‘ನಾನು ಭಯೋತ್ಪಾದಕನಲ್ಲ’; ಜೈಲಿನಿಂದ ಅರವಿಂದ್ ಕೇಜ್ರಿವಾಲ್ ಸಂದೇಶ

Date:

ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ತಿಹಾರಿ ಜೈಲಿನಿಂದಲೇ ಸಂದೇಶ ಕಳಿಸಿದ್ದಾರೆ.

‘ನನ್ನ ಹೆಸರು ಅರವಿಂದ್ ಕೇಜ್ರಿವಾಲ್, ನಾನು ಭಯೋತ್ಪಾದಕನಲ್ಲ’ ಎಂಬ ಸಂದೇಶ ಕಳಿಸಿದ್ದು, ಸಂದೇಶದ ಬಗ್ಗೆ ಎಎಪಿಯ ಸಂಸದ ಸಂಜಯ್‌ ಸಿಂಗ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

“ಮಾ.21 ರಿಂದ ಜಾರಿ ನಿರ್ದೇಶನಾಲಯದಿಂದ ಬಂಧಿತರಾದ ದಿನದಿಂದಲೂ 24 ಗಂಟೆಗಳ ಕಾಲವು ಅರವಿಂದ್ ಕೇಜ್ರಿವಾಲ್ ಅವರ ಮನೋಸ್ಥೈರ್ಯವನ್ನು ಕುಗ್ಗಿಸುವ ಪ್ರಯತ್ನ ನಡೆಸಲಾಗುತ್ತಿದೆ. ಅವರನ್ನು ಭಯೋತ್ಪಾದಕರಂತೆ ಕಾಣುತ್ತಿದ್ದು. ಹತ್ತಿರದವರನ್ನು ಭೇಟಿಯಾಗಲು ಬಿಡುತ್ತಿಲ್ಲ. ಇದು ಸ್ಪಷ್ಟವಾಗಿ ಪಿತೂರಿಯ ರಾಜಕಾರಣವಾಗಿದೆ. ಕೇಜ್ರಿವಾಲ್ ಅವರು ಹೊರಗೆ ಬಂದ ನಂತರ ಮತ್ತಷ್ಟು ಪ್ರಬಲರಾಗುತ್ತಾರೆ” ಎಂದು ಸಂಜಯ್ ಸಿಂಗ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಮಾರಸ್ವಾಮಿಯವರನ್ನು ಸೋಲಿಸಲು ಬಿಜೆಪಿ ಸುಪಾರಿ ಕೊಟ್ಟಿದೆಯೇ, ಆತಂಕಕ್ಕೊಳಗಾಗಿದ್ದಾರೆಯೇ?

“ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಜನರು ಹಾಗೂ ದೇಶಕ್ಕಾಗಿ ಪುತ್ರ ಹಾಗೂ ಸೋದರನ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ‘ನನ್ನ ಹೆಸರು ಅರವಿಂದ್ ಕೇಜ್ರಿವಾಲ್, ನಾನು ಭಯೋತ್ಪಾದಕನಲ್ಲ’ ಎಂಬ ಸಂದೇಶವನ್ನು ಜೈಲಿನಿಂದ ಕಳಿಸಿದ್ದಾರೆ” ಎಂದು ಸಂಜಯ್ ಸಿಂಗ್ ತಿಳಿಸಿದರು.

ಇದೇ ಅಬಕಾರಿ ನೀತಿಯ ಹಗರಣಕ್ಕೆ ಸಂಬಂಧಿಸಿದಂತೆ ಸಂಸದ ಸಂಜಯ್ ಸಿಂಗ್ 6 ತಿಂಗಳ ಸೆರೆವಾಸ ಅನುಭವಿಸಿ ಏಪ್ರಿಲ್ 4ರಂದು ತಿಹಾರಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಮೂರು ಬಾರಿ ದೆಹಲಿ ಮುಖ್ಯಮಂತ್ರಿಯಾಗಿದ್ದವರನ್ನು ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌ ಅವರನ್ನು ಭೇಟಿ ಮಾಡಲು ಗಾಜಿನ ತಡೆಗೋಡೆ ಮೂಲಕ ಅನುಮತಿಸಲಾಗಿದೆ. ಪ್ರಧಾನಿ ಅವರು ಕೇಜ್ರಿವಾಲ್ ಬಗ್ಗೆ ದ್ವೇಷದ ಭಾವನೆ ಹೊಂದಿರುವುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಸಂಜಯ್ ಸಿಂಗ್ ಹೇಳಿದರು.

“ನೀವು ಹೆಚ್ಚು ಬೀಳಿಸಲು ಪ್ರಯತ್ನಿಸುತ್ತಿದ್ದರೂ ಅವರು ಮತ್ತಷ್ಟು ಪ್ರಬಲರಾಗಿ ಹೊರಬರುತ್ತಾರೆ. ಪಂಜಾಬ್‌ ಸಿಎಂ ಭಗವಂತ್ ಮಾನ್ ಅವರು ನಿನ್ನೆ ಭಾವನಾತ್ಮಕವಾಗಿ ಮಾತನಾಡಿದ್ದರು. ಈ ವಿಷಯ ನಮಗೆಲ್ಲ ಭಾವನಾತ್ಮಕ ವಿಷಯವಾಗಿವೆ, ಆದರೆ ಬಿಜೆಪಿ ಮತ್ತು ಪ್ರಧಾನಿ ಮೋದಿ ಅವರಿಗೆ ನಾಚಿಕೆ ತರುವ ವಿಷಯವಾಗಿದೆ” ಎಂದು ಸಂಜಯ್ ಸಿಂಗ್‌ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...