ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ಕೈಗೆ ಗನ್‌ ಕೊಡಬೇಕು ಎಂದಿದ್ದ ಲೇಖಕ ಬದ್ರಿ ಶೇಷಾದ್ರಿ ಬಂಧನ

Date:

  • ಮಣಿಪುರದಲ್ಲಿ ಕೊಲೆಗಳು ನಡೆಯುವುದು ಸಾಮಾನ್ಯ ಎಂದಿದ್ದ ಶೇಷಾದ್ರಿ
  • ಸಿಜೆಐ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಲೇಖಕ

ಮಣಿಪುರ ಹಿಂಸಾಚಾರ ಮತ್ತು ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಖ್ಯಾತ ರಾಜಕೀಯ ವಿಶ್ಲೇಷಕ ಮತ್ತು ಲೇಖಕ ಬದ್ರಿ ಶೇಷಾದ್ರಿ ಅವರನ್ನು ತಮಿಳುನಾಡು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಶೇಷಾದ್ರಿ ಅವರ ಹೇಳಿಕೆಯನ್ನು ವಿರೋಧಿಸಿ‌ ತಮಿಳುನಾಡಿದ ಪೆರಂಬದೂರು ಜಿಲ್ಲೆಯ ಕಣ್ಣಂ ಮೂಲದ ವಕೀಲ ಕವಿಯರಸು ಎಂಬುವವರು ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ಐಪಿಸಿ ಸೆಕ್ಷನ್‌ 153, 153 A, 505(1)(B) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶೇಷಾದ್ರಿಯವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇತ್ತೀಚೆಗೆ ಯುಟ್ಯೂಬ್‌ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದ ಶೇಷಾದ್ರಿ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತು ಮಾತನಾಡಿದ್ದರು. “ಮಣಿಪುರ ಕಡಿದಾದ ಬೆಟ್ಟಗಳಿಂದ ಕೂಡಿದ ಇಕ್ಕಟ್ಟಿನ ಭೂ ಪ್ರದೇಶ. ಅಲ್ಲಿ ಸಾಮಾನ್ಯವಾಗಿಯೇ ಕೊಲೆಗಳು ನಡೆಯುತ್ತವೆ, ಅದನ್ನು ತಪ್ಪಿಸಲು ಸಾಧ್ಯವಿಲ್ಲ” ಎಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದುವರಿದು ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ಅವರ ಬಗ್ಗೆ ಮಾತನಾಡಿದ್ದ ಶೇಷಾದ್ರಿ, “ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ನೀವು ನಿಯಂತ್ರಿಸದಿದ್ದರೆ, ನಾವೇ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಹಾಗಿದ್ದರೆ ಚಂದ್ರಚೂಡ್‌ ಅವರ ಕೈಗೆ ಒಂದು ಬಂದೂಕನ್ನು ಕೊಟ್ಟು ಮಣಿಪುರಕ್ಕೆ ಕಳಿಸಬೇಕು. ಮಣಿಪುರದಲ್ಲಿ ಅವರು ಶಾಂತಿಯನ್ನು ಪುನಃಸ್ಥಾಪಿಸುತ್ತಾರೆಯೇ ಎಂಬುದನ್ನು ನೋಡಬೇಕು” ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದರು.

ಶೇಷಾದ್ರಿ ಅವರ ಬಂಧನವನ್ನು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ವಿರೋಧಿಸಿದ್ದು, “ಭ್ರಷ್ಟ ಡಿಎಂಕೆ ಸರ್ಕಾರ ಜನಸಾಮಾನ್ಯರ ವಾದವನ್ನು ಎದುರಿಸುವ ಧೈರ್ಯ ತೋರದೆ ಬಂಧಿಸುತ್ತಿದೆ. ತಮಿಳುನಾಡು ಪೊಲೀಸರು ಸರ್ಕಾರದ ಸೇಡಿನ ರಾಜಕೀಯಕ್ಕೆ ದಾಳವಾಗಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರದ ಈ ನಡೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ” ಎಂದು ಟ್ವೀಟ್‌ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...