ಸೇನಾ ಅಧಿಕಾರಿಗಳ ಮೇಲೆ ದಾಳಿ, ದರೋಡೆ; ಅಧಿಕಾರಿಯ ಸ್ನೇಹಿತೆ ಮೇಲೆ ಸಾಮೂಹಿಕ ಅತ್ಯಾಚಾರ

Date:

ಆಘಾತಕಾರಿ ಘಟನೆಯೊಂದರಲ್ಲಿ, 6-7 ಶಸ್ತ್ರಸಜ್ಜಿತ ದುಷ್ಕರ್ಮಿಗಳ ಗುಂಪೊಂದು ಇಬ್ಬರು ಸೇನಾ ಅಧಿಕಾರಿಗಳು ಮತ್ತು ಅವರ ಮಹಿಳಾ ಸ್ನೇಹಿತರ ಮೇಲೆ ದಾಳಿ ನಡೆಸಿ, ದರೋಡೆ ಮಾಡಿರುವ ಘಟನೆ ಮಧ್ಯಪ್ರದೇಶದ ಇಂಧೋರ್ ಹೊರವಲಯದ ಪಿಕ್ನಿಕ್ ಸ್ಥಳದಲ್ಲಿ ನಡೆದಿದೆ. ಇಬ್ಬರು ಮಹಿಳೆಯಲ್ಲಿ ಒಬ್ಬರನ್ನು ದುಷ್ಕರ್ಮಿಗಳು ಕಾಡಿನೊಳಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಇಂಧೋರ್ ಜಿಲ್ಲೆಯ ಬದ್ಗೊಂಡಾ ಬಳಿಯ ‘ಸ್ಕೆನಿಕ್ ಪಿಕ್ನಿಕ್ ಸ್ಪಾಟ್’ನಲ್ಲಿ ಘಟನೆ ನಡೆದಿದೆ. ದುಷ್ಕರ್ಮಿಗಳ ಗುಂಪಿನಲ್ಲಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಲೂಟಿ, ಹಲ್ಲೆ ಹಾಗೂ ಅತ್ಯಾಚಾರ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಇಂಧೋರ್ ಜಿಲ್ಲೆಯ ಮೊವ್ ಕಂಟೋನ್ಮೆಂಟ್ ಟೌನ್‌ನಲ್ಲಿರುವ ಸೇನಾ ಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದ ಇಬ್ಬರು ಯುವ ಸೇನಾ ಅಧಿಕಾರಿಗಳು ತಮ್ಮ ಇಬ್ಬರು ಮಹಿಳಾ ಸ್ನೇಹಿತರೊಂದಿಗೆ ಪಿಕ್ನಿಕ್‌ಗೆ ತೆರಳಿದ್ದರು. ಸೇನಾ ಶಾಲೆಗೆ ಮರಳುವಾಗ ಅವರನ್ನು ಬಂದೂಕು ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ 6-7 ಮಂದಿ ದುಷ್ಕರ್ಮಿಗಳ ಗುಂಪು ಅಡ್ಡಗಟ್ಟಿದೆ. ಹಲ್ಲೆ ನಡೆಸಿ ದರೋಡೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೆ, ಓರ್ವ ಸೇನಾಧಿಕಾರಿ ಮತ್ತು ಓರ್ವ ಸ್ನೇಹಿತೆಯನ್ನು ಒತ್ತೆಯಾಳಾಗಿ ಇಟ್ಟುಕೊಂಡು, ಇಬ್ಬರನ್ನು ಬಿಡುಗಡೆ ಮಾಡಿದೆ. ಒತ್ತೆಯಾಳಾಗಿ ಇಟ್ಟುಕೊಂಡಿದ್ದ ಇಬ್ಬರನ್ನು ಬಿಡುಗಡೆ ಮಾಡಬೇಕೆಂದರೆ ಹೆಚ್ಚಿನ ಹಣ ತರಬೇಕೆಂದು ಬೆದರಿಕೆ ಹಾಕಿದೆ. ಆದರೆ, ಆ ಇಬ್ಬರು ಬಾರದಿದ್ದಾಗ, ದುಷ್ಕರ್ಮಿಗಳ ಗುಂಪು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಯುವತಿಯನ್ನು ಕಾಡಿನೊಳಗೆ ಎಳೆದೊಯ್ದು ಅತ್ಯಾಚಾರ ಎಸಗಿದೆ ಎಂದು ಆರೋಪಿಸಲಾಗಿದೆ.

ದುಷ್ಕರ್ಮಿಗಳ ಗುಂಪಿನಿಂದ ತಪ್ಪಿಸಿಕೊಂಡು ಬಂದಿದ್ದ ಓರ್ವ ಅಧಿಕಾರಿ ಮತ್ತು ಆತನೊಂದಿಗಿದ್ದ ಯುವತಿ ಸೇನಾ ಅಧಿಕಾರಿಗಳಿಗೆ ಮತ್ತು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಪೊಲೀಸರು ಬರುವುದನ್ನು ಕಂಡ ದುಷ್ಕರ್ಮಿಗಳು ಅಧಿಕಾರಿ ಮತ್ತು ಯುವತಿಯನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.

ಆದಾಗ್ಯೂ, ಇಬ್ಬರು ಶಸ್ತ್ರಸಜ್ಜಿತ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಳಿದವರನ್ನು ಬಂಧಿಸಲು ಶೋಧ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...