ಅಸ್ಸಾಂ ಪ್ರವಾಹ: ಒಂದು ಸಾವು, 9 ಜಿಲ್ಲೆಯ 1.98 ಲಕ್ಷ ಜನಕ್ಕೆ ತೊಂದರೆ

Date:

ಅಸ್ಸಾಂ ಪ್ರವಾಹ ಪರಿಸ್ಥಿತಿ ಗುರುವಾರದಿಂದ ಹದಗೆಟ್ಟಿದ್ದು, 9 ಜಿಲ್ಲೆಗಳಲ್ಲಿ 1.98 ಲಕ್ಷಕ್ಕೂ ಹೆಚ್ಚು ಜನರು ತೊಂದರೆಗೀಡಾಗಿದ್ದಾರೆ. ರೆಮಲ್ ಚಂಡಮಾರುತದ ನಂತರ ನಿರಂತರ ಮಳೆಯಯಾದ ಕಾರಣ ಪ್ರಮುಖ ನದಿಗಳ ನೀರಿನ ಮಟ್ಟ ಏರಿದ್ದರಿಂದ ಒಬ್ಬರು ನದಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೈಲಕಂಡಿ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ನದಿಯಲ್ಲಿ ಬಿದ್ದು ಸಾವನ್ನಪ್ಪಿದ್ದು, ಮಂಗಳವಾರದಿಂದ ಪ್ರವಾಹ ಮತ್ತು ಮಳೆಯಿಂದಾಗಿ ರಾಜ್ಯದಲ್ಲಿನ ಸಾವಿನ ಸಂಖ್ಯೆ 6 ಕ್ಕೆ ಏರಿಕೆಯಾಗಿದ್ದು, 18 ಮಂದಿ ಗಾಯಗೊಂಡಿದ್ದಾರೆ.

ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಎಎಸ್‌ಡಿಎಂಎ) ವರದಿಯ ಪ್ರಕಾರ ನಾಗಾವ್, ನಾಗಾವ್, ಕರೀಮ್‌ಗಂಜ್, ಹೈಲಕಂಡಿ, ಪಶ್ಚಿಮ ಕರ್ಬಿ ಆಂಗ್ಲಾಂಗ್, ಕ್ಯಾಚಾರ್, ಹೊಜೈ, ಗೋಲಾಘಾಟ್, ಕರ್ಬಿ ಆಂಗ್ಲಾಂಗ್ ಮತ್ತು ದಿಮಾ ಹಸಾವೊ ಜಿಲ್ಲೆಗಳಲ್ಲಿ ಒಟ್ಟಾರೆಯಾಗಿ 1,98,856 ಜನರು ತೊಂದರೆಗೊಳಗಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಚಾರ್ ಅತ್ಯಂತ ಹೆಚ್ಚು ಪೀಡಿತ ಜಿಲ್ಲೆಯಾಗಿದ್ದು, 1,02,246 ಜನರು ಪ್ರವಾಹದ ನೀರಿನಲ್ಲಿ ತತ್ತರಿಸಿದ್ದರೆ, ನಂತರ ಕರೀಮ್‌ಗಂಜ್‌ನಲ್ಲಿ 36,959, ಹೊಜಾಯ್‌ನಲ್ಲಿ 22,058 ಮತ್ತು ಹೈಲಕಂಡಿಯಲ್ಲಿ 14,308 ಜನರು ಅಪಾಯದ ಸ್ಥಿತಿ ಎದುರಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೋರಾಟಗಳನ್ನು ಹತ್ತಿಕ್ಕಿದ ಗೌಡರ ಹಾಸನದಲ್ಲಿ ಮತ್ತೆ ಮೊಳಗಿದ ಹೋರಾಟದ ಕೂಗು

ರಾಜ್ಯದ ಒಟ್ಟು 3,238.8 ಹೆಕ್ಟೇರ್ ಪ್ರದೇಶದ ಬೆಳೆ ಕೊಚ್ಚಿಕೊಂಡು ಹೋಗಿದ್ದು, 2,34,53 ಪ್ರಾಣಿಗಳಿಗೂ ಹಾನಿಯುಂಟಾಗಿದೆ

ಬ್ರಹ್ಮಪುತ್ರ ಮತ್ತು ಬರಾಕ್ ನದಿಗಳು ಅದರ ಉಪನದಿಗಳೊಂದಿಗೆ ಪ್ರವಾಹ ಪೀಡಿತ ಜಿಲ್ಲೆಗಳ ಹಲವಾರು ಸ್ಥಳಗಳಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ಎಂದು ವರದಿ ತಿಳಿಸಿದೆ.

ಪ್ರವಾಹದಿಂದ 35,640 ಜನರು 110 ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. ಹೊಜೈನಲ್ಲಿ ಅತಿ ಹೆಚ್ಚು 19,646, ನಂತರ ಕ್ಯಾಚಾರ್‌ನಲ್ಲಿ 12,110, ಹೈಲಕಂಡಿಯಲ್ಲಿ 2,060 ಮತ್ತು ಕರೀಮ್‌ಗಂಜ್‌ನಲ್ಲಿ 1,613 ಜನರು ಆಶ್ರಯ ಪಡೆದಿದ್ದಾರೆ.

ಅಸ್ಸಾಂನ ಬರಾಕ್ ಕಣಿವೆ ಮತ್ತು ದಿಮಾಹಸಾವೊದ ಮೂರು ಜಿಲ್ಲೆ ಗಳಲ್ಲಿ ಜನಜೀವನ ಸ್ಥಗಿತಗೊಂಡಿದೆ. ಇತರ ಪೀಡಿತ ಜಿಲ್ಲೆಗಳಲ್ಲಿ ಗುರುವಾರ ಮಧ್ಯಂತರ ಮಳೆ ಮತ್ತು ಗುಡುಗು ಸಹಿತ ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...