ಸ್ತನಗಳನ್ನು ಮುಟ್ಟುವ ಪ್ರಯತ್ನ ‘ತೀವ್ರ ಲೈಂಗಿಕ ದೌರ್ಜನ್ಯ’ ಅದು ಅತ್ಯಾಚಾರವಲ್ಲ: ಕೋಲ್ಕತ್ತಾ ಹೈಕೋರ್ಟ್‌

Date:

ಸ್ತನಗಳನ್ನು ಮುಟ್ಟುವ ಪ್ರಯತ್ನ ‘ತೀವ್ರ ಲೈಂಗಿಕ ದೌರ್ಜನ್ಯ’ ಆಗುತ್ತದೆ, ಅದು ಅತ್ಯಾಚಾರವಾಗಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್ ಹೇಳಿದೆ. ಹಾಗೆಯೇ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಆರೋಪಿಯನ್ನು ದೋಷಿ ಎಂದು ಘೋಷಿಸಿ ಶಿಕ್ಷೆ ವಿಧಿಸಿದ್ದ ಪಶ್ಚಿಮ ಬಂಗಾಳದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್‌ ರದ್ದುಗೊಳಿಸಿದೆ.

ಇನ್ನು ಈ ಹಿಂದೆ ಅಲಹಾಬಾದ್ ಹೈಕೋರ್ಟ್, ಪ್ರಕರಣವೊಂದರ ತನಿಖೆ ವೇಳೆ ಸ್ತನ ಮುಟ್ಟುವುದು, ಪೈಜಾಮಾದ ಲಾಡಿ ಎಳೆಯುವುದು ಅತ್ಯಾಚಾರದ ಯತ್ನವಲ್ಲ ಎಂದು ಹೇಳಿತ್ತು. ಹೈಕೋರ್ಟ್‌ನ ಈ ತೀರ್ಪಿಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಲಾಡಿ ಎಳೆಯುವುದು ಅತ್ಯಾಚಾರದ ಯತ್ನ ಅಲ್ಲವೆಂದಾದರೆ ಇನ್ನು ಏನು ಮಾಡಿದರೆ ಅತ್ಯಾಚಾರ ಯತ್ನವೆಂದು ಪರಿಗಣಿಸಲಾಗುತ್ತದೆ ಎಂದು ಪ್ರಶ್ನಿಸಲಾಗಿತ್ತು. ಸದ್ಯ ಸುಪ್ರೀಂ ಕೋರ್ಟ್ ಈ ಆದೇಶಕ್ಕೆ ತಡೆ ನೀಡಿದೆ.

ಇದನ್ನು ಓದಿದ್ದೀರಾ? ‘ಸ್ತನ ಮುಟ್ಟುವುದು ಅತ್ಯಾಚಾರವಲ್ಲ’ವೆಂಬ ಅಲಹಾಬಾದ್‌ ಹೈಕೋರ್ಟ್‌ ತೀರ್ಪಿಗೆ ಸುಪ್ರೀಂ ತಡೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಶ್ಚಿಮ ಬಂಗಾಳದ ವಿಚಾರಣಾ ನ್ಯಾಯಾಲಯವು ಆರೋಪಿಯನ್ನು ತೀವ್ರ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರಕ್ಕೆ ಪ್ರಯತ್ನ ಎರಡರಲ್ಲೂ ತಪ್ಪಿತಸ್ಥನೆಂದು ಘೋಷಿಸಿದ್ದು, ಅವನಿಗೆ 12 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಈ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಮೂರ್ತಿ ಅರಿಜಿತ್ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಬಿಸ್ವರೂಪ್ ಚೌಧರಿ ಅವರ ವಿಭಾಗೀಯ ಪೀಠವು ವೈದ್ಯಕೀಯ ಪರೀಕ್ಷೆಯಲ್ಲಿ ಸಂಭೋಗ ಮಾಡುವ ಯತ್ನ ಅಥವಾ ಸಂಭೋಗ ನಡೆಸಿರುವುದು ಕಂಡುಬಂದಿಲ್ಲ ಎಂದು ಕೋರ್ಟ್ ಹೇಳಿದೆ.

ಸಂತ್ರಸ್ತೆಯ ಹೇಳಿಕೆಯ ಪ್ರಕಾರ ಆರೋಪಿಯು ಮದ್ಯದ ಪ್ರಭಾವದಲ್ಲಿ ಆಕೆಯ ಸ್ತನಗಳನ್ನು ಮುಟ್ಟಲು ಪ್ರಯತ್ನಿಸಿದ್ದಾನೆ. ಇಂತಹ ಪುರಾವೆಗಳು 2012ರ ಪೋಕ್ಸೋ ಕಾಯ್ದೆಯ ಸೆಕ್ಷನ್ 10ರ ಅಡಿಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪವನ್ನು ಬೆಂಬಲಿಸಬಹುದು. ಆದರೆ ಪ್ರಾಥಮಿಕವಾಗಿ ಅತ್ಯಾಚಾರಕ್ಕೆ ಯತ್ನಿಸಿದ ಅಪರಾಧವನ್ನು ಸೂಚಿಸಲ್ಲ. ಹಾಗಾಗಿ ಶಿಕ್ಷೆಯ ಪ್ರಮಾಣವನ್ನು ಇಳಿಸಬೇಕು ಎಂದು ಪೀಠವು ತಿಳಿಸಿದೆ. ಈ ನಿರ್ದಿಷ್ಟ ಪ್ರಕರಣದಲ್ಲಿ, ಅಪರಾಧಿ ಈಗಾಗಲೇ 28 ತಿಂಗಳುಗಳು ಜೈಲ್ಲಿನಲ್ಲಿದ್ದಾನೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...