ತಮಿಳುನಾಡು ಸರ್ಕಾರಿ ಬಸ್‌ನಿಂದ ಬೇರ್ಪಟ್ಟ ಆಕ್ಸಲ್; ತಪ್ಪಿದ ಭಾರೀ ಅನಾಹುತ

Date:

ಚಲಿಸುತ್ತಿದ್ದ ಟಿಎಸ್‌ಎಸ್‌ಟಿಸಿ ಬಸ್‌ನ ಹಿಂಭಾಗದ ಆಕ್ಸಲ್ ಬೇರ್ಪಟ್ಟಿದ್ದು, ಬಸ್‌ ಕುಸಿದು ಬಿದ್ದಿರುವ ಘಟನೆ ತಮಿಳುನಾಡಿನ ತೆಂಕಾಸಿ ಜಿಲ್ಲೆಯ ಇಡೈಕಲ್ ಬಳಿ ಶುಕ್ರವಾರ ನಡೆದಿದೆ.

ಇಡೈಕಲ್‌ ಬಳಿ ಹಾದುಹೋಗಿರುವ ತಿರುಮಂಗಲಂ-ಕೊಲ್ಲಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್‌ ಮಧುರೈನಿಂದ ಕುಟ್ರಾಲಂಗೆ ತೆರಳುತ್ತಿದ್ಧಾಗ ಘಟನೆ ನಡೆದಿದೆ. ತಮಿಳುನಾಡಿನ ಸರ್ಕಾರಿ ಬಸ್‌ನ ಹಿಂಭಾಗದ ಆಕ್ಸಲ್ ಬೇರ್ಪಟ್ಟಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ. ಬಸ್‌ನಲ್ಲಿ 87 ಪ್ರಯಾಣಿಕರಿದ್ದರು, ಅವರಲ್ಲಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಅಪಘಾತಕ್ಕೀಡಾದ ಬಸ್‌ ವಿರುಧುನಗರ ಜಿಲ್ಲೆಯ ಶ್ರೀವಿಲ್ಲಿಪುತೂರು ಡಿಪೋಗೆ ಸೇರಿದ್ದಾಗಿದೆ. ಜೋಡಿಯಾಗಿರುವ ಟೈರ್‌ಗಳು ಸೇರಿದಂತೆ ಸಂಪೂರ್ಣ ಹಿಂಭಾಗದ ಆಕ್ಸಲ್ ಇದ್ದಕ್ಕಿದ್ದಂತೆ ಬಸ್‌ನಿಂದ ಬೇರ್ಪಟ್ಟಿದೆ. ಘಟನೆಯು ಪ್ರಯಾಣಿಕರಲ್ಲಿ ಭಯಭೀತಿ ಮೂಡಿಸಿತ್ತು. ಬಸ್‌ನ ಚಕ್ರಗಳು ಅದುರುತ್ತಿದ್ದುದ್ದನ್ನು ಅರಿತ ಚಾಲಕ ತಕ್ಷಣವೇ ಬಸ್‌ಅನ್ನು ನಿಧಾನಗೊಳಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಆಕ್ಸಲ್ ಕಳಚಿಕೊಂಡಿದೆ ಎಂದು ವರದಿಯಾಗಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಲ್ವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದವರಿಗೆ ಯಾವುದೇ ಹಾನಿಯಾಗಿಲ್ಲ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...