ಆಂಧ್ರಪ್ರದೇಶ | ಶ್ರೀಕಾಕುಳಂನ ವೆಂಕಟೇಶ್ವರ ಸ್ವಾಮಿ ದೇಗುಲದಲ್ಲಿ ಕಾಲ್ತುಳಿತ: ಕನಿಷ್ಠ 9 ಮಂದಿ ಸಾವು

Date:

ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗ ಪಟ್ಟಣದ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಶನಿವಾರ ನಡೆದ ಕಾಲ್ತುಳಿತದಲ್ಲಿ ಕನಿಷ್ಠ 9 ಮಂದಿ ಭಕ್ತರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇವಾಲಯದ ಆವರಣದಲ್ಲಿ ಭಕ್ತರ ಮೃತದೇಹಗಳು ಬಿದ್ದಿರುವ ಆಘಾತಕಾರಿ ದೃಶ್ಯಗಳು ಮಾಧ್ಯಮಗಳಲ್ಲಿ ವರದಿಯಾಗಿದೆ.

ಆಂಧ್ರಪ್ರದೇಶ ಮುಖ್ಯಮಂತ್ರಿಗಳ ಕಚೇರಿ (CMO) ಹೇಳಿಕೆ ಪ್ರಕಾರ, ಏಕಾದಶಿ ಆಚರಣೆಗಾಗಿ ದೇವಾಲಯಕ್ಕೆ ಬೃಹತ್ ಜನಸಮೂಹ ಸೇರಿದ್ದರಿಂದ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗಿ ಈ ದುರಂತ ಸಂಭವಿಸಿದೆ. ಗಾಯಗೊಂಡ ಭಕ್ತರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸ್ ತಂಡಗಳು ಮತ್ತು ತುರ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ರಾಜ್ಯ ಕೃಷಿ ಸಚಿವ ಕೆ. ಅಚ್ಚನ್ನಾಯ್ಡು ಘಟನೆಯ ನಂತರ ದೇವಾಲಯಕ್ಕೆ ತಲುಪಿ ದೇವಾಲಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಜನಸಮೂಹ ನಿಯಂತ್ರಣ ಮತ್ತು ಪರಿಹಾರ ಕಾರ್ಯಗಳಿಗೆ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಹಾರದಲ್ಲಿ ಕೋಟಿ ಉದ್ಯೋಗದ ಭರವಸೆ; ಹಳೆಯ ಭರವಸೆ ಎಲ್ಲಿ ಹೋಯಿತು ಮೋದೀಜೀ?

ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಕಾಲ್ತಳಿತಕ್ಕೆ ಆಘಾತ ವ್ಯಕ್ತಪಡಿಸಿ, ಜೀವಗಳ ನಷ್ಟವನ್ನು “ಅತ್ಯಂತ ಹೃದಯವಿದ್ರಾವಕ” ಎಂದು ಕರೆದಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿ, ಗಾಯಗೊಂಡವರಿಗೆ ತ್ವರಿತ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

“ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗದ ವೆಂಕಟೇಶ್ವರ ದೇವಾಲಯದಲ್ಲಿ ನಡೆದ ಕಾಲ್ತಳಿತ ಘಟನೆ ಆಘಾತಕಾರಿ. ಈ ದುರಂತದಲ್ಲಿ ಭಕ್ತರ ಸಾವು ಅತ್ಯಂತ ಹೃದಯವಿದ್ರಾವಕ. ಮೃತರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು. ಗಾಯಗೊಂಡವರಿಗೆ ತ್ವರಿತ ಮತ್ತು ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸ್ಥಳೀಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕ್ರಮಗಳನ್ನು ಮೇಲ್ವಿಚಾರಣೆ ಮಾಡಬೇಕು” ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...