ಅಮೃತಸರದಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ: ಪಂಜಾಬ್ ಸಿಎಂ; ವಿಪಕ್ಷ ಖಂಡನೆ

Date:

ಡಾ. ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಯ ಮೇಲೆ ಹತ್ತಿ, ಸುತ್ತಿಗೆಯಿಂದ ಹೊಡೆದು, ಪ್ರತಿಮೆಯ ಪಕ್ಕದಲ್ಲಿ ಇರಿಸಲಾದ ಸಂವಿಧಾನ ಪುಸ್ತಕದ ಶಿಲ್ಪಕ್ಕೆ ಹಾನಿ ಮಾಡಲು ವ್ಯಕ್ತಿಯೊಬ್ಬ ಯತ್ನಿಸಿದ್ದಾನೆ. ಗಣರಾಜ್ಯೋತ್ಸವದಂದು ಹೆರಿಟೇಜ್ ಸ್ಟ್ರೀಟ್‌ನಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲು ವಿಸ್ತರಣಾ ಏಣಿಯನ್ನು ಇರಿಸಲಾಗಿತ್ತು.

ಮೋಗಾ ನಿವಾಸಿ ಆಕಾಶದೀಪ್ ಸಿಂಗ್ ಎಂಬ ವ್ಯಕ್ತಿಯೋರ್ವ ಪ್ರತಿಮೆಯನ್ನು ಹತ್ತಿ ಸುತ್ತಿಗೆಯಿಂದ ಹಲವಾರು ಬಾರಿ ಹೊಡೆದು ಧ್ವಂಸಗೊಳಿಸಿದ್ದಾನೆ. ಪ್ರತಿಮೆಯ ಅವಿಭಾಜ್ಯ ಅಂಗವಾಗಿರುವ ಸಂವಿಧಾನ ಪುಸ್ತಕವನ್ನೂ ಅವನು ಹಾನಿಗೊಳಿಸಿದ್ದಾನೆ. ಈ ಘಟನೆಯನ್ನು ಸಿಎಂ ಭಗವಂತ್ ಮಾನ್ ಮತ್ತು ವಿಪಕ್ಷಗಳು ತೀವ್ರವಾಗಿ ಖಂಡಿಸಿದೆ.

ಇದನ್ನು ಓದಿದ್ದೀರಾ? ಹಾವೇರಿ | ಅಂಬೇಡ್ಕರ್‌ರಂತಾಗಲು ಪಂಚ ಜ್ಞಾನಾರ್ಜನೆ ಮುಖ್ಯ: ಅನ್ನಪೂರ್ಣ ಸಂಗಳದ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುವಕ ಪ್ರತಿಮೆಯನ್ನು ಧ್ವಂಸಗೊಳಿಸುತ್ತಿರುವುದನ್ನು ಜನರು ನೋಡಿದಾಗ, ಜನರು ಅವನನ್ನು ಕೆಳಕ್ಕೆ ಇಳಿಯುವಂತೆ ಒತ್ತಾಯಿಸಿದ್ದಾರೆ. ಆರಂಭದಲ್ಲಿ ಅವರೊಂದಿಗೆ ವಾದ ಮಾಡಿ ಇಳಿಯಲು ನಿರಾಕರಿಸಿದ ಆಕಾಶದೀಪ್ ಅಂತಿಮವಾಗಿ ಒಪ್ಪಿ ಸುತ್ತಿಗೆಯನ್ನು ಬೀಳಿಸಿದನು.

ನಂತರ ಭದ್ರತಾ ಸಿಬ್ಬಂದಿ ಅವನನ್ನು ಬಂಧಿಸಿ ಪೊಲೀಸರಿಗೆ ಒಪ್ಪಿಸಿದರು. ಈ ಕೃತ್ಯದ ಹಿಂದಿನ ಉದ್ದೇಶ ಇನ್ನೂ ಕೂಡಾ ಸ್ಪಷ್ಟವಾಗಿಲ್ಲ.

ಯುವಕನನ್ನು ಪೊಲೀಸ್ ಠಾಣೆಗೆ ಕರೆದೊಯ್ಯುತ್ತಿದ್ದಾಗ, ಗುಂಪಿನಲ್ಲಿದ್ದ ಯಾರೋ ಆತನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಬಳಿಕ ಪೊಲೀಸರು ಆರೋಪಿಯನ್ನು ಎಳೆದು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಇದನ್ನು ಓದಿದ್ದೀರಾ? ತುರುವೇಕೆರೆ | ದಲಿತರ ಹೋರಾಟಕ್ಕೆ ಕೊನೆಗೂ ಜಯ: ಅಂಬೇಡ್ಕರ್ ಭವನದ ಒತ್ತುವರಿ ಜಾಗ ಕಬಳಿಸಿ ಕಟ್ಟಿದ್ದ ಕಟ್ಟಡ ತೆರವು

ಈ ನಡುವೆ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಡಾ. ಅಂಬೇಡ್ಕರ್ ಅವರ ಕಾರಣದಿಂದಾಗಿ ಭಾರತಕ್ಕೆ ಸಮಾನತೆಯ ಹಕ್ಕು ಲಭಿಸಿದೆ ಎಂದು ಲೋಕಸಭಾ ಸದಸ್ಯ ಗುರ್ಜಿತ್ ಔಜ್ಲಾ ವ್ಯಕ್ತಪಡಿಸಿದರು. ಪರಿಸ್ಥಿತಿಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಪಂಜಾಬ್ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕೆಂದು, ಈ ವಿಷಯದ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ಘಟನೆಯನ್ನು ಖಂಡಿಸಿದ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಸುಖ್‌ಬೀರ್ ಸಿಂಗ್ ಬಾದಲ್, ಇದು ಲಕ್ಷಾಂತರ ಜನರ ಭಾವನೆಗಳಿಗೆ ನೋವುಂಟು ಮಾಡಿರುವ ಹೇಯ ಕೃತ್ಯ ಎಂದು ಹೇಳಿದರು. “ಈ ನಾಚಿಕೆಗೇಡಿನ ಘಟನೆಯ ಹಿಂದಿನ ಪಿತೂರಿಯನ್ನು ಬಯಲು ಮಾಡಲು ಅಪರಾಧಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಸಂಪೂರ್ಣ ತನಿಖೆ ನಡೆಸಬೇಕೆಂದು ನಾನು ಒತ್ತಾಯಿಸುತ್ತೇನೆ. ನಮ್ಮ ಸಮಾಜದಲ್ಲಿ ವಿಭಜನೆಗಳನ್ನು ಸೃಷ್ಟಿಸುವ ಇಂತಹ ನೀಚ ಪ್ರಯತ್ನಗಳ ವಿರುದ್ಧ ಒಗ್ಗಟ್ಟಿನಿಂದ ನಿಲ್ಲೋಣ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...