ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೆ ಯತ್ನ; ಕಾಮುಕ ವೈದ್ಯನ ಖಾಸಗಿ ಅಂಗ ಕತ್ತರಿಸಿದ ನರ್ಸ್​

Date:

ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ವರದಿಯಾಗುತ್ತಿವೆ. ಅತ್ಯಾಚಾರದ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ಹೆಚ್ಚುತ್ತಿವೆ. ಕೋಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ-ಕೊಲೆ ವಿರುದ್ಧ ಭಾರೀ ಪ್ರತಿಭಟನೆಗಳು ನಡೆಯುತ್ತಿವೆ. ಇದೇ ಸಮಯದಲ್ಲಿ, ಆಸ್ಪತ್ರೆಯೊಂದರಲ್ಲಿ ವೈದ್ಯರು ನರ್ಸ್‌ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದು, ಸಂತ್ರಸ್ತ ನರ್ಸ್‌ ಕಾಮುಕ ವೈದ್ಯನೊಬ್ಬನ ಖಾಸಗಿ ಅಂಗವನ್ನು ಕತ್ತರಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ.

ಬಿಹಾರದ ಸಮಷ್ಟಿಪುರ ಜಿಲ್ಲೆಯ ಗಂಗಾಪುರದಲ್ಲಿರುವ ಖಾಸಗಿ ಆಸ್ಪತ್ರೆ ‘ಆರ್​ಬಿಎಸ್ ಹೆಲ್ತ್​ ಕೇರ್​ ಸೆಂಟರ್’​ನಲ್ಲಿ ಬುಧವಾರ ರಾತ್ರಿ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ರಾತ್ರಿ ಕೆಲಸ ಮುಗಿಸಿ, ಮನೆಗೆ ಹೊರಡುತ್ತಿದ್ದ ನರ್ಸ್‌ ಮೇಲೆ ಕಾಮುಕ ವೈದ್ಯ ಸಂಜಯ್ ಕುಮಾರ್, ಆಸ್ಪತ್ರೆಯ ನಿರ್ವಾಹಕ ಸುನಿಲ್ ಕುಮಾರ್ ಗುಪ್ತಾ ಹಾಗೂ ಮತ್ತೋರ್ವ ಸಿಬ್ಬಂದಿ ಅವಧೇಶ ಕುಮಾರ್ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಕಾಮುಕರಿಂದ ತಪ್ಪಿಸಿಕೊಳ್ಳಲು ಸಂತ್ರಸ್ತ ನರ್ಸ್‌, ವೈದ್ಯನ ಖಾಸಗಿ ಅಂಗವನ್ನು ಬ್ಲೇಡ್​ನಿಂದ ಕೊಯ್ದಿದ್ದಾರೆ.

ಬಳಿಕ, ಕಾಮುಕರಿಂದ ತಪ್ಪಿಸಿಕೊಂಡು ಮುಸ್ರಿಘರಾರಿ ಪೊಲೀಸ್​ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಮೂವರೂ ಆರೋಪಿಗಳನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನರ್ಸ್​ ಮೇಲೆ ಅತ್ಯಾಚಾರಕ್ಕೆ ಯತ್ನಿಸುವ ಮೊದಲು ಮೂವರೂ ಕಾಮುಕರು ಆಸ್ಪತ್ರೆಯ ಬಾಗಿಲನ್ನು ಒಳಗಿನಿಂದ ಲಾಕ್‌ ಮಾಡಿದ್ದರು. ಮಾತ್ರವಲ್ಲದೆ, ಸಿಸಿಟಿವಿ ಕ್ಯಾಮರಾಗಳನ್ನು ಆಫ್ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಾಮುಕರಿಂದ ತಪ್ಪಿಸಿಕೊಳ್ಳಲು ನರ್ಸ್​ ತೋರಿದ ಧೈರ್ಯ ಶ್ಲಾಘನೀಯ. ವೈದ್ಯನ ಖಾಸಗಿ ಅಂಗವನ್ನು ಕತ್ತರಿಸಿದ ಬ್ಲೇಡ್ ಹಾಗೂ ಅತ್ಯಾಚಾರಕ್ಕೆ ಯತ್ನಕ್ಕೂ ಮುನ್ನ ಮೂವರೂ ಆರೋಪಿಗಳು ಮದ್ಯ ಸೇವಿಸಿದ್ದ ಬಾಟಲಿ ಹಾಗೂ ಆರೋಪಿಗಳ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಬಿಹಾರದಲ್ಲಿ ಮದ್ಯಪಾನ ನಿಷೇಧಿಸಲಾಗಿದೆ. ಅದಾಗ್ಯೂ, ಮದ್ಯಪಾನ ಮಾಡಿರುವ ಆರೋಪಿಗಳ ವಿರುದ್ಧ ಮದ್ಯಪಾನ ನಿಷೇಧ ಕಾನೂನಿನ ಅಡಿಯಲ್ಲೂ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...