ಬುಡಕಟ್ಟು ಮಹಿಳೆಯ ಮೇಲೆ ಅತ್ಯಾಚಾರ; ಆಟೋ ಚಾಲಕನಿಗೆ ಜೀವಾವಧಿ ಶಿಕ್ಷೆ

Date:

ಬುಡಕಟ್ಟು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಆಟೋ ಚಾಲಕನನ್ನು ಅಪರಾಧಿ ಎಂದು ತೆಲಂಗಾಣದ ಆದಿಲಾಬಾದ್‌ನ ಎಸ್‌ಸಿ/ಎಸ್‌ಟಿ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ) ವಿಶೇಷ ನ್ಯಾಯಾಲಯವು ಘೋಷಿಸಿದೆ. ಆತನಿಗೆ ಜೀವಾವಧಿ ಶಿಕ್ಷೆ ಮತ್ತು 30,000 ರೂ. ದಂಡ ವಿಧಿಸಿದೆ.

2024ರ ಆಗಸ್ಟ್ 31ರಂದು ತೆಲಂಗಾಣದ ಕುಮ್ರಾಮ್ ಭೀಮ್ ಆಸಿಫಾಬಾದ್ ಜಿಲ್ಲೆಯ ಜೈನೂರ್‌ನಲ್ಲಿ ಬುಡಕಟ್ಟು ಮಹಿಳೆಯ ಮೇಲೆ ಆಟೋ ಚಾಲಕ ಶೇಕ್ ಮುಕ್ಡೂಮ್‌ ಅತ್ಯಾಚಾರ ಎಸಗಿದ್ದ. ಘಟನೆಯು ಜೈನೂರ್‌ನಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಕೋಮು ಉದ್ವಿಗ್ನತೆ ಮತ್ತು ಗಲಭೆಯನ್ನು ಹುಟ್ಟುಹಾಕಿತ್ತು. ಹಿಂಸಾಚಾರ ಪ್ರಕರಣದಲ್ಲಿ 30ಕ್ಕೂ ಹೆಚ್ಚು ಮಂದಿ ವಿರುದ್ಧ ಕೂಡ ಪ್ರಕರಣ ದಾಖಲಾಗಿದೆ.

ಕಳೆದ ವರ್ಷ ಆಗಸ್ಟ್‌ 31ರಂದು ಆಟೋ ಸವಾರಿ ನೆಪದಲ್ಲಿ 45 ವರ್ಷದ ಬುಡಕಟ್ಟು ಮಹಿಳೆಯನ್ನು ಕರೆದೊಯ್ದಿದ್ದ ಆರೋಪಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ಅಲ್ಲದೆ, ಕೊಲೆಗೂ ಯತ್ನಿಸಿಲ್ಲ ಎಂದು ಆರೋಪಿಸಲಾಗಿದೆ. ರಸ್ತೆ ಬದಿಯಲ್ಲಿ ಪ್ರಜ್ಞಾಹೀನಳಾಗಿ ಸಂತ್ರಸ್ತೆ ಪತ್ತೆಯಾಗಿದ್ದರು. ಆರಂಭದಲ್ಲಿ ಆಕೆಗೆ ಅಪಘಾತ ನಡೆದಿರಬಹುದು, ಇದೊಂದು ಹಿಟ್‌ ಅಂಡ್‌ ಅನ್ ಪ್ರಕರಣವೆಂದು ಭಾವಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂತ್ರಸ್ತೆಯನ್ನು ಆಸ್ತಪ್ರೆಗೆ ದಾಖಲಿಸಲಾಗಿತ್ತು. ಆಕೆಗೆ ಪ್ರಜ್ಞೆ ಬಂದ ಬಳಿಕ, ಆಕೆ ತನ್ನ ಮೇಲಾದ ಕೃತ್ಯದ ಬಗ್ಗೆ ಹೇಳಿಕೊಂಡಿದ್ದರು. ತನ್ನ ಮೇಲೆ ಅತ್ಯಾಚಾರ ಎಸಗಿದ ಆರೋಪಿ ತನ್ನ ತಲೆಗೆ ಕೋಲಿನಿಂದ ಹೊಡೆದಿದ್ದ. ಪ್ರಜ್ಞೆ ತಪ್ಪಿದ ತನ್ನನ್ನು ಸತ್ತಿದ್ದಾಳೆಂದು ಭಾವಿಸಿ, ಅಫಘಾತವೆಂದು ಬಿಂಬಿಸಲು ರಸ್ತೆ ಬದಿ ಬಿಟ್ಟು ಹೋಗಿದ್ದನೆಂದು ವಿವರಿಸಿದ್ದರು.

ಬಳಿಕ, 2024ರ ಸೆಪ್ಟೆಂಬರ್ 1ರಂದು ಮಹಿಳೆಯ ಕಿರಿಯ ಸಹೋದರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ಆರೋಪಿ ವಿರುದ್ಧ ಅತ್ಯಾಚಾರ ಮತ್ತು ಕೊಲೆಯತ್ನ ಹಾಗೂ ಜಾತಿದೌರ್ಜನ್ಯದ ಆರೋಪದ ಮೇಲೆ ಐಪಿಸಿ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯನ್ನು ಅಪರಾಧಿ ಎಂದು ಘೋಷಿಸಿದೆ. ಜೀವಾವಧಿ ಶಿಕ್ಷೆ ವಿಧಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...