ಪ್ರತಾಪ್ ಸಿಂಹ ಪಾಸ್‌ನಲ್ಲಿ ಸಂಸತ್ತಿಗೆ ನುಗ್ಗಿದ್ದ ಇಬ್ಬರಿಗೆ ಜಾಮೀನು

Date:

2023ರ ಡಿಸೆಂಬರ್ 13ರಂದು ಅಂದಿನ ಸಂಸದ (ಈಗ ಮಾಜಿ) ಪ್ರತಾಪ್ ಸಿಂಹ ಅವರಿಂದ ಪಡೆದಿದ್ದ ಪಾಸ್‌ಗಳನ್ನು ಬಳಸಿ ಸಂಸತ್ತಿಗೆ ನುಗ್ಗಿ, ಕಲಾಪದ ವೇಳೆ ದಾಂಧಲೆ ನಡೆಸಿ ಭಯದ ವಾತಾವರಣ ಸೃಷ್ಟಿಸಿದ್ದ ಇಬ್ಬರಿಗೆ ಇಬ್ಬರಿಗೆ ದೆಹಲಿ ಹೈಕೋರ್ಟ್‌ ಜಾಮೀನು ನೀಡಿದೆ.

ಆರೋಪಿಗಳಾದ ನೀಲಂ ಆಜಾದ್ ಮತ್ತು ಮಹೇಶ್ ಕುಮಾವತ್ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಾಲಯವು ಇಬ್ಬರಿಗೂ ಶರತ್ತುಬದ್ದ ಜಾಮೀನು ನೀಡಿ ಆದೇಶ ಹೊರಡಿಸಿದೆ.

2001ರ ಸಂಸತ್ ಭಯೋತ್ಪಾದಕ ದಾಳಿಯ 22ನೇ ವಾರ್ಷಿಕೋತ್ಸವದ ದಿನ ಸಂಸತ್ತಿನಲ್ಲಿ ಕಲಾಪ ನಡೆಯುವಾಗ ಸಂಸತ್ತಿಗೆ ನುಗ್ಗಿ, ಈ ಇಬ್ಬರೂ ದಾಂಧಲೆ ನಡೆಸಿದ್ದರು. ಬಣ್ಣದ ಬಾಂಬುಗಳನ್ನು ಸಿಡಿಸಿ, ಆತಂಕ ಸೃಷ್ಟಿಸಿದ್ದರು. ಇಬ್ಬರನ್ನೂ ಅಂದೇ ಬಂಧಿಸಲಾಗಿತ್ತು. ಅಂದಿನಿಂದ ಈವರೆಗೆ ಇಬ್ಬರೂ ಜೈಲಿನಲ್ಲಿಯೇ ಇದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ, ಇಬ್ಬರಿಗೂ ಜಾಮೀನು ದೊರೆತಿದೆ. ಆರೋಪಿಗಳಿಗೆ ಹೈಕೋರ್ಟ್ ಹಲವು ಷರತ್ತುಗಳನ್ನು ವಿಧಿಸಿದೆ. ಅವುಳಲ್ಲಿ, ಇಬ್ಬರೂ ತನಿಖೆ ಅಥವಾ ವಿಚಾರಣಾ ಪ್ರಕ್ರಿಯೆಗಳ ಮೇಲೆ ಪ್ರಭಾವ ಬೀರಬಾರದು. ಘಟನೆಗೆ ಸಂಬಂಧಿಸಿದಂತೆ ಯಾವುದೇ ಪತ್ರಿಕಾಗೋಷ್ಠಿ, ಮಾಧ್ಯಮ ಸಂದರ್ಶನ ಹಾಗೂ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಯಾವುದೇ ಪೋಸ್ಟ್‌ಗಳನ್ನು ಹಂಚಿಕೊಳ್ಳಬಾರದು ಎಂದು ನಿರ್ದೇಶಿಸಿದೆ.

ಈ ಲೇಖನ ಓದಿದ್ದೀರಾ?: ಬಿಹಾರದಲ್ಲಿ ಮತದಾರ ಪಟ್ಟಿ ಪರಿಷ್ಕರಣೆ: ‘ಎನ್‌ಆರ್‌ಸಿ’ಗಿಂತಲೂ ಹೆಚ್ಚು ಅಪಾಯಕಾರಿ

ಮಾತ್ರವಲ್ಲದೆ, ಪ್ರತಿ ಸೋಮವಾರ, ಬುಧವಾರ ಹಾಗೂ ಶುಕ್ರವಾರ ಬೆಳಿಗ್ಗೆ 10:00 ಗಂಟೆಗೆ ತಮ್ಮ ನಿವಾಸದ ಬಳಿಯ ಪೊಲೀಸ್ ಠಾಣೆಯಲ್ಲಿ ವರದಿ ಮಾಡಿಕೊಳ್ಳಬೇಕು. ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ, ದೆಹಲಿ ಎನ್‌ಸಿಆರ್‌ ವ್ಯಾಪ್ತಿಯಿಂದ ಹೊರಹೋಗಬಾರದು ಎಂದು ಹೇಳಿದೆ.

ಪ್ರಕರಣದ ಇತರ ಆರೋಪಿಗಳಾದ ಸಾಗರ್ ಶರ್ಮಾ, ಮನೋರಂಜನ್ ಡಿ, ಲಲಿತ್ ಝಾ ಹಾಗೂ ಮಹೇಶ್ ಕುಮಾವತ್ ಅವರು ಈಗಾಗಲೇ ಜಾಮೀನು ಪಡೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...