ರಾಜಸ್ಥಾನ | ಗೂಡ್ಸ್ ರೈಲಿನ ಹಳಿ ತಪ್ಪಿಸುವ ಯತ್ನ; ಸಿಮೆಂಟ್ ಬ್ಲಾಕ್‌ಗಳು ಪತ್ತೆ

Date:

ರಾಜಸ್ಥಾನದ ಅಜ್ಮೀರ್‌ನಲ್ಲಿ ಗೂಡ್ಸ್ ರೈಲನ್ನು ಹಳಿ ತಪ್ಪಿಸುವ ಯತ್ನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಸರಕು ಸಾಗಣೆ ಕಾರಿಡಾರ್ ಹಳಿಗಳಲ್ಲಿ ಸಿಮೆಂಟ್ ಬ್ಲಾಕ್‌ಗಳು ಪತ್ತೆಯಾಗಿದೆ.

“ಪಶ್ಚಿಮ ಮೀಸಲಾದ ಸರಕು ಸಾಗಣೆ ಕಾರಿಡಾರ್‌ನ ಹಳಿಗಳ ಮೇಲೆ ಎರಡು ಸಿಮೆಂಟ್ ಬ್ಲಾಕ್‌ಗಳನ್ನು ಹಾಕುವ ಮೂಲಕ ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ಸರಕು ರೈಲನ್ನು ಹಳಿತಪ್ಪಿಸಲು ಪ್ರಯತ್ನಿಸಲಾಗಿದೆ” ಎಂದು ರೈಲ್ವೆ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಗೂಡ್ಸ್ ರೈಲು ಬ್ಲಾಕ್‌ಗಳಿಗೆ ಅಪ್ಪಳಿಸಿ ನಿಂತಿದೆ. ಯಾವುದೇ ಅಹಿತಕರ ಘಟನೆ ಸಂಭವಿಸಲಿಲ್ಲ. ಸಿಮೆಂಟ್ ಬ್ಲಾಕ್‌ಗಳು ತಲಾ 70 ಕೆಜಿ ತೂಕವಿತ್ತು ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರಂಭದಲ್ಲಿ ಹಳಿಯ ಮೇಲೆ ಸಿಮೆಂಟ್ ಬ್ಲಾಕ್ ಹಾಕಿರುವ ಮಾಹಿತಿ ನೌಕರರಿಗೆ ಸಿಕ್ಕಿದ್ದು, ಸ್ಥಳಕ್ಕಾಗಮಿಸಿದಾಗ ಬ್ಲಾಕ್ ಮುರಿದಿರುವುದು ಕಂಡು ಬಂದಿದೆ. ಅದೇ ಹಳಿಯಲ್ಲಿ ಮತ್ತೊಂದು ಸಿಮೆಂಟ್ ಬ್ಲಾಕ್ ಕೂಡಾ ಕಂಡು ಬಂದಿದೆ. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇದನ್ನು ಓದಿದ್ದೀರಾ? ಹಳಿ ತಪ್ಪಿದ ಸಬರಮತಿ ಎಕ್ಸ್‌ಪ್ರೆಸ್‌ನ 20 ಬೋಗಿಗಳು; ವಿಧ್ವಂಸಕ ಕೃತ್ಯ ಎಂದ ರೈಲ್ವೇ ಸಚಿವ

ಭಾನುವಾರ ಇಂತಹುದ್ದೆ ಒಂದು ಘಟನೆ ನಡೆದಿದೆ. ಕಾನ್ಪುರದ ರೈಲು ಹಳಿ ಮೇಲೆ ಯಾರೋ ಎಲ್‌ಪಿಜಿ ಸಿಲಿಂಡರ್‌ ಇರಿಸಿದ್ದು, ಪ್ರಯಾಗ್‌ರಾಜ್‌ನಿಂದ ಹರಿಯಾಣದ ಭಿವಾನಿಗೆ ಪ್ರಯಾಣಿಸುತ್ತಿದ್ದ ಕಾಳಿಂದಿ ಎಕ್ಸ್‌ಪ್ರೆಸ್ ರೈಲು ಇದಕ್ಕೆ ಡಿಕ್ಕಿ ಹೊಡೆದಿದೆ. ಆದರೆ ಯಾವುದೇ ಅನಾಹುತ ಸಂಭವಿಸಿಲ್ಲ.

ಸಿಲಿಂಡರ್‌ಗೆ ಡಿಕ್ಕಿ ಹೊಡೆದ ನಂತರ ರೈಲು ನಿಂತಿದ್ದು, ಹಳಿಯಲ್ಲಿ ಸಿಲಿಂಡರ್, ಪೆಟ್ರೋಲ್ ಬಾಟಲಿ, ಬೆಂಕಿಕಡ್ಡಿ ಸೇರಿದಂತೆ ಹಲವಾರು ಅನುಮಾನಾಸ್ಪದ ವಸ್ತುಗಳು ಕಂಡು ಬಂದಿದೆ. ಕಾನ್ಪುರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಈವರೆಗೆ ಆರು ಮಂದಿಯನ್ನು ಬಂಧಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...