ಉತ್ತರ ಪ್ರದೇಶ | ರಾಮಮಂದಿರ ಸುತ್ತ 15 ಕಿ.ಮೀ ವ್ಯಾಪ್ತಿಯಲ್ಲಿ ಮಾಂಸಾಹಾರ ವಿತರಣೆ ನಿಷೇಧ

Date:

ಅಯೋಧ್ಯೆಯ ರಾಮ ಮಂದಿರದ ಸುತ್ತ 15 ಕಿಲೋಮೀಟರ್ ವ್ಯಾಪ್ತಿಯಲ್ಲಿ ಮಾಂಸಾಹಾರ ವಿತರಣೆಯನ್ನು ಅಯೋಧ್ಯೆ ಜಿಲ್ಲಾ ಆಡಳಿತ ಸಂಪೂರ್ಣವಾಗಿ ನಿಷೇಧಿಸಿದೆ. ಅಯೋಧ್ಯೆ ಪಟ್ಟಣದ ‘ಪಾಂಚ್ ಕೋಸಿ ಪರಿಕ್ರಮಾ’ ವ್ಯಾಪ್ತಿಯಲ್ಲಿ ಆಹಾರ ವಿತರಣಾ ಸಂಸ್ಥೆಗಳು ಮಾಂಸಾಹಾರ ಪೂರೈಸುತ್ತಿವೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಅಯೋಧ್ಯೆ ಪಟ್ಟಣದ ಹೋಟೆಲ್‌ಗಳು ಮತ್ತು ಹೋಮ್‌ಸ್ಟೇಗಳಿಗೆ ಎಚ್ಚರಿಕೆ ನೀಡಲಾಗಿದ್ದು, ಅತಿಥಿಗಳಿಗೆ ಮಾಂಸಾಹಾರ ಹಾಗೂ ಮದ್ಯ ವಿತರಿಸದಂತೆ ಸ್ಪಷ್ಟ ಸೂಚನೆ ನೀಡಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಅಯೋಧ್ಯೆ ಸಹಾಯಕ ಆಹಾರ ಆಯುಕ್ತ ಮಾಣಿಕ್ ಚಂದ್ರ ಸಿಂಗ್ ಅವರು, “ಈಗಾಗಲೇ ನಿಷೇಧ ಜಾರಿಯಲ್ಲಿದ್ದರೂ, ಪ್ರವಾಸಿಗಳಿಗೆ ಆನ್‌ಲೈನ್ ಆರ್ಡರ್ ಮೂಲಕ ಮಾಂಸಾಹಾರ ಪೂರೈಕೆ ನಡೆಯುತ್ತಿದೆ ಎಂಬ ದೂರುಗಳು ಬಂದಿವೆ. ಇದನ್ನು ಗಮನಿಸಿ ಆನ್‌ಲೈನ್ ಮಾಂಸಾಹಾರ ವಿತರಣೆಯನ್ನೂ ನಿಷೇಧಿಸಲಾಗಿದೆ,” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್‌; ಸರ್ಕಾರದ ಹೆಂಗರುಳಿನ ಯೋಜನೆಗೆ ಬೇಕಿದೆ ಅಧಿಕಾರಿಗಳ ಬದ್ಧತೆ

“ಎಲ್ಲ ಹೋಟೆಲ್‌ಗಳು, ಅಂಗಡಿಮಾಲೀಕರು ಹಾಗೂ ಆಹಾರ ವಿತರಣಾ ಕಂಪನಿಗಳಿಗೆ ನಿಷೇಧ ಆದೇಶದ ಬಗ್ಗೆ ಮಾಹಿತಿ ನೀಡಲಾಗಿದೆ. ಆದೇಶದ ಕಟ್ಟುನಿಟ್ಟಾದ ಅನುಸರಣೆಯನ್ನು ಖಚಿತಪಡಿಸಲು ಆಡಳಿತದಿಂದ ನಿರಂತರ ನಿಗಾ ವಹಿಸಲಾಗುವುದು,” ಎಂದು ಸಹಾಯಕ ಆಹಾರ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

ಇನ್ನೊಂದೆಡೆ, ಅಯೋಧ್ಯೆ ಮಹಾನಗರ ಪಾಲಿಕೆ (ಎಎಂಸಿ) ಕಳೆದ ಮೇ ತಿಂಗಳಲ್ಲಿ ರಾಮಪಥ ಪ್ರದೇಶದಲ್ಲಿ ಅಂದರೆ ರಾಮ ಮಂದಿರದಿಂದ 14 ಕಿಲೋಮೀಟರ್ ವ್ಯಾಪ್ತಿಯಲ್ಲಿ ಮದ್ಯ ಹಾಗೂ ಮಾಂಸ ಮಾರಾಟ ನಿಷೇಧಿಸಿ ನಿಲುವಳಿ ಆಂಗೀಕರಿಸಿದ ನಡುವೆಯೂ 24ಕ್ಕೂ ಹೆಚ್ಚು ಲೈಸನ್ಸ್ ಪಡೆದ ಮದ್ಯದ ಅಂಗಡಿಗಳು ರಾಮಪಥದಲ್ಲಿ ಕಾರ್ಯನಿರ್ವಹಿಸುತ್ತಿರುವುದು ಗಮನಾರ್ಹವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...