ಅವಿಮುಕ್ತೇಶ್ವರಾನಂದರ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿದ್ದ ಅಶುತೋಷ್ ಬ್ರಹ್ಮಚಾರಿ ಮೇಲೆ ದಾಳಿ

Date:

ಉತ್ತರಾಖಂಡದ ಜೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿದ್ದ ಶ್ರೀ ಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್‌ನ ಅಧ್ಯಕ್ಷರು ಮತ್ತು ಶಕುಂಭರಿ ಪೀಠದ ಅಧಿಪತಿ ಅಶುತೋಷ್ ಬ್ರಹ್ಮಚಾರಿ ಮಹಾರಾಜ್ ಮೇಲೆ ರೈಲಿನಲ್ಲಿ ದಾಳಿ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ವರದಿಗಳ ಪ್ರಕಾರ ಅಶುತೋಷ್ ಬ್ರಹ್ಮಚಾರಿ ರೈಲ್ವೆ ಪೊಲೀಸ್ ಠಾಣೆಗೆ ನಡೆದುಕೊಂಡು ಹೋಗಿ ದೂರು ನೀಡಿದ್ದಾರೆ. ಈ ವೇಳೆ ಬಟ್ಟೆ ರಕ್ತಸಿಕ್ತವಾಗಿತ್ತು ಎನ್ನಲಾಗಿದೆ. ರೈಲಿನಲ್ಲಿ ಶೌಚಾಲಯ ಬಳಸಲು ಹೋದಾಗ ಹಲ್ಲೆ ನಡೆದಿದೆ ಎಂದು ಅಶುತೋಷ್ ಬ್ರಹ್ಮಚಾರಿ ಆರೋಪಿಸಿದ್ದಾರೆ. ಸದ್ಯ ಬ್ರಹ್ಮಚಾರಿ ಅವರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಕೇದಾರನಾಥ ದೇಗುಲದಿಂದ 228 ಕೆಜಿ ಚಿನ್ನ ನಾಪತ್ತೆ: ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗಲು ಪ್ರಯಾಗರಾಜ್‌ಗೆ ಪ್ರಯಾಣಿಸುತ್ತಿದೆ. ರೈಲು ಸಿರಾತು ನಿಲ್ದಾಣದ ಬಳಿ ಇದ್ದಾಗ, ಶೌಚಾಲಯಕ್ಕೆ ಹೋದಾಗ ತನ್ನ ಮೇಲೆ ದಾಳಿ ನಡೆದಿದೆ. ತಾನು ಶೌಚಾಲಯದಲ್ಲಿ ಬೀಗ ಹಾಕಿಕೊಂಡು ದಾಳಿಯಿಂದ ತಪ್ಪಿಸಿಕೊಂಡಿದ್ದೇನೆ” ಎಂದು ಬ್ರಹ್ಮಚಾರಿ ಹೇಳಿದ್ದಾರೆ.

ವಾರಣಾಸಿಯ ವಿದ್ಯಾಮಠದ ಗುರುಕುಲದಲ್ಲಿ ಕನಿಷ್ಠ 20 ಬಾಲಕರ ಮೇಲೆ ಸ್ವಾಮಿ ಅವಿಮುಕ್ತೇಶ್ವರಾನಂದ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಅಶುತೋಷ್ ಬ್ರಹ್ಮಚಾರಿ ಕೋರ್ಟ್‌ನಲ್ಲಿ ದೂರು ದಾಖಲಿಸಿದ್ದರು.

ಈ ದೂರಿನ ಆಧಾರದಲ್ಲಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ನ್ಯಾಯಾಲಯವು ಸ್ವಾಮಿ ಅವಿಮುಕ್ತೇಶ್ವರಾನಂದ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಲು ಆದೇಶಿಸಿದೆ. ಆದೆರೆ ಈ ಎಲ್ಲಾ ಆರೋಪಗಳನ್ನು ಅವಿಮುಕ್ತೇಶ್ವರಾನಂದರು ನಿರಾಕರಿಸಿದ್ದು, ಇವು ಸತ್ಯಕ್ಕೆ ದೂರವಾದವು ಮತ್ತು ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...