ಬುರ್ಖಾ ಧರಿಸಿದ್ದ ಯುವತಿ ಮೇಲೆ ಹಲ್ಲೆ: 6 ಆರೋಪಿಗಳ ಬಂಧನ; ಆರೋಪಿಗಳು ಕುಂಟುವ ವಿಡಿಯೋ ವೈರಲ್

Date:

ಮತ್ತೊಂದು ಸಮುದಾಯದ ಯುವಕನೊಂದಿಗೆ ಕುಳಿತಿದ್ದ ಯುವತಿಯ ಮೇಲೆ ಗುಂಪೊಂದು ಹಲ್ಲೆ ನಡೆಸಿ, ಆಕೆಯ ಬುರ್ಖಾವನ್ನು ಕಿತ್ತು ಹಾಕಿರುವ ಘಟನೆ ಉತ್ತರ ಪ್ರದೇಶದ ಮುಜಫರ್‌ನಗರದಲ್ಲಿ ನಡೆದಿದೆ. ಪ್ರಕರಣದಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರು ಆರೋಪಿಗಳನ್ನು ಕುಂಟುವಂತೆ ಮಾಡಿ, ಕರೆದೊಯ್ಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮುಜಫರ್‌ನಗರದ ಖಲಾಪರ್‌ ಪ್ರದೇಶದ ಹಣಕಾಸು ಕಂಪನಿಯಲ್ಲಿ ಕಂತು ಸಂಗ್ರಹಕಾರರಾಗಿ ಕೆಲಸ ಮಾಡುವ ಮಹಿಳೆ ದೂರು ದಾಖಲಿಸಿದ್ದಾರೆ. ಅವರು ತಮ್ಮ ಮಗಳನ್ನು ತನ್ನ ಸಹೋದ್ಯೋಗಿ ಯುವಕನೊಂದಿಗೆ ಸುಜ್ರು ಗ್ರಾಮಕ್ಕೆ ಕಳಿಸಿದ್ದರು. ಅವರು ಖಲಾಪರ್ ಪ್ರದೇಶದ ದರ್ಜಿ ಬೀದಿಯಲ್ಲಿ ಹಾದುಹೋಗುತ್ತಿದ್ದಾಗ ಆರೋಪಿಗಳ ಗುಂಪು ಅವರನ್ನು ಅಡ್ಡಗಟ್ಟಿದೆ. ಇಬ್ಬರ ಧಾರ್ಮಿಕ ಹಿನ್ನೆಲೆಯನ್ನು ವಿಚಾರಿಸಿ ಹಲ್ಲೆ ಮಾಡಿದೆ. ಅಲ್ಲದೆ, ಯುವತಿಯ ಬುರ್ಖಾ ಅವರನ್ನು ಕಿತ್ತು ಹಾಕಿ, ದಾಂಧಲೆ ನಡೆಸಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಯುವತಿ ಮತ್ತು ಆಕೆಯ ತಾಯಿ ಪೊಲೀಸ್‌ ಠಾನೆಯಲ್ಲಿ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತ್ವರಿತವಾಗಿ ಕ್ರಮ ಕೈಗೊಂಡಿದ್ದಾರೆ. ವಿಡಿಯೋದಲ್ಲಿ ಆರೋಪಿಗಳನ್ನು ಗುರುತಿಸಿದ್ದು, ತಕ್ಷಣ ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಂಧಿತ ಆರೋಪಿಗಳನ್ನು ಮುಜಫರ್‌ನಗರ ನಿವಾಸಿಗಳಾದ ಸರ್ತಾಜ್, ಶಾದಾಬ್, ಮೊಹಮ್ಮದ್ ಉಮರ್, ಅರ್ಶ್, ಶೋಯೆಬ್ ಮತ್ತು ಶಮಿ ಎಂದು ಹೆಸರಿಸಲಾಗಿದೆ. ಆರೋಪಿಗಳ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 115(2), 352, 191(2) ಹಾಗೂ 74ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

“ಮುಜಫರ್‌ನಗರದ ಖಲಾಪರ್ ಪ್ರದೇಶದ ಯುವತಿ ಮತ್ತು ಓರ್ವ ಯುವಕ ಸುಜ್ರು ಗ್ರಾಮದಲ್ಲಿ ಹಣ ಸಂಗ್ರಹಿಸಲು ತೆರಳುತ್ತಿದ್ದರು. ಈ ವೇಳೆ, ಖಲಾಪರ್‌ನಲ್ಲಿ ಗುಂಪೊಂದು ಅವರನ್ನು ತಡೆದು, ಹಲ್ಲೆ ನಡೆಸಿದೆ. ಕಿರುಚುತ್ತಾ ಸ್ಥಳದಿಂದ ತೆರಳಲು ಯತ್ನಿಸಿದ ಯುವತಿಯ ಬುರ್ಖಾವನ್ನು ಎಳೆದು, ಕಿತ್ತು ಹಾಕಲು ಯತ್ನಿಸಿದೆ. ವಿಡಿಯೋ ಆಧರಿಸಿ ಆರೋಪಿಗಳನ್ನು ಗುರುತಿಸಿ, ಬಂಧಿಸಿದ್ದೇವೆ” ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...