ಭಾರತದಲ್ಲಿ 100 ಕೋಟಿಗೂ ಹೆಚ್ಚು ಮಂದಿ ಅಂತರ್ಜಾಲ ಬಳಸುತ್ತಿದ್ದಾರೆ. ಇಂಟರ್‌ನೆಂಟ್ ಬಳಿಕೆಯು ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಅಪಾಯಕಾರಿ ಪರಿಣಾಮ ಬೀರುತ್ತಿದೆ ಎಂಬ ಆತಂಕವೂ ಹೆಚ್ಚುತ್ತಿದೆ. ಈ ನಡುವೆ, ಆಸ್ಟ್ರೇಲಿಯಾ ಮಾದರಿಯಲ್ಲಿ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸಲು ಗೋವಾ ಸರ್ಕಾರ ನಿರ್ಧರಿಸಿದೆ.
ಮೆಟಾ, ಗೂಗಲ್‌ನ ಯೂಟ್ಯೂಬ್ ಹಾಗೂ ಎಕ್ಸ್‌ನಂತಹ ತಂತ್ರಜ್ಞಾನ ದೈತ್ಯ ಕಂಪನಿಗಳ ಪ್ರಮುಖ ಮಾರುಕಟ್ಟೆಗಳಲ್ಲಿ ಭಾರತದ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅನೇಕ ಬಳಕೆದಾರರಿದ್ದಾರೆ. ಆದರೆ, ಭಾರತದಲ್ಲಿ ಸಾಮಾಜಿಕ ಮಾಧ್ಯಮದ ಮೇಲೆ ರಾಷ್ಟ್ರೀಯ ನಿರ್ಬಂಧಗಳಿಲ್ಲ.
ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಅಪ್ರಾಪ್ತ ವಯಸ್ಕರು ಬಳಸದಂತೆ ನಿಯಂತ್ರಿಸುವುದು ಹೇಗೆ ಎಂಬುದನ್ನು ಅಧ್ಯಯನ ಮಾಡಲು ಆಸ್ಟ್ರೇಲಿಯಾದ ಕಾನೂನನ್ನು ಗೋವಾದ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ರಾಜ್ಯದ ಮಾಹಿತಿ ತಂತ್ರಜ್ಞಾನ ಸಚಿವ ರೋಹನ್ ಕೌಂಟೆ ಹೇಳಿದ್ದಾರೆ.
“ಸಾಧ್ಯವಾದರೆ, ನಾವು 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಕೆ ಮಾಡದಂತೆ ನಿಷೇಧವನ್ನು ಜಾರಿಗೆ ತರುತ್ತೇವೆ” ಎಂದು ಅವರು ಹೇಳಿದ್ದಾರೆ.
ಆಂಧ್ರಪ್ರದೇಶವು ಇದೇ ರೀತಿಯ ಕ್ರಮಗಳನ್ನು ಪರಿಶೀಲಿಸುತ್ತಿದೆ ಎಂದು ಹೇಳಿದೆ. ಆಂಧ್ರ ಸರ್ಕಾರವು ಕಾನೂನುಗಳ ಅಧ್ಯಯನಕ್ಕಾಗಿ ಹಿರಿಯ ಮಂತ್ರಿಗಳ ಸಮಿತಿಯನ್ನು ರಚಿಸಿದೆ.ಒಂದು ತಿಂಗಳೊಳಗೆ ವರದಿ ನೀಡುವಂತೆ ಸೂಚಿಸಿದೆ.
ಕಳೆದ ವರ್ಷ, ಆಸ್ಟ್ರೇಲಿಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲಾಯಿತು. ಇಡೀ ಜಗತ್ತಿನಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧಿಸಿ ಮೊದಲ ರಾಷ್ಟ್ರವಾಗಿ ಹೊರಹೊಮ್ಮಿತು.




