ಹಲ್ಲೆ, 10 ಲಕ್ಷ ರೂ. ಸುಲಿಗೆ ಪ್ರಕರಣ | ಐವರು ಪೊಲೀಸರ ಬಂಧನ

Date:

ಹರಿಯಾಣ ಮೂಲದ ಪೊಲೀಸ್ ಪೇದೆ ಸೇರಿದಂತೆ ನಾಲ್ವರು ಪುರುಷರಿಂದ 10 ಲಕ್ಷ ರೂಪಾಯಿ ಸುಲಿಗೆ ಮಾಡಿ, ಅವರ ಮೇಲೆ ಐವರು ಪೊಲೀಸ್ ಸಿಬ್ಬಂದಿಗಳೇ ಹಲ್ಲೆ ನಡೆಸಿರುವ ಘಟನೆ ನೈಋತ್ಯ ದೆಹಲಿಯಲ್ಲಿ ನಡೆದಿದೆ. ಪ್ರಕರಣದಲ್ಲಿ ಐವರೂ ಆರೋಪಿ ಪೊಲೀಸರನ್ನು ಬಂಧಿಸಲಾಗಿದೆ ಎಂದು ದೆಹಲಿ ಉಪ ಪೊಲೀಸ್ ಆಯುಕ್ತ (ನೈಋತ್ಯ) ರೋಹಿತ್ ಮೀನಾ ತಿಳಿಸಿದ್ದಾರೆ.

ದೆಹಲಿಯ ಮಹಿಪಾಲ್‌ಪುರದ ರಂಗಪುರಿ ಪೆಟ್ರೋಲ್ ಪಂಪ್ ಬಳಿ ಮಂಗಳವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬಂಧಿತ ಎಲ್ಲ ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

“ಹಲ್ಲೆಗೊಳಗಾಗಿದ್ದವರಲ್ಲಿ ಒಬ್ಬರಾದ ಸುಖ್ ಕರಣ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 384 (ಸುಲಿಗೆ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ” ಎಂದು ರೋಹಿತ್ ಮೀನಾ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುರುಗ್ರಾಮ್‌ನ ಮದ್ಯದಂಗಡಿಯಲ್ಲಿ ಕೆಲಸ ಮಾಡುತ್ತಿರುವ ದೂರುದಾರ ಕರಣ್, ತನ್ನ ಸ್ನೇಹಿತರಾದ ಅನಿಲ್ ಚಿಲ್ಲರ್, ದೀಪಕ್ ಛಿಲ್ಲರ್ ಮತ್ತು ರಾಜೇಶ್ ಕುಮಾರ್ ಅವರೊಂದಿಗೆ ಕಾರಿನಲ್ಲಿ ಮದ್ಯ ಸೇವಿಸುತ್ತಿದ್ದರು ಎಂದು ಹೇಳಲಾಗಿದೆ.

“ನಾವು ನಮ್ಮ ಕಾರಿನಲ್ಲಿ ಮದ್ಯ ಸೇವಿಸುತ್ತಿದ್ದೆವು. ಏಕಾಏಕಿ ಎರಡು ಕಾರು ಹಾಗೂ ಮೋಟಾರ್ ಬೈಕ್‌ನಲ್ಲಿ ಸಾಮಾನ್ಯ ಉಡುಪಿನಲ್ಲಿದ್ದ ಐವರು ಬಂದರು. ಅವರು ದೆಹಲಿ ಪೊಲೀಸ್ ಸಿಬ್ಬಂದಿ ಎಂದು ಹೇಳಿಕೊಂಡು ನಮ್ಮನ್ನು ಥಳಿಸಲು ಪ್ರಾರಂಭಿಸಿದರು” ಎಂದು ಕರಣ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಕರಣ್ ಅವರ ಸ್ನೇಹಿತ ರಾಜೇಶ್ ಕುಮಾರ್ ಹರಿಯಾಣ ಪೊಲೀಸ್ ಕಾನ್‌ಸ್ಟೆಬಲ್ ಆಗಿದ್ದಾರೆ. ದೀಪಕ್ ಛಿಲ್ಲರ್ ಕೂಡ ದೆಹಲಿ ಪೊಲೀಸ್‌ ಇಲಾಖೆಯಲ್ಲಿ ಕಾನ್ಸ್‌ಟೇಬಲ್ ಆಗಿದ್ದು, ಅವರು ನಾಗರಿಕ ಉಡುಪಿನಲ್ಲಿದ್ದರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

“ನಮ್ಮನ್ನು ಥಳಿಸಿ ಭಿಕಾಜಿ ಕಾಮಾ ಪ್ಲೇಸ್‌ನಲ್ಲಿರುವ ಅವರ ಕಚೇರಿಗೆ ಕರೆದೊಯ್ದರು. ಆಗ, ಅವರು ಹವಾಲ್ದಾರ್ ಅಶೋಕ್ ಮತ್ತು ಕಾನ್‌ಸ್ಟೆಬಲ್ ವಿಶ್ವಾಸ್ ದಹಿಯಾ ಎಂದು ನಮಗೆ ಗೊತ್ತಾಯಿತು. ಅವರು, ದೆಹಲಿಯಲ್ಲಿ ಮದ್ಯ ಕಳ್ಳಸಾಗಣೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಕಾರುಗಳನ್ನು ಬಿಡುಗಡೆ ಮಾಡುವುದಿಲ್ಲ. ಪ್ರಕರಣದಿಂದ ಪಾರಾಗಲು 10 ಲಕ್ಷ ರೂ. ಹಣ ನೀಡಬೇಕೆಂದು ಹೇಳಿದರು. ಸ್ನೇಹಿತರ ಮೂಲಕ ಹಣವನ್ನು ಹೊಂದಿಸಿ, ಅವರಿಗೆ ಕೊಟ್ಟಿದ್ದೇವೆ” ಎಂದು ಕರಣ್ ವಿವರಿಸಿದ್ದಾರೆ.

ಎಲ್ಲ ಆರೋಪಿ ಪೊಲೀಸರನ್ನು ಬಂಧಿಸಲಾಗಿದೆ. “ಆರೋಪಿಗಳನ್ನು ಬುಧವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ” ಎಂದು ಡಿಸಿಪಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...