ಅಸ್ಸಾಂ ಚುನಾವಣೆ | ಬಿಜೆಪಿ ಅಭ್ಯರ್ಥಿ ಪೌರತ್ವ ವಿವಾದ ಮುನ್ನೆಲೆಗೆ; ಭಾರತೀಯ ಪ್ರಜೆಯಲ್ಲ’ ಎಂಬ ಆರೋಪ!

Date:

ಅಸ್ಸಾಂನಲ್ಲಿ ಏಪ್ರಿಲ್ 9 ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ರಾಜಕೀಯ ಪಕ್ಷಗಳು ಭಾರೀ ಪ್ರಚಾರ-ಸಿದ್ಧತೆಯಲ್ಲಿ ತೊಡಗಿವೆ. ಇದೇ ಸಮಯದಲ್ಲಿ, ಬಿಜೆಪಿ ಹಾಲಿ ಶಾಸಕ ಮತ್ತು ಚುನಾವಣಾ ಅಭ್ಯರ್ಥಿಯೊಬ್ಬರ ಪೌರತ್ವದ ವಿವಾದವು ಮುನ್ನೆಲೆಗೆ ಬಂದಿದೆ. ಅವರು ಭಾರತೀಯ ಪ್ರಜೆಯಲ್ಲ ಎಂಬ ಆರೋಪಗಳು ಕೇಳಿಬಂದಿವೆ.

ಆಡಳಿತಾರೂಢ ಬಿಜೆಪಿಯ ಶಾಸಕ ಬಿಜಯ್ ಮಲಾಕರ್ ಅವರು ದಕ್ಷಿಣ ಅಸ್ಸಾಂನ ಬರಾಕ್ ವ್ಯಾಲಿಯ ರಾಮಕೃಷ್ಣನಗರ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈ ಬೆನ್ನಲ್ಲೇ, ಕಾಂಗ್ರೆಸ್ ಅಭ್ಯರ್ಥಿ ಸುರುಚಿ ರಾಯ್ ಅವರು ಬಿಜಯ್ ಮಲಾಕರ್ ಅವರ ವಿರುದ್ಧ ಪೌರತ್ವಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಎತ್ತಿದ್ದಾರೆ. “ಬಿಜೆಪಿ ಅಭ್ಯರ್ಥಿಯ ವಿರುದ್ಧ ಗುವಾಹಟಿ ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇದೆ. ಅವರು ತಮ್ಮ ಪೌರತ್ವಕ್ಕೆ ಸಂಬಂಧಿಸಿದ ದಾಖಲೆಗಳನ್ನು ಇನ್ನೂ ಒದಗಿಸಿಲ್ಲ” ಎಂದು ಆರೋಪಿಸಿದ್ದಾರೆ.

ತಮ್ಮ ಮೇಲಿನ ಈ ಆರೋಪವನ್ನು ತಳ್ಳಿಹಾಕಿರುವ ಮಲಾಕರ್, ಇದು ಚುನಾವಣಾ ಪ್ರೇರಿತ ಹೇಳಿಕೆ ಎಂದಿದ್ದಾರೆ. “ಪ್ರಕರಣ ನ್ಯಾಯಾಲಯದಲ್ಲಿದೆ, ನ್ಯಾಯಾಲಯವೇ ಅದನ್ನು ಪರಿಶೀಲಿಸುತ್ತದೆ. ನನ್ನ ತಂದೆಗೆ ನಾಲ್ವರು ಸಹೋದರರಿದ್ದಾರೆ ಮತ್ತು ಅವರೆಲ್ಲರೂ ಸರ್ಕಾರಿ ನೌಕರರಾಗಿದ್ದಾರೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ವರ್ಷ ಡಿಸೆಂಬರ್‌ನಲ್ಲಿ, ಬ್ರಜ ಗೋಪಾಲ್ ಸಿನ್ಹಾ ಮತ್ತು ಬಿಜಯ್ ಕುಮಾರ್ ಕಾನು ಎಂಬ ಇಬ್ಬರು ವ್ಯಕ್ತಿಗಳು ಮಲಾಕರ್ ಅವರು ಭಾರತೀಯ ಪ್ರಜೆಯಲ್ಲ ಎಂಬುದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ. ಅವರ ಪೌರತ್ವವನ್ನು ಪರಿಶೀಲಿಸಬೇಕೆಂದು ಕೋರಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.

ಈ ಲೇಖನ ಓದಿದ್ದೀರಾ?: ಲಿಂಗತ್ವ ಅಲ್ಪಸಂಖ್ಯಾತರ ಅಸ್ಮಿತೆಯನ್ನೇ ಅಳಿಸುವ ಮಸೂದೆ: ಆತ್ಮಗೌರವಕ್ಕೆ ಕೊಡಲಿಪೆಟ್ಟು

“ಮಲಾಕರ್ ಅವರ ಪೋಷಕರು ನಿಗದಿತ ದಿನಾಂಕವಾದ 1971ರ ಮಾರ್ಚ್‌ 25ರ ನಂತರ ಭಾರತಕ್ಕೆ (ಅಸ್ಸಾಂ) ಪ್ರವೇಶಿಸಿದ್ದಾರೆ. ಅವರ ಕುಟುಂಬಕ್ಕೆ ಸಂಬಂಧಿಸಿದಂತೆ ಕರೀಂಗಂಜ್ ಪಟ್ಟಣದ 1966 ಮತ್ತು 1971ರ ಮತದಾರರ ಪಟ್ಟಿಗಳು ಸೇರಿದಂತೆ ಎಲ್ಲ ದಾಖಲೆಗಳನ್ನು ಸಂಗ್ರಹಿಸಿದ್ದೇವೆ. ಮತದಾರರ ಪಟ್ಟಿಗಳ ಪರಿಶೀಲನೆ ವೇಳೆ, ಶಾಸಕರ ತಂದೆಯ ಹೆಸರು 2005, 1966 ಮತ್ತು 1971ರ ಮತದಾರರ ಪಟ್ಟಿಗಳಲ್ಲಿ ಎಲ್ಲಿಯೂ ಕಂಡುಬಂದಿಲ್ಲ. ಆದಾಗ್ಯೂ, ಮಲಾಕರ್ ಅವರು ತಮ್ಮ ಹೆಸರನ್ನು ಮೊದಲ ಬಾರಿಗೆ 2005ರ ಪೂರಕ ಪಟ್ಟಿಯಲ್ಲಿ ಯಾವುದೇ ಆಧಾರವಿಲ್ಲದೆ ಸೇರಿಸಿದ್ದಾರೆ ಎಂಬುದು ಕಂಡುಬಂದಿದೆ,” ಎಂದು ಅರ್ಜಿಯಲ್ಲಿ ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...