‘ಸಿಜೆಐ ದಲಿತ ಎಂಬ ಕಾರಣಕ್ಕೆ ಶೂ ಎಸೆಯಲು ಯತ್ನ’: ಜಸ್ಟಿಸ್ ದಾಸ್, ಎಸ್‌.ಬಾಲನ್ ಅಭಿಪ್ರಾಯ

Date:

 “ದಲಿತ ವ್ಯಕ್ತಿ ಈ ದೇಶದ ಮುಖ್ಯ ನ್ಯಾಯಮೂರ್ತಿಯಾಗಿ ಕೂತಿರುವುದು ಸನಾತನಿಗಳಿಗೆ ಇಷ್ಟವಿಲ್ಲ. ಸಂವಿಧಾನಕ್ಕೆ ಯಾರು ಧಿಕ್ಕಾರ ಹೇಳಿದರೋ ಅದೇ ಶಕ್ತಿಗಳು ಈ ಕೆಲಸ ಮಾಡಿವೆ" ಎಂದು ಎಸ್.ಬಾಲನ್ ತಿಳಿಸಿದ್ದಾರೆ.

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್.ಗವಾಯಿ ಅವರ ಮೇಲೆ ದಲಿತ ಎಂಬ ಕಾರಣಕ್ಕಾಗಿಯೇ ಶೂ ಎಸೆಯಲು ಯತ್ನಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್. ನಾಗಮೋಹನ ದಾಸ್ ಮತ್ತು ಹಿರಿಯ ವಕೀಲ ಎಸ್.ಬಾಲನ್ ಖಂಡಿಸಿದ್ದಾರೆ.

‘ಈದಿನ’ದ ಜೊತೆ ಮಾತನಾಡಿದ ಜಸ್ಟಿಸ್ ದಾಸ್ ಅವರು, “ಗವಾಯಿಯವರು ಮಾತನಾಡಿರುವ ವಿಚಾರ ಎಲ್ಲ ಪತ್ರಿಕೆಗಳಲ್ಲೂ ಬಂದಿತ್ತು. ಅದನ್ನು ತಪ್ಪಾಗಿ ಅರ್ಥೈಸಿದಾಗ ಸಿಜೆಐ ಸ್ಪಷ್ಟನೆಯನ್ನೂ ನೀಡಿದ್ದಾರೆ. ಇಷ್ಟಾದರೂ ಅವರ ಮೇಲೆ ಹಲ್ಲೆ ಮಾಡಲು ಯತ್ನಿಸಲಾಗಿದೆ. ಒಬ್ಬ ದಲಿತ ಸಿಜೆಐ ಆಗಿರುವುದನ್ನು ಸಹಿಸಿಕೊಳ್ಳಲಾಗದಷ್ಟು ಅಸಹನೆ, ಅಸಹಿಷ್ಣುತೆ ಸಮಾಜದಲ್ಲಿದೆ. ಇಂತಹ ಪ್ರವೃತ್ತಿಯನ್ನು ಯಾರೂ ಪ್ರೋತ್ಸಾಹಿಸಬಾರದು. ಎಲ್ಲರೂ ಒಗ್ಗೂಡಿ ಖಂಡಿಸಬೇಕು” ಎಂದು ತಿಳಿಸಿದರು.

“ಮುಖ್ಯ ನ್ಯಾಯಮೂರ್ತಿಯವರ ಹೇಳಿಕೆ ಒಪ್ಪಿಗೆಯಾಗದಿದ್ದರೆ ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿ ಟೀಕೆ ಮಾಡಬಹುದು, ಪ್ರಶ್ನೆ ಮಾಡಬಹುದು. ಈ ಹಿಂದೆ ಸಿಜೆಐ ಆಗಿದ್ದ ಚಂದ್ರಚೂಡ್ ಅವರು ಕೆಲವು ಹೇಳಿಕೆ ಕೊಟ್ಟಿದ್ದನ್ನು ವ್ಯಾಪಕ ಚರ್ಚೆಗೆ ಒಳಪಡಿಸಲಾಗಿತ್ತು. ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೆ. ರಚನಾತ್ಮಕವಾಗಿ, ಪ್ರಜಾಪ್ರಭುತ್ವ ಚೌಕಟ್ಟಿನಲ್ಲಿ ಆ ಕೆಲಸ ಮಾಡಬಹುದು. ಆದರೆ ಈಗ ನಡೆದಿರುವ ಘಟನೆ ಒಪ್ಪಲಾಗದ್ದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಮರ್ಶೆಗೆ ಒಳಪಡಿಸಬೇಕು ಎನ್ನುವಂತಹ ಹೇಳಿಕೆಯನ್ನೂ ಸಿಜೆಐ ಕೊಟ್ಟಿರಲಿಲ್ಲ. ತಮ್ಮ ಅನುಭವದ ನೆಲೆಯಲ್ಲಿ ಈ ದೇಶದ ಧರ್ಮ, ದೇವರು, ಜಾತಿ ವ್ಯವಸ್ಥೆ, ಮೂಢನಂಬಿಕೆ, ತಾರತಮ್ಯ- ಇವೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ತಮ್ಮ ಅಭಿಪ್ರಾಯವನ್ನು ಹೇಳಿದ್ದರು. ಇದರಲ್ಲಿ ತಪ್ಪೇನಿದೆ?” ಎಂದು ಪ್ರಶ್ನಿಸಿದರು.

“ಈ ಆರೋಪಿಯನ್ನು ನ್ಯಾಯಾಂಗ ನಿಂದನೆಗೆ ಒಳಪಡಿಸಬಹುದು. ನೀತಿ ಸಂಹಿತೆಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆಂದು ಬಾರ್ ಕೌನ್ಸಿಲ್‌ನವರು ಈ ಸದರಿ ವಕೀಲನ ಸನ್ನದ್ಧನ್ನು ರದ್ದುಪಡಿಸಬಹುದು. ಅಂತಹ ಕ್ರಮಗಳನ್ನು ಜರುಗಿಸಲೇಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿರಿ: ಸುಪ್ರೀಂ ಕೋರ್ಟ್‌ನಲ್ಲಿ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಮೇಲೆ ವಕೀಲನಿಂದ ಶೂ ಎಸೆತ ಯತ್ನ – ಈ ದಿನ.ಕಾಮ್

“ಕೋರ್ಟ್ ಹಾಲ್‌ನಲ್ಲಿ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದಿರುವುದು, ಕೂಗಾಡಿರುವುದು ಕೆಳಹಂತದ ನ್ಯಾಯಾಲಯಗಳಲ್ಲಿ ಈ ಹಿಂದೆಯೂ ನಡೆದಿವೆ. ಆದರೆ ಆ ಘಟನೆಗಳೆಲ್ಲ ವೈಯಕ್ತಿಕ ನೆಲೆಯಲ್ಲಿದ್ದವು. ಆರೋಪಿ ಅಥವಾ ಅಪರಾಧಿಗಳು ವೈಯಕ್ತಿಕ ಕೋಪ, ದ್ವೇಷಕ್ಕೆ ಹೀಗೆ ವರ್ತಿಸಿದ್ದುಂಟು. ಆದರೆ ಈ ಘಟನೆಗೂ ಈ ಹಿಂದೆ ಇತರೆ ನ್ಯಾಯಾಲಯಗಳಲ್ಲಿ ನಡೆದಿರುವ ಘಟನೆಗಳಿಗೂ ವ್ಯತ್ಯಾಸವಿದೆ. ಇಲ್ಲಿ ವೈಯಕ್ತಿನ ನೋವು, ಆಕ್ರೋಶಕ್ಕಿಂತ ಸಾಮಾಜಿಕ ಸ್ಥಿತಿಗಳು ಕಾಣುತ್ತಿವೆ” ಎಂದು ಅಭಿಪ್ರಾಯಪಟ್ಟರು.

ಹೈಕೋರ್ಟ್‌ನ ಹಿರಿಯ ವಕೀಲ ಬಾಲನ್ ಮಾತನಾಡಿ, “ದಲಿತ ವ್ಯಕ್ತಿ ಈ ದೇಶದ ಮುಖ್ಯ ನ್ಯಾಯಮೂರ್ತಿಯಾಗಿ ಕೂತಿರುವುದು ಸನಾತನಿಗಳಿಗೆ ಇಷ್ಟವಿಲ್ಲ. ಸನಾತನಾ ಧರ್ಮಕ್ಕೆ ಅವಮಾನ ಎಂದು ಶೂ ಎಸೆದಿದ್ದಾನೆ. ಗಾಂಧಿಯನ್ನು ಯಾರು ಕೊಂದರು? ಶಂಭೂಕನ ತಲೆ ಕತ್ತರಿಸಿದವರು ಯಾರು? ಏಕಲವ್ಯನ ಬೆರಳು ಕತ್ತರಿಸಿದವರು ಯಾರು? ಅಂಬೇಡ್ಕರ್ ಅವರಿಗೆ ಧಿಕ್ಕಾರ ಹೇಳಿದವರು ಯಾರು? ಸಂವಿಧಾನಕ್ಕೆ ಯಾರು ಧಿಕ್ಕಾರ ಹೇಳಿದರೋ ಅದೇ ಶಕ್ತಿಗಳು ಈ ಕೆಲಸ ಮಾಡಿವೆ. ಸನಾತನ ಧರ್ಮಗಳ ಮನಸ್ಥಿತಿಗಳ ಅನಾವರಣ ಆಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...