್ಲಿ ಅವರ ಅಪರಾಧ ಹಿನ್ನೆಲೆಯನ್ನು ಪರಿಶೀಲಿಸಲಾಗಿರಲಿಲ್ಲ ಎಂದು ವಿಚಕ್ಷಣ ಇಲಾಖೆ ತಿಳಿಸಿದೆ.

ಕೇಸರಿ ಪಕ್ಷದ ಏಕೈಕ ಗುರಿ ಎಎಪಿ ಪಕ್ಷವನ್ನು ಅಸ್ಥಿರಗೊಳಿಸುವುದಾಗಿದೆ ಎಂದು ಎಎಪಿ ನಾಯಕಿ ಜಾಸ್ಮೀನ್‌ ಸಿಂಗ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...