ಅಸ್ಸಾಂ ಚುನಾವಣೆ: ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ

Date:

ಮುಂಬರುವ 2026ರ ಅಸ್ಸಾಂ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿದ್ಧತೆಯ ಭಾಗವಾಗಿ ಐವರು ಐಎಎಸ್ ಹಾಗೂ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಹೊಸ ಸ್ಥಳ ನಿಯೋಜಿಸುವಂತೆ ಕೇಂದ್ರ ಚುನಾವಣಾ ಆಯೋಗ ಸೋಮವಾರ ಆದೇಶಿಸಿರುವುದಾಗಿ ಹಿಂದೂಸ್ತಾನ್‌ ಟೈಮ್ಸ್ ವರದಿ ಮಾಡಿದೆ.

ಚುನಾವಣಾ ಪ್ರಕ್ರಿಯೆಯಲ್ಲಿ ಆಡಳಿತಾತ್ಮಕ ತಟಸ್ಥತೆಯನ್ನು ಕಾಪಾಡುವ ದೃಷ್ಟಿಯಿಂದ ಈ ವರ್ಗಾವಣೆಗಳನ್ನು ತಕ್ಷಣದಿಂದಲೇ ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ಆಯೋಗ ಸೂಚಿಸಿದೆ. ಅಲ್ಲದೆ, ನಿಯೋಜಿತ ಅಧಿಕಾರಿಗಳು ತಮ್ಮ ಹೊಸ ಹುದ್ದೆಯ ಅಧಿಕಾರ ವಹಿಸಿಕೊಂಡಿರುವ ಬಗ್ಗೆ ಖಚಿತಪಡಿಸಿ, ಮಾರ್ಚ್ 17ರೊಳಗೆ ಅನುಪಾಲನಾ ವರದಿಯನ್ನು ಸಲ್ಲಿಸುವಂತೆಯೂ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ಆದೇಶದ ಅನ್ವಯ, ಜಿಲ್ಲಾ ಚುನಾವಣಾಧಿಕಾರಿಗಳಾಗಿ ಐಎಎಸ್ ಅಧಿಕಾರಿಗಳಾದ ಪಿ. ಉದಯ್ ಪ್ರವೀಣ್ ಅವರನ್ನು ಕೊಕ್ರಜಾರ್‌ಗೆ, ಸೃಷ್ಟಿ ಸಿಂಗ್ ಅವರನ್ನು ಮಜುಲಿಗೆ, ಕಿಮ್ನೈ ಚಾಂಗ್ಸನ್ ಅವರನ್ನು ಬಕ್ಸಾಕ್ಕೆ, ಮಧುಸೂದನ್ ನಾಥ್ ಅವರನ್ನು ಚಿರಂಗ್‌ಗೆ ಹಾಗೂ ಜಯ್ ವಿಕಾಶ್ ಅವರನ್ನು ಉದಲ್ಗುರಿಗೆ ನಿಯೋಜಿಸಲಾಗಿದೆ. ಅದೇ ರೀತಿ, ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಐಪಿಎಸ್ ಅಧಿಕಾರಿಗಳಾದ ಸೋಮಲಿನ್ ಶುಭದರ್ಶಿನಿ ಅವರನ್ನು ಮಜುಲಿಗೆ, ಆರ್. ಶೀತಲ್ ಕುಮಾರ್ ಅವರನ್ನು ದಕ್ಷಿಣ ಸಲ್ಮಾರಾ-ಮಂಕಚಾರ್‌ಗೆ, ಅಂಚಲ್ ಚೌಹಾಣ್ ಅವರನ್ನು ಸಾದಿಯಾಕ್ಕೆ, ಸುಧಾಕರ್ ಸಿಂಗ್ ಅವರನ್ನು ಚಿರಂಗ್‌ಗೆ ಹಾಗೂ ಮೋಹನ್ ಲಾಲ್ ಮೀನಾ ಅವರನ್ನು ಧೇಮಾಜಿಗೆ ವರ್ಗಾವಣೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ಪ್ರಸ್ತುತ ಹುದ್ದೆಯಿಂದ ವರ್ಗಾವಣೆಗೊಂಡಿರುವ ಅಧಿಕಾರಿಗಳಿಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಯಾವುದೇ ಚುನಾವಣಾ ಸಂಬಂಧಿತ ಜವಾಬ್ದಾರಿಗಳನ್ನು ನೀಡಬಾರದು ಎಂದೂ ಆಯೋಗವು ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಒಟ್ಟು 126 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಅಸ್ಸಾಂನಲ್ಲಿ ಏಪ್ರಿಲ್ 9 ರಂದು ಮತದಾನ ನಡೆಯಲಿದೆ. ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯು ಸೋಮವಾರದಿಂದಲೇ ಆರಂಭವಾಗಿದ್ದು, ಮಾರ್ಚ್ 23ರವರೆಗೆ ಮುಂದುವರಿಯಲಿದೆ. ಮಾರ್ಚ್ 24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಮಾರ್ಚ್ 26 ಕಡೆಯ ದಿನವಾಗಿದೆ. ಮೇ. 4 ರಂದು ಫಲಿತಾಂಶ ಪ್ರಕಟವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...