ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರಗಳಲ್ಲಿ ಕೆಲವೊಂದು ಸುತ್ತುಗಳಲ್ಲಿ ಹಿನ್ನಡೆ ಅನುಭವಿಸಿದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹರಿಹಾಯ್ದಿದ್ದಾರೆ.
“ಈ ಅಂಕಿಅಂಶಗಳು ಹಾಲಿ ಪ್ರಧಾನಿಯವರನ್ನು ಮಾಜಿ ಪ್ರಧಾನಿಯನ್ನಾಗಿಸುವ ಸೂಚನೆಯಾಗಿದೆ. ಇದು ಇವರ ನೈತಿಕ ಹಾಗೂ ರಾಜಕೀಯ ಸೋಲು. ಪ್ರಧಾನಿಯವರು ತಮ್ಮ ಚುನಾವಣಾ ಪ್ರಚಾರದಲ್ಲಿ ಟ್ರೈಲರ್ ನೋಡಿ ಎಂದು ಹೇಳುತ್ತಿದ್ದರು. ಈಗ ಅವರ ಕ್ಷೇತ್ರದಲ್ಲಿಯೇ ತಮ್ಮ ಟ್ರೈಲರ್ ನೋಡುತ್ತಿದ್ದಾರೆ” ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 90 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಣದ ಹರಿವು, ಆತ್ಮಹತ್ಯೆಗಳು, ಅಧಿಕಾರಸ್ಥರು ಮತ್ತು ಬಡವರು
ಉತ್ತರ ಪ್ರದೇಶದ ಒಟ್ಟು 80 ಸ್ಥಾನಗಳಲ್ಲಿ ಸಮಾಜವಾದಿ ಪಕ್ಷ 36, ಬಿಜೆಪಿ 33, ಕಾಂಗ್ರೆಸ್ 8, ಆರ್‌ಎಲ್‌ಡಿ 2 ಹಾಗೂ ಪಕ್ಷೇತರ ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾರಿ ಹಿನ್ನಡೆಯನ್ನು ಸಾಧಿಸಿದ್ದು, ಕಾಂಗ್ರೆಸ್‌ನ ಕಿಶೋರಿ ಲಾಲ್ 44 ಸಾವಿರಗಳಿಗಿಂತ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಸಮಾಜವಾದಿ ಪಕ್ಷದಿಂದ ಅಖಿಲೇಶ್ ಯಾದವ್, ಡಿಂಪಲ್ ಯಾದವ್ ಸೇರಿದಂತೆ ಹಲವು ನಾಯಕರು ಭಾರಿ ಮುನ್ನಡೆಯಲ್ಲಿದ್ದಾರೆ.





