ಅಸ್ಸಾಂ ಚುನಾವಣೆ | ಕಾಂಗ್ರೆಸ್‌ನಲ್ಲಿ ಸರಣಿ ರಾಜೀನಾಮೆ: ಪ್ರಿಯಾಂಕಾಗೆ ಹೆಚ್ಚಿದ ಚುನಾವಣಾ ಸವಾಲು

Date:

ಅಸ್ಸಾಂನಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ರಾಜಕೀಯ ಪಕ್ಷಗಳ ಚುನಾವಣಾ ಸಿದ್ದತೆಗಳು ಬಿರುಸು ಪಡೆದಿವೆ. ಪ್ರಚಾರ ಭರಾಟೆ ಹೆಚ್ಚಾಗಿದೆ. ಇದೇ ಸಮಯದಲ್ಲಿ, ಕಾಂಗ್ರೆಸ್‌ ನಾನಾ ರೀತಿಯ ಬಿಕ್ಕಟ್ಟನ್ನು ಎದುರಿಸುತ್ತಿದೆ. ಮುಖ್ಯವಾಗಿ, ಪಕ್ಷದ ಪ್ರಬಲ ಮತ್ತು ಪ್ರಮುಖ ನಾಯಕರು ಕೈ ಪಾಳಯ ತೊರೆದು, ಕೇಸರಿ ಪಡೆ ಸೇರುತ್ತಿದ್ದಾರೆ. ಈ ಪಕ್ಷಾಂತರವು ಕಾಂಗ್ರೆಸ್‌ಗೆ ಸಂಕಷ್ಟ ತಂದೊಡ್ಡಿದೆ.

ಇತ್ತೀಚೆಗೆ, ಕಾಂಗ್ರೆಸ್ ನಾಯಕರಾದ ಭೂಪೇನ್ ಬೋರಾ ಮತ್ತು ಪ್ರದ್ಯುತ್ ಬೊರ್ಡೊಲೋಯ್ ಅವರು ಪಕ್ಷ ತೊರೆದು, ಕೋಮುವಾದಿ ಪಕ್ಷ ಬಿಜೆಪಿ ಸೇರಿದ್ದಾರೆ. ಜೊತೆಗೆ, ಐವರು ಶಾಸಕರೂ ಬಿಜೆಪಿ ಪಾಲಾಗಿದ್ದಾರೆ. ಈ ವಲಸೆ ತಡೆಯಲು ಪಕ್ಷದ ಹಿರಿಯ ನಾಯಕರಿಗೆ ಸಾಧ್ಯವಾಗುತ್ತಿಲ್ಲ. ಮುಖ್ಯವಾಗಿ, ಅಸ್ಸಾಂ ಚುನಾವಣೆಯ ಉಸ್ತುವಾರಿ ಹೊತ್ತಿರುವ ಪ್ರಿಯಾಂಕಾ ಗಾಂಧಿ ಮತ್ತು ಅವರ ಸಹವರ್ತಿ ಡಿ.ಕೆ ಶಿವಕುಮಾರ್‌ ಹೈರಾಣಾಗಿದ್ದಾರೆ. ಈ ವಲಸೆಗೆ ಅನೇಕರು ರಾಜ್ಯ ಘಟಕದ ಅಧ್ಯಕ್ಷರನ್ನು ದೂರುತ್ತಿದ್ದರೆ, ಇನ್ನೂ ಕೆಲವರು ಪ್ರಿಯಾಂಕಾ ಗಾಂಧಿ ಅವರ ಉಸ್ತುವಾರಿಯಲ್ಲೇ ಇಂತಹ ಘಟನೆಗಳು ಸಂಭವಿಸುತ್ತಿರುವುದೇಕೆ ಎಂದು ಆಶ್ಚರ್ಯ ವ್ಯಕ್ತಪಡಿಸುತ್ತಿದ್ದಾರೆ.

ಆದರೆ, ಪ್ರಿಯಾಂಕಾ ಗಾಂಧಿ ಅವರ ಆಪ್ತರು, ಪ್ರಿಯಾಂಕಾ ಕೇವಲ ‘ಸ್ಕ್ರೀನಿಂಗ್ ಕಮಿಟಿ’ಯ (ಅಭ್ಯರ್ಥಿಗಳ ಆಯ್ಕೆ ಸಮಿತಿ) ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಪಾತ್ರವು ಕೇವಲ ಅಭ್ಯರ್ಥಿಗಳ ಆಯ್ಕೆಗೆ ಸೀಮಿತವಾಗಿದೆ ಎನ್ನುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ ಪಾಂಡಿತ್ಯದಿಂದಾಗಿ ಈಶಾನ್ಯ ಭಾರತದ ‘ಶಶಿ ತರೂರ್’ ಎಂದೇ ಕರೆಯಲ್ಪಡುವ ಪ್ರದ್ಯುತ್ ಬೊರ್ಡೊಲೋಯ್ ಅವರು ನಿನ್ನೆ ತಮ್ಮ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಿಂದ ಸ್ಪರ್ಧಿಸಲು ಸಜ್ಜಾಗಿದ್ದಾರೆ. ಹಾಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಈ ಹಿಂದೆ ಕಾಂಗ್ರೆಸ್ ತೊರೆದ ನಂತರ ಬಿಜೆಪಿಯತ್ತ ಮುಖ ಮಾಡಿದ ಕಾಂಗ್ರೆಸ್ ನಾಯಕರ ಪಟ್ಟಿಗೆ ಬೊರ್ಡೊಲೋಯ್ ಕೂಡ ಸೇರಿಕೊಂಡಿದ್ದಾರೆ.

ತಮ್ಮ ನಿರ್ಧಾರವು ಚುನಾವಣೆಗೆ ಸಂಬಂಧಿಸಿದಲ್ಲ. ಬದಲಾಗಿ ಪಕ್ಷದೊಳಗೆ ನಡೆಯುತ್ತಿರುವ ನಿರಂತರ ಅವಮಾನಗಳು ಮತ್ತು ಹಂತ ಹಂತವಾಗಿ ಉಂಟಾದ ಮನಸ್ತಾಪದ ಫಲವೆಂದು ಬೊರ್ಡೊಲೋಯ್ ಹೇಳಿಕೊಂಡಿದ್ದಾರೆ. ಆದರೆ, ಟಿಕೆಟ್ ಹಂಚಿಕೆಯೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂಬ ಮಾತುಗಳು ಕಾಂಗ್ರೆಸ್‌ನಲ್ಲಿ ಕೇಳಿಬರುತ್ತಿವೆ.

ಈ ಚುನಾವಣೆಯಲ್ಲಿ ಭೂಗತ ಲೋಕದ ಎಮ್ದಾದುಲ್ ಇಸ್ಲಾಂ ಎಂಬಾತನೊಂದಿಗೆ ಸಂಪರ್ಕಹೊಂದಿರವ ಆರೋಪ ಎದುರಿಸುತ್ತಿರುವ ಶಾಸಕ ಆಸಿಫ್ ಮೊಹಮ್ಮದ್ ನಜರ್ ಅವರಿಗೆ ಕಾಂಗ್ರೆಸ್‌ ಮತ್ತೆ ಟಿಕೆಟ್‌ ನೀಡಲು ನಿರ್ಧರಿಸಿದ್ದರಿಂದ ಬೊರ್ಡೊಲೋಯ್ ಪಕ್ಷ ತೊರೆದಿದ್ದಾರೆ ಎಂದು ಹೇಳಲಾಗುತ್ತಿದೆ.

2025ರ ಏಪ್ರಿಲ್‌ನಲ್ಲಿ ತಮ್ಮ ಮೇಲೆ ನಡೆದ ಕೊಲೆ ಯತ್ನದ ದಾಳಿಯಲ್ಲಿ ಈ ಎಮ್ದಾದುಲ್ ಇಸ್ಲಾಂ ಭಾಗಿಯಾಗಿದ್ದ. ಆತ ಜಾಮೀನಿನ ಮೇಲೆ ಹೊರಬಂದಾಗ ಆತನನ್ನು ನಜರ್ ಸನ್ಮಾನಿಸಿದ್ದರು. ಹಲವು ಬಾರಿ ಗೌರವ್ ಗೊಗೊಯ್ ಅವರ ಸಮ್ಮುಖದಲ್ಲೂ ಈತ ಕಾಣಿಸಿಕೊಂಡಿದ್ದನೆಂದು ಬೊರ್ಡೊಲೋಯ್ ಆರೋಪಿಸಿದ್ದಾರೆ.  

ಪ್ರಿಯಾಂಕಾ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ನಜರ್ ಅವರಿಗೆ ಟಿಕೆಟ್‌ ನೀಡುವುದನ್ನು ತಾವು ವಿರೋಧಿಸಿದ್ದರೂ, ನಜರ್‌ಗೆ ಟಿಕೆಟ್ ನೀಡಿದರೆ ತಾವು ರಾಜೀನಾಮೆ ನೀಡುತ್ತೇನೆಂದು ಹೇಳದ್ದರ ಹೊರತಾಗಿಯೂ ದೆಹಲಿಯಲ್ಲಿ ನಡೆದ ಸಭೆಯಲ್ಲಿ ತಮ್ಮ ಆಕ್ಷೇಪಗಳನ್ನು ತಿರಸ್ಕರಿಸಲಾಗಿದೆ. ತಮಗಾದ ಈ ಅವಮಾನದಿಂದಲೇ ತಾವು ಪಕ್ಷ ತೊರೆಯಲು ಕಾರಣವಾಯಿತು ಎಂದು ಬೋರ್ಡೊಲೋಯ್ ಪ್ರತಿಪಾದಿಸಿದ್ದಾರೆ.

ಕಾಂಗ್ರೆಸ್ ಮೂಲಗಳ ಪ್ರಕಾರ, ಪ್ರಿಯಾಂಕಾ ಗಾಂಧಿ ಅವರು ಸಮಿತಿಯ ಅಧ್ಯಕ್ಷರಾಗಿ ತಮ್ಮ ಕೆಲಸವನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ. ಈಗಾಗಲೇ ಪ್ರದ್ಯುತ್ ಬೊರ್ಡೊಲೋಯ್ ಅವರ ಪುತ್ರನಿಗೂ ಟಿಕೆಟ್ ನೀಡಲಾಗಿದ್ದು, ಬಹುತೇಕ ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಲಾಗಿದೆ. ಬೊರ್ಡೊಲೋಯ್ ಅವರ ನಿರ್ಧಾರವು ‘ದುರದೃಷ್ಟಕರ’ ಎಂದು ಗೌರವ್ ಗೊಗೊಯ್ ಕರೆದಿದ್ದಾರೆ.

ಈ ಲೇಖನ ಓದಿದ್ದೀರಾ?: LPG ಹೊತ್ತು ಭಾರತಕ್ಕೆ ಬಂದ ‘ಶಿವಾಲಿಕ್’ ಹಡಗು; ತಣಿಯುವುದೇ ಕೊರತೆ-ಆತಂಕ?

“ಕಾಂಗ್ರೆಸ್ ಅವರಿಗೆ ಎಲ್ಲವನ್ನೂ ನೀಡಿದೆ. ಎರಡು ವರ್ಷಗಳ ಹಿಂದಷ್ಟೇ ಅವರಿಗೆ ನಾಗಾಂವ್ ಲೋಕಸಭಾ ಟಿಕೆಟ್ ನೀಡಲಾಗಿತ್ತು. ಈಗ ಅವರ ಕುಟುಂಬದ ಸದಸ್ಯರಿಗೂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಲಾಗಿದೆ. ಆದರೆ, ಅವರು ಹಿಮಂತ ಬಿಸ್ವ ಶರ್ಮಾ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೆಂದು ಬಯಸಿದ್ದಾರೆ. ಅದು ಅವರ ನಿರ್ಧಾರ,” ಎಂದು ಕಿಡಿಕಾರಿದ್ದಾರೆ.

ಬೊರ್ಡೊಲೋಯ್ ಅವರ ನಿರ್ಧಾರದ ಹಿಂದೆ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಇತರ ಕೇಂದ್ರ ತನಿಖಾ ಸಂಸ್ಥೇಗಳ ಪಾತ್ರವಿರಬಹುದು ಎಂದು ಅವರು ಅನುಮಾನಿಸಿದ್ದಾರೆ.

ಇದೆಲ್ಲದರ ನಡುವೆ, ಕಾಂಗ್ರೆಸ್ಸಿಗರು ಬಿಜೆಪಿಗೆ ವಲಸೆ ಹೋಗುತ್ತಿರುವುದು ರಾಜ್ಯದಲ್ಲಿ ಕಾಂಗ್ರೆಸ್‌ಅನ್ನು ಮತ್ತಷ್ಟು ದುರ್ಬಲಗೊಳಿಸಿದಂತೆ ಕಾಣುತ್ತಿದೆ. ವಿಶೇಷವಾಗಿ ಬೊರ್ಡೊಲೋಯ್ ಮತ್ತು ಭೂಪೇನ್ ಬೋರಾ ಅವರು ಪ್ರಭಾವ ಹೊಂದಿದ್ದ ನಗಾವ್ ಮತ್ತು ಇತರ ಕ್ಷೇತ್ರಗಳಲ್ಲಿ ಪಕ್ಷದ ಪ್ರಭಾವ ಕಡಿಮೆಯಾಗುವ ಸಾಧ್ಯತೆಯಿದೆ.

ಆದರೆ, ಕಳೆದ ನಾಲ್ಕು ಅವಧಿಯಲ್ಲಿ ಆಡಳಿತದಿಂದ ದೂರ ಉಳಿದಿರುವ ಕಾಂಗ್ರೆಸ್‌, ಚುನಾವಣೆಯಲ್ಲಿ ಮತದಾರರ ಮನಸ್ಸನ್ನು ಗೆಲ್ಲಲು ಎದುರು ನೋಡುತ್ತಿದೆ.  ಅದಕ್ಕಾಗಿ, ನಾನಾ ಭರವಸೆಗಳನ್ನು ನೀಡುತ್ತಿದೆ. ಸ್ಥಳೀಯ ಸಮಸ್ಯೆಗಳನ್ನು ಗುರುತಿಸಿ, ಪರಿಹರಿಸುವ ಆಶ್ವಾಸನೆಗಳ ಮಹಾಪೂರವನ್ನೇ ನೀಡುತ್ತಿದೆ. ಜೊತೆಗೆ, ರಾಜ್ಯದಲ್ಲಿ ಬಲವಾದ ಸಂಘಟನೆ ಕಾಂಗ್ರೆಸ್‌ಗಿದೆ. ಆದ್ದರಿಂದ, ಮತದಾರರಲ್ಲಿ ತನ್ನ ಬೆಂಬಲವನ್ನು ಉಳಿಸಿಕೊಳ್ಳಬಹುದು. ಆದಾಗ್ಯೂ, ಮತದಾರರು ಯಾರಿಗೆ ಅಧಿಕಾರ ನೀಡಲಿದ್ದಾರೆ ಎಂಬುದು ಏಪ್ರಿಲ್ 9 ಮತದಾನ ಮತ್ತು ಮೇ 4ರ ಫಲಿತಾಂಶದಲ್ಲಿ ಗೊತ್ತಾಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...