ಮುಸ್ಲಿಂ ಶಾಸಕರಿಗಿದ್ದ ಶುಕ್ರವಾರದ ನಮಾಜ್ ವಿರಾಮ ರದ್ದುಗೊಳಿಸಿದ ಅಸ್ಸಾಂ ಸರ್ಕಾರ

Date:

ಅಸ್ಸಾಂ ವಿಧಾನಸಭೆಯಲ್ಲಿ ಮುಸ್ಲಿಂ ಶಾಸಕರಿಗಿದ್ದ ಎರಡು ಗಂಟೆಗಳ ನಮಾಜ್ ವಿರಾಮ ರದ್ದುಗೊಳಿಸುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಘೋಷಿಸಿದ್ದಾರೆ. ಇದು ಉತ್ಪಾದಕತೆಯನ್ನು ಹೆಚ್ಚಿಸುವ ಮತ್ತು ವಸಾಹತುಶಾಹಿ ಯುಗದ ಅಭ್ಯಾಸಗಳನ್ನು ತ್ಯಜಿಸುವ ಒಂದು ಹೆಜ್ಜೆ ಎಂದು ಸರ್ಕಾರ ಹೇಳಿಕೊಂಡಿದೆ.

ಮುಸ್ಲಿಂ ಶಾಸಕರು ಮತ್ತು ಸಿಬ್ಬಂದಿ ಸದಸ್ಯರಿಗೆ ಶುಕ್ರವಾರದ ಪ್ರಾರ್ಥನೆ ಅಥವಾ ನಮಾಜ್‌ಗಾಗಿ ಅಸ್ಸಾಂನಲ್ಲಿ ಈ ಹಿಂದೆ ಎರಡು ಗಂಟೆಗಳ ಕಾಲ ವಿರಾಮವನ್ನು ನೀಡಲಾಗುತ್ತಿತ್ತು. ಆದರೆ ಈ ದೀರ್ಘಕಾಲದ ನಿಬಂಧನೆಯನ್ನು ಶುಕ್ರವಾರವೇ ಅಸ್ಸಾಂ ಸರ್ಕಾರ ತೆಗೆದುಹಾಕಿದೆ.

ಈ ನಿರ್ಧಾರವನ್ನು ಬೆಂಬಲಿಸಿದ ವಿಧಾನಸಭೆ ಸ್ಪೀಕರ್ ಬಿಸ್ವಜಿತ್ ಡೈಮರಿ ಮತ್ತು ಶಾಸಕರಿಗೆ ಮುಖ್ಯಮಂತ್ರಿ ಶರ್ಮಾ ಕೃತಜ್ಞತೆ ಸಲ್ಲಿಸಿದರು. ಜುಮ್ಮಾ ವಿರಾಮವನ್ನು ರದ್ದುಪಡಿಸುವ ಮೂಲಕ, ಶಾಸಕಾಂಗ ಉತ್ಪಾದಕತೆಗೆ ಆದ್ಯತೆ ನೀಡುತ್ತಿದ್ದಾರೆ ಎಂದು ಒತ್ತಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಅಸ್ಸಾಂ ಪ್ರವಾಹ | ನೀರಿನ ಮಟ್ಟ ಇಳಿಕೆ, ಮೃತರ ಸಂಖ್ಯೆ 109ಕ್ಕೆ ಏರಿಕೆ

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಹಿಮಂತ ಬಿಸ್ವಾ ಶರ್ಮಾ, “2 ಗಂಟೆಗಳ ಜುಮ್ಮಾ ವಿರಾಮವನ್ನು ತೆಗೆದುಹಾಕುವ ಮೂಲಕ, ಅಸ್ಸಾಂ ಅಸೆಂಬ್ಲಿಯು ಉತ್ಪಾದಕತೆಗೆ ಆದ್ಯತೆ ನೀಡಿದೆ. ವಸಾಹತುಶಾಹಿ ಪದ್ಧತಿಯನ್ನು ಕೊನೆ ಮಾಡಿದೆ. ಯಾವುದೇ ಧಾರ್ಮಿಕ ವಿಚಾರಗಳಿಲ್ಲದೆ ವಿಧಾನಸಭೆ ಕಾರ್ಯ ನಿರ್ವಹಿಸಬೇಕು” ಎಂದಿದ್ದಾರೆ.

ಎಲ್ಲಾ ಅಸೆಂಬ್ಲಿ ಸದಸ್ಯರು ಮಾಡಿದ ಸರ್ವಾನುಮತದ ನಿರ್ಧಾರದ ಭಾಗವಾಗಿ ಅಸ್ಸಾಂ ವಿಧಾನಸಭೆಯಲ್ಲಿ ನಮಾಜ್ ವಿರಾಮವನ್ನು ರದ್ದುಗೊಳಿಸಲಾಗಿದೆ. ಶುಕ್ರವಾರದಂದು ಮಧ್ಯಾಹ್ನ 12:00 ರಿಂದ 2:00ರವರೆಗೆ ಎರಡು ಗಂಟೆಗಳ ವಿರಾಮ ನೀಡಲಾಗುತ್ತಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...