ಹೈದರಾಬಾದ್‌ನ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: 9 ಸಾವು

Date:

ತೆಲಂಗಾಣ ರಾಜ್ಯದ ಹೈದರಾಬಾದ್‌ ನಗರದ ನಾಂಪಲ್ಲಿ ಪ್ರದೇಶದ ಬಜಾರ್‌ಘಾಟ್‌ನಲ್ಲಿ ನಾಲ್ಕು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿರುವ ರಾಸಾಯನಿಕ ಗೋಡೌನ್‌ನಲ್ಲಿ ಸೋಮವಾರ ಭಾರಿ ಬೆಂಕಿ ಅವಘಡ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.

ಹೈದರಾಬಾದ್‌ ಕೇಂದ್ರ ವಲಯ ಡಿಸಿಪಿ ವೆಂಕಟೇಶ್ವರ್ ರಾವ್ ಪ್ರಕಾರ, ಬೆಳಗ್ಗೆ 9:30ರ ಸುಮಾರಿಗೆ ಸ್ಟಿಲ್ ಫ್ಲೋರ್‌ನಲ್ಲಿ ಕಾರನ್ನು ದುರಸ್ತಿ ಮಾಡುವಾಗ ಸಣ್ಣ ಕಿಡಿಯಿಂದ ಬೆಂಕಿ ಕಾಣಿಸಿಕೊಂಡು ಬೆಂಕಿ ಹೊತ್ತುಕೊಂಡಿದೆ. ಸ್ಥಳದಲ್ಲಿ ರಾಸಾಯನಿಕವನ್ನು ಸಂಗ್ರಹಿಸುವ ಹಲವಾರು ಡ್ರಮ್‌ಗಳನ್ನು ಸಹ ಸಂಗ್ರಹಿಸಲಾಗಿರುವುದರಿಂದ ಬೆಂಕಿಯ ಕೆನ್ನಾಲಿಗೆ ಎಲ್ಲೆಡೆ ವ್ಯಾಪಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉರಿದು ಉಳಿದ ಮಣ್ಣಿನ ಹಣತೆಯಲ್ಲಿ ಎಣ್ಣೆ ಹೆಕ್ಕುವ ಬಡವರು ಮತ್ತು ವಿಶ್ವಗುರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೆಲಮಹಡಿಯಲ್ಲಿರುವ ಗೋಡೌನ್‌ನಲ್ಲಿ ಕಾರಿನ ರಿಪೇರಿ ಕಾರ್ಯ ನಡೆಯುತ್ತಿದ್ದು, ಕಿಡಿಗಳು ಗೋಡೌನ್‌ನಲ್ಲಿ ಇರಿಸಲಾಗಿದ್ದ ಕೆಮಿಕಲ್ ಬ್ಯಾರೆಲ್‌ಗೆ ವ್ಯಾಪಿಸಿ ಬೆಂಕಿ ಹೊತ್ತಿಕೊಂಡಿದೆ. ಫೈಬರ್ – ಪ್ಲಾಸ್ಟಿಕ್ ತಯಾರಿಕೆಯಲ್ಲಿ ಶೇಖರಿಸಲಾಗಿದ್ದ ದಹನಕಾರಿ ರಾಸಾಯನಿಕ ಇದಾಗಿದೆ. ಸ್ವಲ್ಪ ಸಮಯದಲ್ಲೇ ಬೆಂಕಿ ಕಟ್ಟಡದ ಇತರ ಮಹಡಿಗಳನ್ನು ಆವರಿಸಿತು ಮತ್ತು ಆರು ಸಾವುಗಳಿಗೆ ಕಾರಣವಾಯಿತು” ಎಂದು ಡಿಸಿಪಿ ಹೇಳಿದ್ದಾರೆ.

ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿಯನ್ನು ಹತೋಟಿಗೆ ತರಲಾಗಿದೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳಲು ಎರಡು ತಂಡಗಳನ್ನು ಕಳುಹಿಸಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್)ಗೂ ಎಚ್ಚರಿಕೆ ನೀಡಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

“ನಾವು ಒಂದು ಗಂಟೆಯೊಳಗೆ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದೇವೆ ಮತ್ತು ಕಟ್ಟಡದಲ್ಲಿ ಸಿಲುಕಿದ್ದ 21 ಜನರನ್ನು ರಕ್ಷಿಸಿದ್ದೇವೆ. ಗಾಯಗೊಂಡವರನ್ನು ಉಸ್ಮಾನಿಯಾ ಜನರಲ್ ಆಸ್ಪತ್ರೆಗೆ ಸೇರಿಸಿದ್ದೇವೆ” ಎಂದು ಡಿಸಿಪಿ ತಿಳಿಸಿದ್ದಾರೆ.

ಅಗ್ನಿ ಅವಘಡಕ್ಕೆ ಕಾರಣ ಮತ್ತು ಹಾನಿಯ ಪ್ರಮಾಣ ಇನ್ನೂ ಅಧಿಕೃತವಾಗಿ ತಿಳಿದು ಬರಬೇಕಿದೆ.

ಮೊನ್ನೆಯಷ್ಟೇ ಹೈದರಾಬಾದ್‌ನ ಶಾಲಿಬಂಡಾದಲ್ಲಿರುವ ಎಲೆಕ್ಟ್ರಾನಿಕ್ಸ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಆದರೆ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆರು ಅಗ್ನಿಶಾಮಕ ವಾಹನಗಳು ಮತ್ತು 30 ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಯಶಸ್ವಿಯಾಗಿ ಬೆಂಕಿಯನ್ನು ನಂದಿಸಿದ್ದಾರೆ.

ಮತ್ತೊಂದು ಘಟನೆ

“ಶಾಲಿಬಂಡಾದಲ್ಲಿರುವ ಎಲೆಕ್ಟ್ರಾನಿಕ್ಸ್ ಶೋರೂಮ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಬೆಂಕಿ ಶೋರೂಮ್‌ನ ಎರಡು ಮತ್ತು ಮೂರನೇ ಮಹಡಿಗೆ ವ್ಯಾಪಿಸಿತು. ಒಟ್ಟು ಆರು ಅಗ್ನಿಶಾಮಕ ವಾಹನಗಳು ಮತ್ತು 30 ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಮೂರು ಗಂಟೆಗಳ ಕಾರ್ಯಾಚರಣೆಯ ನಂತರ ನಾವು ಬೆಂಕಿಯನ್ನು ನಿಯಂತ್ರಿಸಿದ್ದೇವೆ. ಇಂದು ಮುಂಜಾನೆ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೈದರಾಬಾದ್‌ನ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...