ಅಸ್ಸಾಂ ಪ್ರವಾಹ | ನೀರಿನ ಮಟ್ಟ ಇಳಿಕೆ, ಮೃತರ ಸಂಖ್ಯೆ 109ಕ್ಕೆ ಏರಿಕೆ

Date:

ಅಸ್ಸಾಂ ಪ್ರವಾಹ ಸ್ಥಿತಿ ನಿಯಂತ್ರಣಕ್ಕೆ ಬರುತ್ತಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ನೀರಿನ ಮಟ್ಟ ವೇಗವಾಗಿ ಕಡಿಮೆಯಾಗುತ್ತಿದೆ. ಅಸ್ಸಾಂನಲ್ಲಿ ಸೋಮವಾರ ಪ್ರವಾಹ ಪರಿಸ್ಥಿತಿ ಗಮನಾರ್ಹವಾಗಿ ಸುಧಾರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುವಾಹಟಿಯಲ್ಲಿರುವ ಭಾರತೀಯ ಹವಾಮಾನ ಇಲಾಖೆಯ ಪ್ರಾದೇಶಿಕ ಹವಾಮಾನ ಕೇಂದ್ರವು ಬರಾಕ್ ಕಣಿವೆ ಮತ್ತು ಮಧ್ಯ ಅಸ್ಸಾಂನ ಕೆಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆಯನ್ನು ನೀಡಿದ್ದಾರೆ. ಇದನ್ನು ಹೊರತುಪಡಿಸಿ ರಾಜ್ಯದ ಬೇರೆ ಯಾವುದೇ ಪ್ರದೇಶಗಳಲ್ಲಿಯೂ ಮಳೆ ಮನ್ಸೂಚನೆಯನ್ನು ನೀಡಿಲ್ಲ.

ಈ ನಡುವೆ ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಎಎಸ್‌ಡಿಎಂಎ) ವರದಿಯು ಭಾನುವಾರ ರಾತ್ರಿ ಕರೀಮ್‌ಗಂಜ್ ಜಿಲ್ಲೆಯ ಕರೀಮ್‌ಗಂಜ್ ಮತ್ತು ನಿಲಂಬಜಾರ್ ಕಂದಾಯ ವಲಯಗಳಲ್ಲಿ ಒಟ್ಟಾಗಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಇದರಿಂದಾಗಿ ಅಸ್ಸಾಂ ಪ್ರವಾಹ, ಭೂಕುಸಿತ, ಬಿರುಗಾಳಿ ಮತ್ತು ಸಿಡಿಲಿಗೆ ಬಲಿಯಾದವರ ಒಟ್ಟು ಸಂಖ್ಯೆ 109ಕ್ಕೆ ಏರಿಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಸ್ಸಾಂನ ಪ್ರಮುಖ ಜಿಲ್ಲೆಗಳಲ್ಲಿ ಪ್ರವಾಹದಿಂದಾಗಿ 5,97,600ಕ್ಕೂ ಅಧಿಕ ಜನರು ನಿರಾಶ್ರಿತರಾಗಿದ್ದಾರೆ. ಕಚಾರ್‌ನಲ್ಲಿ ಪ್ರವಾಹದಿಂದಾಗಿ ಅಧಿಕ ಹಾನಿಯಾಗಿದ್ದು ಸುಮಾರು 1.16 ಲಕ್ಷ ಜನರು ಪ್ರವಾಹದಲ್ಲಿ ಸಿಲುಕಿದ್ದಾರೆ. ಧುಬ್ರಿಯಲ್ಲಿ 81,500 ಜನರು ಮತ್ತು ನಾಗಾವ್‌ನಲ್ಲಿ 76,000ಕ್ಕೂ ಹೆಚ್ಚು ಜನರು ಪ್ರವಾಹದಲ್ಲಿ ಸಿಲುಕಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಇದನ್ನು ಓದಿದ್ದೀರಾ?  ಅಸ್ಸಾಂ ಪ್ರವಾಹ | ಸಾವಿನ ಸಂಖ್ಯೆ 58ಕ್ಕೆ ಏರಿಕೆ; 23 ಲಕ್ಷ ಜನರ ಜೀವನ ಅತಂತ್ರ

13 ಜಿಲ್ಲೆಗಳಲ್ಲಿ 172 ನಿರಾಶ್ರಿತರ ಕೇಂದ್ರಗಳನ್ನು ನಿರ್ವಹಣೆ ಮಾಡಲಾಗುತ್ತಿದ್ದು, ಪ್ರಸ್ತುತ 58,816 ನಿರಾಶ್ರಿತರು ಈ ಕೇಂದ್ರಗಳಲ್ಲಿ ಇದ್ದಾರೆ. ಕಳೆದ 24 ಗಂಟೆಗಳಲ್ಲಿ ರಾಜ್ಯದ ಪ್ರವಾಹ ಸಂತ್ರಸ್ತರಿಗೆ ಪ್ರಾಧಿಕಾರವು 594.48 ಕ್ವಿಂಟಾಲ್ ಅಕ್ಕಿ, 110.95 ಕ್ವಿಂಟಲ್ ಬೇಳೆ, 28.82 ಕ್ವಿಂಟಲ್ ಉಪ್ಪು ಮತ್ತು 2,580.04 ಲೀಟರ್ ಸಾಸಿವೆ ಎಣ್ಣೆಯನ್ನು ವಿತರಿಸಿದೆ.

ಪ್ರಸ್ತುತ 1,342 ಗ್ರಾಮಗಳು ಜಲಾವೃತವಾಗಿದ್ದು, ಅಸ್ಸಾಂನಾದ್ಯಂತ 25,367.61 ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ಎಎಸ್‌ಡಿಎಂಎ ತಿಳಿಸಿದೆ. ಇನ್ನು ಪ್ರವಾಹದಿಂದಾಗಿ ರಸ್ತೆಗಳು, ಸೇತುವೆಗಳು ಮತ್ತು ಇತರೆ ಮೂಲಸೌಕರ್ಯಗಳಿಗೆ ಹಾನಿಯಾಗಿವೆ.

ಪ್ರಸ್ತುತ, ನಿಮತಿಘಾಟ್, ತೇಜ್‌ಪುರ ಮತ್ತು ಧುಬ್ರಿಯಲ್ಲಿ ಬ್ರಹ್ಮಪುತ್ರ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಉಪನದಿಗಳಾದ ಚೆನಿಮರಿಯಲ್ಲಿ ಬುರ್ಹಿದಿಹಿಂಗ್ ಮತ್ತು ನಂಗ್ಲಮುರಘಾಟ್‌ನಲ್ಲಿ ದಿಸಾಂಗ್ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ವ್ಯಾಪಕವಾದ ಪ್ರವಾಹದಿಂದಾಗಿ 2,83,700 ಸಾಕುಪ್ರಾಣಿಗಳು ಮತ್ತು ಕೋಳಿಗಳಿಗೆ ಹಾನಿಯಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...